admin

ಧರ್ಮಸ್ಥಳ ಕೇಸ್: ಮಾಧ್ಯಮಗಳ ಮೇಲಿನ ನಿರ್ಬಂಧ ರದ್ದುಗೊಳಿಸಿ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಧರ್ಮಸ್ಥಳದಲ್ಲಿನ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣ ಸಂಬಂಧ ಮಾಧ್ಯಮಗಳ ಮೇಲಿನ ನಿರ್ಬಂಧವನ್ನು ರದ್ದುಗೊಳಿಸಿ ಆದೇಶಿಸಿದೆ. ಧರ್ಮಸ್ಥಳದಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್.ಡಿ ಅವರು ಮಾಧ್ಯಮಗಳ ವಿರುದ್ಧ ಪ್ರತಿಬಂಧಕಾದೇಶ ತಂದಿದ್ದರು. ಇಂದು ಈ ಪ್ರತಿಬಂಧಕಾದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ದಕ್ಷಿಣ ಕನ್ನಡದ ಕುಡ್ಲ ರ್ಯಾಂಪೇಜ್ ಪ್ರಧಾನ ಸಂಪಾದಕ ಅಜಯ್…

Read More

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ : ಅತ್ಯಾಚಾರ ಕೇಸ್ ನಲ್ಲಿ ದೋಷಿ ಎಂದು ತೀರ್ಪು ನೀಡಿದ ಕೋರ್ಟ್

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್ ನಗರದ ಮಹಿಳೆಯ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದ್ದು, ನ್ಯಾ. ಸಂತೋಷ್ ಗಜಾನನ ಭಟ್ ಕೆ ಆರ್ ನಗರ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದೆ. 4 ಕೇಸ್ ಗಳಿಗೆ ಸಂಬಂಧಿಸಿದಂತೆ ಇಂದು ಕೋರ್ಟ್ ಮೊದಲನೇ ಕೇಸಿಗೆ ತೀರ್ಪು ಇಂದು ಪ್ರಕಟಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ…

Read More

ಮಂಗಳೂರು: ಅಮೋನಿಯಾ ಸೋರಿಕೆ- ನಾಲ್ವರು ಗಂಭೀರ, 25ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥ

ಸುರತ್ಕಲ್: ಬೈಕಂಪಾಡಿ ಕೈಗಾರಿಕ ಪ್ರದೇಶದಲ್ಲಿರುವ ಕೈಗಾರಿಕೆಯೊಂದರ ಸ್ಥಾವರದಲ್ಲಿ ಅಮೋನಿಯಾ ಸೋರಿಕೆಯಿಂದ ಉಸಿರಾಟದ ಸಮಸ್ಯೆಗೆ ತುತ್ತಾಗಿ 25ಕ್ಕೂ ಅಧಿಕ ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಇವರಲ್ಲಿ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕಂಪೆನಿಯಲ್ಲಿ 200ಕ್ಕೂ ಅಧಿಕ ಕಾರ್ಮಿಕರಿದ್ದು, ಪಾಳಿಯಲ್ಲಿ ಕೆಲಸ ನಡೆಯುತ್ತಿತ್ತು. ಗುರುವಾರ ಸಂಜೆ 4.30ರ ಸುಮಾರಿಗೆ ಸ್ಥಾವರದ ಒಳಗಿರುವ ಅಮೋನಿಯಾ ಸಾಗಾಟ ಪೈಪ್ ಒಂದರಲ್ಲಿ ಸೋರಿಕೆ ಕಂಡುಬಂತು. ಘಟಕದ ಸಮೀಪ…

Read More

ಮಂಗಳೂರಿನಲ್ಲಿ NIA ಕಚೇರಿ ಸ್ಥಾಪಿಸಲು ಗೃಹ ಸಚಿವರಿಗೆ ಸಂಸದ ಕ್ಯಾ.ಚೌಟ ಮನವಿ

ದೆಹಲಿ : ಹಿಂದೂ ಕಾರ್ಯಕರ್ತರ ಹತ್ಯೆ, ಡ್ರಗ್ಸ್ ಮಾಫಿಯಾ, ಭಟ್ಕಳ, ಕಾಸರಗೋಡು ಸೇರಿದಂತೆ ಕರಾವಳಿ ಭಾಗದಲ್ಲಿ ಉಗ್ರ ಚಟುವಟಿಕೆಯ ಸ್ಲೀಪರ್ ಸೆಲ್‌ಗಳ ಆತಂಕದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಆದಷ್ಟು ಬೇಗ ರಾಷ್ಟ್ರೀಯ ತನಿಖಾ ದಳ(NIA)ದ ಕಚೇರಿ ಸ್ಥಾಪಿಸಬೇಕೆಂದು ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ.ಬ್ರಿಜೇಶ್ ಚೌಟ ಮನವಿ ಸಲ್ಲಿಸಿದ್ದಾರೆ. ಗುರುವಾರ ಬೆಳಗ್ಗೆ ದೆಹಲಿಯಲ್ಲಿ ಸಚಿವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಮಂಗಳೂರು ತನ್ನ ಸೂಕ್ಷ್ಮ ಭೌಗೋಳಿಕ ಸ್ಥಾನದಿಂದಾಗಿ, ಮತ್ತು…

Read More

ಮಂಗಳೂರು: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ನಗರದ ಮಹಿಳಾ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಂಕನಾಡಿಯ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಉಬೇದುಲ್ಲಾ ಮತ್ತು ಹೊಯಿಗೆ ಬಜಾರ್ ನಿವಾಸಿ ದಾಮೋದರ ಎಂದು ಗುರುತಿಸಲಾಗಿದೆ. 2011ರ ಮಾರ್ಚ್ 14ರಂದು ನಗರದ ಹಂಪನಕಟ್ಟೆಯ ಲಾಡ್ಜ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಹಿಳಾ ಪೊಲೀಸರು ದಾಳಿ ನಡೆಸಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಪೈಕಿ ಮೂವರ ವಿಚಾರಣೆಯಾಗಿದ್ದು, ಅವರು ಪ್ರಕರಣದಿಂದ…

Read More

ಶವಗಳ ಹೂತಿಟ್ಟ ಪ್ರಕರಣ: 6ನೇ ಪಾಯಿಂಟ್ ನಲ್ಲಿ 12 ಮೂಳೆಗಳ ಜೊತೆಗೆ ಒಳಉಡುಪಿನ ತುಂಡು ಪತ್ತೆ.!

ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾನವನ ದೇಹದ 12 ಭಾಗಗಳ ಜೊತೆಗೆ ಒಳ ಉಡುಪಿನ ತುಂಡು ಪತ್ತೆಯಾಗಿದೆ ಎಂದು ವಿಶೇಷ ತನಿಖಾ ತಂಡ ಮಾಹಿತಿ ನೀಡಿದೆ. ದೂರುದಾರ ತೋರಿಸಿದ್ದ 6ನೇ ಪಾಯಿಂಟ್ ನಲ್ಲಿ ಇದೀಗ ಸರ್ಕಾರಿ ಪಂಚರಿಂದ ಸ್ಥಳ ಮಹಜರ್ ಪ್ರಕ್ರಿಯೆ ಆರಂಭವಾಗಲಿದ್ದು, ಮಹಜರ್ ನಲ್ಲಿ ಪೊಲೀಸ್ ಅಧಿಕಾರಿ, ಎಫ್ ಎಸ್ ಎಲ್ ತಜ್ಞರು, ಸ್ಥಳೀಯರು ಕೂಡ ಹಾಜರಿದ್ದಾರೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ತಲೆಬುರುಡೆ ಸೇರಿ 12 ಮೂಳೆಗಳು…

Read More

ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ನೇಮಕ

ಮಂಗಳೂರು: ದ.ಕ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ ರಾಜು ಕೆ. ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಈ ಮೊದಲು ಅಪರ ಜಿಲ್ಲಾಧಿಕಾರಿಯಾಗಿದ್ದ ಡಾ.ಜಿ. ಸಂತೋಷ್ ಕುಮಾರ್ ಅವರ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ರಾಜು ಕೆ.‌ ಅವರು ಸ್ಮಾರ್ಟ್ ಸಿಟಿ ಎಂಡಿ ಆಗಿದ್ದರು. ಉಡುಪಿ ಕಾಪು, ಬ್ರಹ್ಮಾವರ ಸಹಾಯಕ ಆಯುಕ್ತರಾಗಿ ಅವರು ಹೆಚ್ಚಿನ ಜವಾಬ್ದಾರಿ ನಿರ್ವಹಿಸಿದ್ದರು. ಮಂಗಳೂರು ಹಾಗೂ ಕುಂದಾಪುರ ಸಹಾಯಕ ಆಯುಕ್ತರಾಗಿದ್ದರು. ಅಲ್ಲದೆ ಇವರು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಸೇರಿದಂತೆ ಇತರ ಹುದ್ದೆಗಳನ್ನೂ ನಿಭಾಯಿಸಿದ್ದಾರೆ.

Read More

ನೂರಾರು ಶವ ಹೂತಿಟ್ಟ ಪ್ರಕರಣ; ಪಾಯಿಂಟ್ ನಂ. 6 ರಲ್ಲಿ ಅಸ್ಥಿಪಂಜರ ಅವಶೇಷ ಪತ್ತೆ…!

 ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊನೆಗೂ ಇದೀಗ ಎರಡು ಎಲಬುಗಳು ಸಿಕ್ಕಿವೆ. ಇಂದು ಅಧಿಕಾರಿಗಳು ದೂರುದಾರ ತೋರಿಸಿದ ಜಾಗದಲ್ಲಿ 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕಿವೆ ಎಂದು ಮಾಹಿತಿ ತಿಳಿದು ಬಂದಿದೆ. ಹೌದು 6ನೇ ಪಾಯಿಂಟ್ ನಲ್ಲಿ ಅಸ್ತಿಪಂಜರದ ಮೂಳೆಗಳು ಪತ್ತೆಯಾಗಿವೆ. ಮೂಳೆಗಳು ಎಸ್ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 6ನೇ ಪಾಯಿಂಟ್ ನಲ್ಲಿ ಎರಡು ಎಲುಬುಗಳು ಸಿಕ್ಕ ಮಾಹಿತಿಯನ್ನು ಎಸ್ಐಟಿ ಹಂಚಿಕೊಂಡಿದೆ. ಸಂಪೂರ್ಣವಾದ ಅಸ್ಥಿಪಂಜರ ಇನ್ನು ಸಿಕ್ಕಿಲ್ಲ ಆದರೆ ಎರಡು ಮೂಳೆಗಳು ಮಾತ್ರ ಸಿಕ್ಕಿವೆ….

Read More

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣ : ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್‌ ದೋಷಮುಕ್ತಿ

ಮುಂಬೈ: ನಾಸಿಕ್‌ ಸಮೀಪ ಮಾಲೇಗಾಂವ್‌ನಲ್ಲಿ 2008ರಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ 7 ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತಿಗೊಳಿಸಿದೆ.ಪ್ರಕರಣ ಸಂಭವಿಸಿದ 17 ವರ್ಷಗಳ ಬಳಿಕ ತೀರ್ಪು ನೀಡುವ ಸಂದರ್ಭದಲ್ಲಿ ಎನ್‍ಐಎ ವಿಶೇಷ ಕೋರ್ಟ್ ಈ ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್ ಮೇ 8ರಂದು ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು ತೀರ್ಪು ಪ್ರಕಟಿಸಲು…

Read More

ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ಸಮುದ್ರಪಾಲು

ಭಟ್ಕಳ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ. ತೆಂಗಿನಗುಂಡಿಯ ಬಂದರಿನಿಂದ ಮಹಾಸತಿ ಗಿಲ್ ನೆಟ್ ದೋಣಿಯಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಮನೋಹರ ಈರಯ್ಯ ಮೊಗೇರ, ರಾಮಯ್ಯ ಮಾಸ್ತಿ ಖಾರ್ವಿ ಎನ್ನುವವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ ನಾಲ್ವರು ನಾಪತ್ತೆಯಾಗಿದ್ದಾರೆ. ಇವರು ತೆಂಗಿನಗುಂಡಿಯ ಬಂದರಿನಿಂದ ಮಹಾಸತಿ ಗಿಲ್ ನೆಟ್ ದೋಣಿಯಲ್ಲಿ ಆರು ಜನ ಮೀನುಗಾರಿಕೆಗೆ ತೆರಳಿದ್ದರು. ಕರಾವಳಿ ಕಾವಲು ಪಡೆ ಸಿಬ್ಬಂದಿ, ಮೀನುಗಾರರು, ಪೊಲೀಸ್ ಇಲಾಖೆಯ ಸಿಬ್ಬಂದಿ ನಾಪತ್ತೆಯಾದವರಿಗೆ…

Read More