ಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದು, ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ಇದ್ದರೆ 0824-2005301ಕ್ಕೆ ಕರೆ ಮಾಡಿ ತಿಳಿಸುವಂತೆ ಮನವಿ ಮಾಡಿದ್ದಾರೆ. ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ತಂಡ ದೂರುದಾರ ಗುರುತಿಸಿದ 13 ಸ್ಥಳಗಳಲ್ಲಿ ಒಂದೊಂದೇ ಜಾಗಗಳನ್ನು ಅಗೆದು ಶೋಧ ನಡೆಸುತ್ತಿದೆ. ದೂರುದಾರ ಸೂಚಿಸಿದ 5 ಸ್ಪಾಟ್‌ಗಳಲ್ಲಿ ಈಗಾಗಲೇ ಕಳೇಬರ ಹುಡುಕಾಟ ಮುಕ್ತಾಯವಾಗಿದೆ. ಆದರೆ ಇಲ್ಲಿ ಯಾವುದೇ ಕಳೇಬರ ಪತ್ತೆಯಾಗಿಲ್ಲ. ಈ…

