admin

ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿ ಶ್ರೀಕೃಷ್ಣರಾವ್ ಜಾಮೀನು ಅರ್ಜಿ ತಿರಸ್ಕೃತ

ಪುತ್ತೂರು: ಸಹಪಾಠಿಯನ್ನು ವಿವಾಹವಾಗುವುದಾಗಿ ನಂಬಿಸಿ ಗರ್ಭಿಣಿಯಾಗಿಸಿ ಬಳಿಕ ಮದುವೆಯಾಗದೆ ವಂಚಿಸಿದ ಪ್ರಕರಣದಲ್ಲಿ ಬಂಧಿತನಾಗಿರುವ ಬಿಜೆಪಿ ಮುಖಂಡ ಪಿ.ಜಿ. ಜಗನ್ನಿವಾಸ್ ರಾವ್ ಪುತ್ರ ಶ್ರೀಕೃಷ್ಣ ಜೆ. ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಮಂಗಳೂರು 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿ ಆದೇಶಿಸಿದೆ. ಆರೋಪಿ ಶ್ರೀಕೃಷ್ಣರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಶುಕ್ರವಾರ ತನಿಖೆಗೆತ್ತಿಕೊಂಡ ನ್ಯಾಯಾಲಯವು ವಾದ-ವಿವಾದವನ್ನು ಆಲಿಸಿ ತನ್ನ ಅಂತಿಮ ತೀರ್ಪನ್ನು ಪ್ರಕಟಿಸಿದ್ದು ಜಾಮೀನು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಆರೋಪಿ ಶ್ರೀಕೃಷ್ಣರಾವ್…

Read More

ದ.ಕ.ಜಿಲ್ಲೆಯಲ್ಲಿ ಮರಳು ಖರೀದಿ, ಸಾಗಾಟದ ಹೊಸ ಆ್ಯಪ್ ಚಾಲನೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಾನ್-ಸಿಆರ್‌ಝಡ್ ಪ್ರದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‌ಗಳಲ್ಲಿನ ಮರಳು ದಾಸ್ತಾನನ್ನು ಸಾರ್ವಜನಿಕರಿಗೆ, ಅಭಿವೃದ್ಧಿ ಕಾಮಗಾರಿಗಳಿಗೆ ಡಿಕೆ ಸ್ಯಾಂಡ್ ಬಝಾರ್ ಆ್ಯಪ್ ಮೂಲಕ ಪೂರೈಸಲು ಮರಳು ಉಸ್ತುವಾರಿಯ ಜಿಲ್ಲಾ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಮರಳನ್ನು ಸಾಗಾಟ ಮಾಡಲು ಇಚ್ಚಿಸುವವರು ತಮ್ಮ ವಾಹನವನ್ನು ಜಿಲ್ಲಾ ವ್ಯಾಪ್ತಿಯಲ್ಲಿ ಅಭಿವೃದ್ಧಿಪಡಿಸಿ ರುವ DK SAND BAZAAR APPನಲ್ಲಿ ನೋಂದಾಯಿಸಬಹುದು. 15 ಮರಳು ಬ್ಲಾಕ್‌ಗಳಲ್ಲಿ 3,30,405 ಮೆ.ಟನ್ ಪರಿಸರ ವಿಮೋಚನಾ ಪತ್ರದಲ್ಲಿ ಮರಳು ಗಣಿಗಾರಿಕೆ ಮಾಡಲು ಲಭ್ಯವಿದ್ದು, ಪರಿಸರ ವಿಮೋಚನಾ ಪತ್ರದನ್ವಯ ಪ್ರತಿ…

Read More

ಶವಗಳ ಹೂತಿಟ್ಟ ಕೇಸ್ : ಧರ್ಮಸ್ಥಳ ಠಾಣೆಗೆ ಆಗಮಿಸಿದ SIT ತಂಡ – ಇಂದಿನಿಂದ `SIT’ ತನಿಖೆ ಆರಂಭ

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದೇನೆ ಎಂದು ಅನಾಮಿಕ ವ್ಯಕ್ತಿ ಕೊಟ್ಟ ದೂರಿನ ತನಿಖೆಯನ್ನು ಎಸ್ಐಟಿ (SIT) ಇಂದಿನಿಂದ ನಡೆಸಲಿದೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವ ಪ್ರಕರಣದ ತನಿಖೆಗೆ ಇಂದು ಎಸ್ಐಟಿ ಅಧಿಕಾರಿಗಳ ತಂಡ ಧರ್ಮಸ್ಥಳಕ್ಕೆ ತೆರಳಿದ್ದು, ಇಂದಿನಿಂದ ತನಿಖೆ ನಡೆಸಲಿದೆ. ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡವು ಬೆಳ್ತಂಗಡಿಯಲ್ಲಿ ಕಚೇರಿ ತೆರೆಯಲಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಕ್ವಾಟ್ರಸ್ನಲ್ಲಿ ಎಸ್ಐಟಿ ಕಚೇರಿ ಆರಂಭಿಸಲಿದೆ ಎನ್ನಲಾಗಿದೆ. ಕರ್ನಾಟಕ ರಾಜ್ಯ…

Read More

ನಾಪತ್ತೆಯಾಗಿದ್ದ ಸರ್ಕಾರಿ ಆಂಬ್ಯುಲೆನ್ಸ್ ಚಾಲಕನ ಶವ ಪತ್ತೆ!!

ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್‌ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ. ಈಶ್ವ‌ರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ ಶವವನ್ನು ಮೇಲಕ್ಕೆ ಎತ್ತಿದ್ದಾರೆ ಅನ್ನುವುದು ವಿಶೇಷ. ಈಶ್ವರ್ ಮಲ್ಪೆ ಜೊತೆಗೆ ಸುಳ್ಯದ ಪ್ರಗತಿ ಆಂಬ್ಯುಲೆನ್ಸ್‌ ಚಾಲಕ ಅಚ್ಚು ಪ್ರಗತಿ ಸೇರಿದಂತೆ ಸುಳ್ಯ ತಾಲೂಕು ಆಂಬ್ಯುಲೆನ್ಸ್ ಚಾಲಕ-ಮಾಲಕರು ಕೂಡ ಪಾಲ್ಗೊಂಡಿದ್ದರು.

Read More

ಲಾರಿ-ಕಾರು ನಡುವೆ ಭೀಕರ ಅಪಘಾತ- ಕಾರಿನಲ್ಲಿದ್ದ ನಾಲ್ವರೂ ಸಾವು

ಸುಳ್ಯ: ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿರುವ ಘಟನೆ ಸಂಪಾಜೆಯ ಕೊಯನಾಡಿನಲ್ಲಿ ನಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಮಂಗಳೂರು ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಲಾರಿಗೆ ಮಡಿಕೇರಿಯಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ. ಅಪಘಾತಕ್ಕೊಳಗಾದ ಕಾರು ಕೊಡಗು ಜಿಲ್ಲೆ ಗೋಣಿಕೊಪ್ಪ ಮೂಲದ್ದೆಂದು ತಿಳಿದು ಬಂದಿದ್ದು, ಮೃತಪಟ್ಟವರನ್ನು ನಿಹಾದ್, ರಿಷಾನ್,…

Read More

ಬಂಟ್ವಾಳ: ರೈಲಿನಡಿಗೆ ಬಿದ್ದು ಯುವಕ ಆತ್ಮಹತ್ಯೆ

ಬಂಟ್ವಾಳ: ಬಿ.ಸಿ.ರೋಡಿನ ರೈಲ್ವೇ ನಿಲ್ದಾಣದ ಬಳಿ ಯುವಕನೋರ್ವ ಚಲಿಸುತ್ತಿದ್ದ ರೈಲಿನಡಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜು.24ರ ಗುರುವಾರ ಬೆಳಗ್ಗೆ 11ರ ಸುಮಾರಿಗೆ ನಡೆದಿದೆ. ಯುವಕನ ವಯಸ್ಸು 30-35 ಎಂದು ಅಂದಾಜಿಸಲಾಗಿದ್ದು, ಆತನ ಪರಿಚಯ ತಿಳಿದುಬಂದಿಲ್ಲ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.ದೇಹದ ಕೆಳಗಿನ ಭಾಗ ಸಂಪೂರ್ಣ ನಜ್ಜು-ಗುಜ್ಜಾಗಿದ್ದು, ಮುಖದ ಭಾಗಕ್ಕೆ ಏನು ಆಗಿಲ್ಲ ಎಂದು ತಿಳಿದು ಬಂದಿದೆ.

Read More

ಉಡುಪಿ: ಲಂಚಕ್ಕೆ ಬೇಡಿಕೆ,ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ..!

ಉಡುಪಿ: ಸೌಹಾರ್ದ ಸಹಕಾರ ಸಂಘದ ಆಡಳಿತ ಚುನಾವಣೆಯ ಲೆಕ್ಕ ಪರಿಶೋಧನ ಮಾಡಿಕೊಡಲು ಉಡುಪಿ ಜಿಲ್ಲಾ ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಇಬ್ಬರು ಸಿಬ್ಬಂದಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಲೋಕಾಯುಕ್ತ ಪೊಲೀಸರು ಅವರನ್ನು ಬಲೆಗೆ ಕೆಡವಿದ್ದಾರೆ. ಸಹಕಾರಿ ಸಂಘದ ಲೆಕ್ಕ ಪರಿಶೋಧನ ಇಲಾಖೆಯ ಉಪನಿರ್ದೇಶಕಿ ರೇಣುಕಾ ಮತ್ತು ಪ್ರಥಮ ದರ್ಜೆ ಸಹಾಯಕ ಜಯರಾಮ್ ಬಂಧಿತ ಆರೋಪಿಗಳು. ಇವರು ತಲಾ ಐದು ಸಾವಿರದಂತೆ ಹತ್ತು ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸರ…

Read More

ಮಂಗಳೂರು: ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ ನ್ಯಾಯಾಲಯಕ್ಕೆ ಹಾಜರು

ಮಂಗಳೂರು: 2008ನೇ ಸಾಲಿನಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಭಯೋತ್ಪಾದನಾ ಪ್ರಕರಣದಲ್ಲಿ ಪ್ರಮುಖ ಆರೋಪಿ ಯಾಸೀನ್ ಭಟ್ಕಳ @ ಶಾರೂಕ್ @ ಡಾಕ್ಟರ್ ಅರಾಜೂ ಎಂಬಾತನನ್ನು ಈ ದಿನ ಮೊದಲ ಬಾರಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಈತನ ವಿರುದ್ಧದ ವಿಚಾರಣೆಯು ಹಲವು ವರ್ಷಗಳಿಂದ ನ್ಯಾಯಾಲಯದಲ್ಲಿ ಬಾಕಿ ಇದ್ದು, ಈ ಮೂಲಕ ವಿಚಾರಣೆಯು ಪುನಾರಂಭವಾಗಿದೆ. ಪ್ರಕರಣದ ಹಿನ್ನೆಲೆ: 2008ರ ಅಕ್ಟೋಬರ್ 4ರಂದು, ನಿಷೇಧಿತ ಇಂಡಿಯನ್ ಮುಜಾಹೀದ್ದೀನ್ ಸಂಘಟನೆಯ ಸದಸ್ಯರು ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ…

Read More

ಎರಡು KSRTC ಬಸ್ ಗಳು ಮುಖಮುಖಿ ಡಿಕ್ಕಿ : ಚಾಲಕ ಸೇರಿ ಹಲವರಿಗೆ ಗಂಭೀರ ಗಾಯ

ನೆಲ್ಯಾಡಿ: ಕೆ ಎಸ್ ಆರ್ ಟಿ ಸಿ ಯ ಎರಡು ಬಸ್ಸುಗಳ ನಡುವೆ ಸಕಲೇಶಪುರ ತಾಲೂಕು ಶಿರಾಡಿ ಘಾಟ್ ನ ಮಾರನಹಳ್ಳಿ ಬಳಿ ಮುಖಮುಖಿ ಡಿಕ್ಕಿ ಸಂಭವಿಸಿ 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಆ ಪೈಕಿ ಎಂಟು ಪ್ರಯಾಣಿಕರಿಗೆ ಹಾಗೂ ಒಬ್ಬ ಬಸ್ ಚಾಲಕನಿಗೆ ಗಂಭೀರ ಪೆಟ್ಟು ಬಿದ್ದಿದೆ. ಗುರುವಾರ ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಗಳ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುಗಳನ್ನು ಸಕಲೇಶಪುರದ ಸರಕಾರಿ…

Read More

ಅನಿಲ್ ಅಂಬಾನಿ ಮೇಲೆ ಇಡಿ ದಾಳಿ: 35 ಕ್ಕೂ ಹೆಚ್ಚು ಸ್ಥಳ, 50 ಕಂಪನಿಗಳು, 25 ಜನರ ಮೇಲೆ ಇಡಿ ತನಿಖೆ

ನವದೆಹಲಿ: ದೊಡ್ಡ ಪ್ರಮಾಣದ ಆರ್ಥಿಕ ಅಕ್ರಮಗಳ ಆರೋಪದ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎರಡು ಎಫ್‌ಐಆರ್‌ಗಳ ನಂತರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ದೆಹಲಿ ಮತ್ತು ಮುಂಬೈನಲ್ಲಿರುವ ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಕಾರ್ಯಾಚರಣೆಯ ಭಾಗವಾಗಿ, ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ 50 ಕ್ಕೂ ಹೆಚ್ಚು ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. 25 ಕ್ಕೂ…

Read More