ಧರ್ಮಸ್ಥಳದಲ್ಲಿ ಎಂಬಿಬಿಎಸ್ ವಿದ್ಯಾರ್ಥಿನಿ ನಾಪತ್ತೆ; 2 ದಶಕಗಳ ಬಳಿಕ ಎಸ್ಪಿಗೆ ದೂರು ನೀಡಿದ ತಾಯಿ
ಧರ್ಮಸ್ಥಳದಲ್ಲಿ 2003ರಲ್ಲಿ ನಾಪತ್ತೆಯಾಗಿದ್ದಾಳೆ ಎನ್ನಲಾದ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್, ವಿಚಾರವಾಗಿ ಎರಡು ದಶಕಗಳ ನಂತರ ಆಕೆಯ ತಾಯಿ ಸುಜಾತಾ ಭಟ್ ಎಂಬುವರು ಎಸ್ಪಿ ಕಚೇರಿಗೆ ದೂರು ನೀಡಿದ್ದಾರೆ. ತಮ್ಮ ವಕೀಲರೊಂದಿಗೆ ಎಸ್ಪಿ ಕಚೇರಿಗೆ ಆಗಮಿಸಿದ ಅವರು, ಎಸ್ಪಿ ಡಾ . ಅರುಣ್ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ದೂರುದಾರರ ದೂರಿನ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ದೂರು ಅರ್ಜಿ ದಾಖಲಿಸಲಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ…

