admin

ಮಂಗಳೂರು: ಪ್ರಥಮ ಪ್ರಯತ್ನದಲ್ಲೇ ಸಿ. ಎ ಪರೀಕ್ಷೆಯಲ್ಲಿ ಉತೀರ್ಣರಾದ ಹಂಶಿತಾ

ಮಂಗಳೂರು: ದಿಲ್ಲಿಯ ಐಸಿಎಐ ಮೇ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ತನ್ನ ಪ್ರಥಮ ಪ್ರಯತ್ನದಲ್ಲೇ ಹಂಶಿತಾ ಉತೀರ್ಣರಾಗಿದ್ದಾರೆ. ಲೆಕ್ಕ ಪರಿಶೋದಕ ಶಾಂತರಾಮ ಶೆಟ್ಟಿ ಅಂಡ್ ಕೋ ಬಿಜೈ ಇವರಲ್ಲಿ ತರಬೇತಿ ಪಡೆಯುತಿದ್ದರು. ತೀಯಾ ಸಮುದಾಯದ ಹೆಣ್ಣು ಮಗಳು ಹಂಶಿತಾ ಸಿಎ ಅಂತಿಮ ಪರೀಕ್ಷೆಯಲ್ಲಿ ತನ್ನ ಪ್ರಥಮ ಪ್ರಯತ್ನದಲ್ಲೇ ಉತೀರ್ಣರಾದದ್ದು ಇಡೀ ತೀಯಾ ಸಮುದಾಯವೇ ಹೆಮ್ಮೆ ಪಡುವ ಸಂಗತಿ, ಇವರು ಮಂಗಳೂರು ತೊಕ್ಕೊಟ್ಟು ಅಂಬಿಕಾ ರೋಡ್ ನಿವಾಸಿ ಹಾಗೂ ರಂಗೋಲಿ ಕ್ಯಾಟ್ಟ್ರೆಸ್ ಮಾಲಕರಾದ ಹರೀಶ್ ಕುಮಾರ್ ಹಾಗೂ…

Read More

ಮಂಗಳೂರು: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಮಹಿಳೆಗೆ ಬರೋಬ್ಬರಿ 3.15 ಕೋಟಿ ವಂಚನೆ

ಮಂಗಳೂರು: ಮಹಿಳೆಯೊಬ್ಬರಿಗೆ ವಂಚಕರು ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಕೋಟಿ ಕೋಟಿ ಹಣ ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಹಿಳೆಗೆ ಕರೆ ಮಾಡಿರುವ ವಂಚಕರು ಡಿಜಿಟಲ್ ಅರೆಸ್ಟ್ ಎಂದು ಹೇಳಿ ಹಂತ ಹಂತವಾಗಿ 3.15ಕೋಟಿ ಹಣವನ್ನು ದೋಚಿದ್ದಾರೆ. ಜೂನ್ 6ರಂದು ಬೆಳಿಗ್ಗೆ 10.25ರ ಸುಮಾರಿಗೆ ಮಹಿಳೆಗೆ ಕರೆ ಮಾಡಿರುವ ವಂಚಕರು, ತಾನು ಇನ್ಸ್ ಪೆಕ್ಟರ್ ಅನು ಶರ್ಮಾ ಎಂದು ಪರಿಚಯಿಸಿಕೊಂಡಿದ್ದಾರೆ. ನ್ಯಾಷನಲ್ ಕ್ರೈಂ ರಿಪೋರ್ಟಿಂಗ್ ಪೋರ್ಟಲ್ ನಿಂದ ಕರೆ ಮಾಡುತ್ತಿರುವುದಾಗಿ ಹೇಳಿದ್ದಾರೆ. ಮಹಿಳೆಯ ಗಂಡನಿಂದ…

Read More

ಪುತ್ತೂರು: ನೈತಿಕ ಪೊಲೀಸ್ ಗಿರಿ ಮಾಡಿ, ಸಾಮರಸ್ಯ ಕದಡಲು ಯತ್ನಿಸಿದ ಆರೋಪಿಗಳ ಬಂಧನ

ಪುತ್ತೂರು: ನೈತಿಕ ಪೊಲೀಸ್ ಗಿರಿ ಮಾಡಿದ್ದಲ್ಲದೇ ಅದನ್ನು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತೇವೆಂದು ಬೆದರಿಸಿ ಮತ್ತು ಸದ್ರಿ ಘಟನೆಯ ಮೂಲಕ ಕೋಮು ಸಾಮರಸ್ಯ ಕದಡಲು ಹಾಗೂ ಧರ್ಮಗಳ ನಡುವೆ ದ್ವೇಷ ಉಂಟಾಗಲು ಪ್ರಚೋದಿಸಿದ ಇಬ್ಬರು ಆರೋಪಿಗಳ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಡಾ. ಅರುಣ್‌ ಕೆ ಅವರು ಮಾತನಾಡಿದ್ದು, ದಿನಾಂಕ: 05-07-2025 ರಂದು ಮಧ್ಯಾಹ್ನದ ಸಮಯದಲ್ಲಿ ಒಂದು ಹುಡುಗ ಮತ್ತು ಹುಡುಗಿ ನಿಂತಿದ್ದರು….

Read More

ಮಂಗಳೂರು: ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿ ಸೆರೆ

ಮಂಗಳೂರು: ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ ಹಾಸನ ಜಿಲ್ಲೆಯ ಸಕಲೇಶಪುರ ನಿವಾಸಿ ಧ್ರುವ್ ಡಿ. ಶೆಟ್ಟಿ (22) ಎಂಬಾತನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಎ.2ರಂದು ಮಂಗಳೂರು ಸೆನ್ ಠಾಣಾ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿ 5 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಇವರಿಗೆ ಮಾದಕ ವಸ್ತುವನ್ನು ಪೂರೈಸುತ್ತಿದ್ದ ಆರೋಪಿ ಧ್ರುವ್ ಶೆಟ್ಟಿಯನ್ನು ಮೈಸೂರಿನಲ್ಲಿ ರವಿವಾರ ಬಂಧಿಸಲಾಗಿದೆ. ಆರೋಪಿಯಿಂದ ಮೊಬೈಲ್, ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಆಮಿಷವೊಡ್ಡಿ 289 ಮಂದಿಗೆ ಕೋಟ್ಯಂತರ ರೂ. ವಂಚನೆ- ಇಬ್ಬರು ಆರೋಪಿಗಳ ಸೆರೆ

ಮಂಗಳೂರು: ವಿದೇಶದಲ್ಲಿ ಉದ್ಯೋಗದ ವೀಸಾ ಕೊಡುವುದಾಗಿ ಆಮಿಷವೊಡ್ಡಿ 289 ಮಂದಿಯಿಂದ ಕೋಟ್ಯಂತರ ರೂ. ವಂಚಿಸಿದ ಮುಂಬೈ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಂಬೈಯ ದಿಲ್ಶಾದ್ ಅಬ್ದುಲ್ ಸತ್ತಾರ್ ಖಾನ್ (45) ಮತ್ತು ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34)ಎಂದು ಗುರುತಿಸಲಾಗಿದೆ. ಇವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಪೊಲೀಸರು ಮುಂಬೈ ಮೂಲದ ಮಸೀವುಲ್ಲಾ ಖಾನ್ ಎಂಬಾತನನ್ನು…

Read More

ಕಿನ್ನಿಗೋಳಿ: ಲಾಡ್ಜ್ ಮ್ಯಾನೇಜರ್‌ಗೆ ಬೆದರಿಕೆ- ಇಬ್ಬರು ಆರೋಪಿಗಳ ಬಂಧನ..!

ಕಿನ್ನಿಗೋಳಿ: ಕಿನ್ನಿಗೋಳಿಯ ಲಾಡ್ಜ್ ಒಂದರ ಮ್ಯಾನೇಜರ್‌ಗೆ ಹಫ್ತಾಕ್ಕಾಗಿ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರನ್ನು ಸುರತ್ಕಲ್ ಕುಳಾಯಿ ನಿವಾಸಿ ಧನುಷ್ ಭಂಡಾರಿ (30) ಮತ್ತು ನರಿಂಗಾನ ನಿವಾಸಿ ಆದಿತ್ಯ (18) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಧನುಷ್ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಉರ್ವ, ಕಂಕನಾಡಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ, ದರೋಡೆ ಸುಲಿಗೆ ಪ್ರಕರಣ…

Read More

ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ “ಮೂಲ್ಯರ ಕೆಸರದ ಗೊಬ್ಬು” ಕಾರ್ಯಕ್ರಮ

ಕುಲಾಲ ಸಮಾಜ ಸೇವಾ ಸಂಘ ಪುತ್ತೂರು ಇದರ ಆಶ್ರಯದಲ್ಲಿ ಮೂಲ್ಯರ ಕೆಸರದ ಗೊಬ್ಬು ಕಾರ್ಯಕ್ರಮವನ್ನು ನಿವೃತ್ತ ಡೆಪ್ಯುಟಿ ಕಮಾಂಡರ್ ಶ್ರೀ ಚಂದಪ್ಪ ಕುಲಾಲ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶೇಷಪ್ಪ ಕುಲಾಲ (ಪುತ್ತೂರು ಕುಲಾಲ ಸೇವಾ ಸಂಘದ ಅಧ್ಯಕ್ಷರು) ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಲಯನ್ ಅನಿಲ್ ದಾಸ್. ಜಿಲ್ಲಾಧ್ಯಕ್ಷರು( ಕುಲಾಲ ಕುಂಬಾರರ ಯುವ ವೇದಿಕೆ ) ಮತ್ತು ಶ್ರೀ ಕಿರಣ್ ಅಟ್ಲೂರು (ಕುಲಶೇಖರ ವೀರನಾರಾಯಣ ಕ್ಷೇತ್ರ ದ.ಸೇವಾ ಸಮಿತಿ ಅಧ್ಯಕ್ಷರು )ಮತ್ತು ಪುತ್ತೂರು…

Read More

ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣ: ಸ್ವಾಧೀನಪಡಿಸಿಕೊಂಡ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಬಿಡುಗಡೆ

ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣದಲ್ಲಿ ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದ್ದ 18 ಕೆ.ಜಿ 360.302 ಗ್ರಾಂ ಚಿನ್ನಾಭರಣ ಮತ್ತು ನಗದು (ಮೌಲ್ಯ ರೂ 13 ಕೋಟಿ 50 ಲಕ್ಷ) ಗಳನ್ನು ಬ್ಯಾಂಕ್‌ಗೆ ನೀಡುವಂತೆ ನ್ಯಾಯಾಲಯವು ಆದೇಶಿಸಿದೆ. ದಿನಾಂಕ: 17-01-2025 ರಂದು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಸೊಸೈಟಿ ಶಾಖೆಯಲ್ಲಿ ಡಕಾಯಿತಿ ಕೃತ್ಯ ನಡೆದ ಬಗ್ಗೆ ಸೊಸೈಟಿಯ ಮ್ಯಾನೇಜರ್ ಶ್ರೀಮತಿ ವಾಣಿ ಎಲ್ ರವರು ನೀಡಿದ ಉಳ್ಳಾಲ ಪೊಲೀಸ್…

Read More

ಉಡುಪಿ: ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪಿ ಬಂಧನ..!!

ಉಡುಪಿ : ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಆರೋಪದಲ್ಲಿ ಆರೋಪಿಯೊಬ್ಬನನ್ನು ಉಡುಪಿ ಮಹಿಳಾ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ ನಿವಾಸಿ ಆರೋಪಿ ಸಂಜಯ್ ಕರ್ಕೇರ(28) ಬಂಧಿತ ಆರೋಪಿ. ಆರೋಪಿಯನ್ನು ಪೊಲೀಸರು ಉಡುಪಿಯ ಎರಡನೇ ಹೆಚ್ಚುವರಿ ಸೀನಿಯರ್ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸಂಜಯ್ ಕರ್ಕೆರ ಯುವತಿಯೊಬ್ಬಳನ್ನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದು, ಆರೋಪಿಯು ಯುವತಿಯನ್ನು 2024ರ ಜು.11ರಂದು ಕಳಸದ ಹೊಟೇಲ್ಗೆ ಕರೆದುಕೊಂಡು…

Read More

ಬಂಟ್ವಾಳ: ರಸ್ತೆ ಡಿವೈಡರ್‌ಗೆ ಕಾರು ಢಿಕ್ಕಿ- ಯುವಕ ಮೃತ್ಯು

ಬಂಟ್ವಾಳ: ಕಾರೊಂದು ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಳಗಿನ ತುಂಬೆ ಎಂಬಲ್ಲಿ  ಇಂದುಶನಿವಾರ ಮಧ್ಯಾಹ್ನ ನಡೆದಿದೆ. ನೌಫಲ್ ಶನಿವಾರ ಬೆಳಿಗ್ಗೆ ಬಿ.ಸಿ.ರೋಡ್ ಕೈಕಂಬ ನಿವಾಸಿ ಉಸ್ಮಾನ್ ಎಂಬವರಿಗೆ ಸೇರಿದ ಸ್ವಿಫ್ಟ್ ಕಾರು ಖರೀದಿಸಿ ಅದನ್ನು ತೆಗೆದುಕೊಂಡು ಹೋಗುವ ವೇಳೆ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Read More