ಮಂಗಳೂರು: ವಿವಿಧ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆಗಳ ಆಚರಣೆ- ಷರತ್ತು ವಿಧಿಸಿದ ಪೊಲೀಸ್ ಇಲಾಖೆ
ಮಂಗಳೂರು: ಹಬ್ಬಗಳ ಹಿನ್ನೆಲೆಯಲ್ಲಿ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಅವುಗಳಲ್ಲಿ ಮೊಹರಂ, ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ, ಗಣೇಶ ಚತುರ್ಥಿ, ಈದ್ ಮಿಲಾದ್, ನವರಾತ್ರಿ ಉತ್ಸವ, ದೀಪಾವಳಿ, ಕ್ರಿಸ್ಮಸ್ ಪ್ರಮುಖವಾದವುಗಳಾಗಿವೆ. ಈ ಸಂಬಂಧ, ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ…

