admin

ಉಜಿರೆ ಲಾಡ್ಜ್ ನಲ್ಲಿ ವೇಶ್ಯಾವಟಿಕೆ..!! ನೋಟಿಸ್ ಜಾರಿ

ಉಜಿರೆ ಲಾಡ್ಜ್ ನಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸರು ಲಾಡ್ಜ್ ಮೇಲೆ ಕ್ರಮ ಕೈಗೊಳ್ಳಲು ಉಜಿರೆ ಗ್ರಾಮ ಪಂಚಾಯತ್ ಗೆ ಪ್ರಕರಣದ ಬಗ್ಗೆ ವರದಿ ಸಲ್ಲಿಸಿದ್ದರು. ಈ ಬಗ್ಗೆ ಉಜಿರೆ ಗ್ರಾಮ ಪಂಚಾಯತ್ ಲಾಡ್ಜ್ ಮಾಲೀಕರಿಗೆ ಲಾಡ್ಜ್ ಬಂದ್ ಮಾಡಲು ನೋಟಿಸ್ ಜಾರಿ ಮಾಡಿದೆ. ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದು ಉಜಿರೆ ಶ್ರೀ ದುರ್ಗಾ ಲಾಡ್ಜ್ ನಲ್ಲಿ ಇರಿಸಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ಜೂ.14 ರಂದು…

Read More

ಮಂಗಳೂರು: ತರಗತಿ ನಡೆಯುತ್ತಿದ್ದಾಗಲೇ ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿತ..!!

ಮಂಗಳೂರು: ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಲಾ ಕಟ್ಟಡದ ಹಂಚಿನ ಮೇಲ್ಛಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಜೋರಾದ ಗಾಳಿಯಿಂದ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡಿದ್ದು, ಮಕ್ಕಳು ಶಾಲೆಯಿಂದ ಹೊರಗೆ ಓಡಿದ್ದರಿಂದ ಭಾರೀ ದೊಡ್ಡ ಅನಾಹುತ ತಪ್ಪಿದೆ. ಜೋಕಟ್ಟೆ ಸಮೀಪದ ಪೇಜಾವರ ಮೂಲ ಮಠದ ಬಳಿಯಿರುವ ಕೆಂಜಾರು ಮುಖ್ಯಪ್ರಾಣ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ 12.30 ರ ವೇಳೆ ಗಾಳಿಗೆ ಒಂದು ಬದಿಯ ಹಂಚು ಜಾರುತ್ತಿರುವುದನ್ನು ಮಕ್ಕಳು…

Read More

ಬಂಟ್ವಾಳ: ಟ್ಯಾಂಕರ್ – ಬೈಕ್ ಮಧ್ಯೆ ಅಪಘಾತ..! ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿ ಸ್ಥಳದಲ್ಲೇ ಮೃತ್ಯು

ಬಂಟ್ವಾಳ;  ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಅಧಿಕಾರಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್ ಬಳಿ ನಡೆದಿದೆ.ಶಂಭೂರು ಕೊಪ್ಪಳ ನಿವಾಸಿ ಚಿದಾನಂದ   (50) ಮೃತ ದುರ್ದೈವಿ. ಚಿದಾನಂದ ಅವರು ಬಿಸಿರೋಡು ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಕ್ರಾಸ್ ಮಾಡುವ ವೇಳೆ ಬಿಸಿರೋಡಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾರಿ ಢಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿದಾನಂದ ಅವರು ಬಂಟ್ವಾಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

Read More

ಅಕ್ರಮ ಗೋಸಾಗಣೆ ತಡೆದ ಕೇಸ್ : ಹಲ್ಲೆಗೊಳಗಾದ ಶ್ರೀರಾಮ ಸೇನೆ ಕಾರ್ಯಕರ್ತರ ವಿರುದ್ಧವೇ ‘FIR’ ದಾಖಲು

 ಅನ್ಯಕೋಮಿನ ಯುವಕರು ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳನ್ನು ಶ್ರೀರಾಮಸೇನೆ ಕಾರ್ಯಕರ್ತರು ತಡೆದಿದ್ದಕ್ಕೆ ಐವರನ್ನು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ನಡೆದಿದೆ. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಶ್ರೀರಾಮ ಸೇನೆ ಕಾರ್ಯಕರ್ತರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಕಾರ್ಯಕರ್ತರ ವಿರುದ್ಧವೇ FIR ದಾಖಲಾಗಿದೆ. ಹೌದು ಅನ್ಯಕೋಮೀನ ಕೆಲವು ಜನ ಗೋವುಗಳನ್ನು ಖಸಾಯಿಕಾನೆಗೆ ಹಸುಗಳನ್ನು ಸಾಗಿಸುತ್ತಿದ್ದ ಮಾಹಿತಿ ತಿಳಿದು ಶ್ರೀರಾಮಸೇನೆ ಕಾರ್ಯಕರ್ತರು ಅದನ್ನು ತಡೆದಿದ್ದಾರೆ. ಬಳಿಕ ಮರಕೆ ಕಟ್ಟಿ…

Read More

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ..!!

ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಬಂದಿದೆ. ಹೀಗಾಗಿ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. roadkill kyo ಹೆಸರಿನ ಇ-ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಬಾಂಬ್‌ ತಪಾಸಣಾ ದಳ ಮತ್ತು ಭದ್ರತಾ ಸಿಬ್ಬಂದಿ ಜತೆ ಸಭೆ ನಡೆಸಿ, ನಿಲ್ದಾಣಕ್ಕೆ ಬಿಗಿ ಭದ್ರತೆ ಒದಗಿಸಿದ್ದಾರೆ. ರಾಜ್ಯದ ಹುಬ್ಬಳ್ಳಿ, ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್…

Read More

ಪುತ್ತೂರು: ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ- ದೂರು ದಾಖಲು

ಪುತ್ತೂರು: ಫೇಸ್ ಬುಕ್ ನಲ್ಲಿ ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅವಹೇಳನ ಮಾಡಲಾಗಿದೆ ಎಂದು ಪುತ್ತೂರಿನ ಪಡ್ನೂರು ಗ್ರಾಮದ ನಿವಾಸಿ ಜೀವಂದರ್ ಜೈನ್ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದಿನಾಂಕ 29-06-2025 ರಂದು  ಸಂಜೆ  ಸಾಮಾಜಿಕ ಜಾಲತಾಣವಾದ ಫೇಸ್ ಬುಕ್ ಅನ್ನು ನೋಡುತ್ತಿದ್ದಾಗ, “ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಸ್ ಬುಕ್  ಪೇಜ್ ಹೊಂದಿರುವ ವ್ಯಕ್ತಿಯು, ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ, ಜೈನ…

Read More

ಸುಹಾಸ್‌ ಹತ್ಯೆ ಪ್ರಕರಣ : ಆರೋಪಿಗಳೊಂದಿಗೆ ಪಿಎಫ್ಐ ನಂಟಿರುವ ಮಾಹಿತಿ NIA ಗೆ ಲಭ್ಯ..! ಬ್ಯಾಂಕ್‌ ಖಾತೆಗಳ ಪರಿಶೀಲನೆ

ಮಂಗಳೂರು: ಬಜಪೆ ಸಮೀಪದ ಕಿನ್ನಿಪದವು ಜಂಕ್ಷನ್‌ ಬಳಿ ಮೇ 1ರಂದು ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಅಧಿಕಾರಿಗಳು ಈಗ ಕೃತ್ಯದ ಹಿಂದಿನ ಹಣಕಾಸಿನ ಮೂಲದ ಪತ್ತೆಗೆ ಎನ್‌ಐಎ ಮುಂದಾಗಿದೆ. ಎನ್‌ಐಎ ಅಧಿಕಾರಿಗಳು ಈಗಾಗಲೇ 8 ಮಂದಿ ಪ್ರಮುಖ ಆರೋಪಿಗಳನ್ನು ಜು.1ರ ವರೆಗೆ ಕಸ್ಟಡಿಗೆ ಪಡೆದಿದ್ದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಮಂಗಳೂರಿನ ಸಿಸಿಬಿ ಪೊಲೀಸರು ಈಗಾಗಲೇ ನಡೆಸಿರುವ ತನಿಖೆಯ ಎಲ್ಲ ದಾಖಲೆಗಳನ್ನು ಈಗಾಗಲೇ ಎನ್‌ಐಎಗೆ…

Read More

ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯನ್ನು ಸೋಮೇಶ್ವರ ಬೀಚ್ ಗೆ ಕರೆದೊಯ್ದು ಕಾರಿನಲ್ಲಿ ಅತ್ಯಾಚಾರ..!!

ಉಳ್ಳಾಲ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದು, ಸೋಮೇಶ್ವರ ಸಮುದ್ರ ತೀರದಲ್ಲಿ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ ಕುರಿತಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದೆ. ಬಂಧಿತ ಆರೋಪಿಯ ಅಡ್ಯಾರ್ ವಳಚ್ಚಿಲ್ ನಿವಾಸಿ ಕೆಲ್ವಿನ್ (24) ಎಂದು ಗುರುತಿಸಲಾಗಿದೆ. ಆರೋಪಿ ಕೆಲ್ವಿನ್ ಅಪ್ರಾಪ್ತೆಯೋರ್ವಳನ್ನ ಇನ್ಸಾಗ್ರಾಮ್ ನಲ್ಲಿ ಪರಿಚಯ ಮಾಡಿಕೊಂಡಿದ್ದ. ಚಾಟಿಂಗಲ್ಲೇ ಆಕೆಯನ್ನ ಪ್ರೀತಿಸೋದಾಗಿ ನಂಬಿಸಿದ್ದ ಫೋನ್ ಕರೆ ಮಾಡಿ ಕಳೆದ ಗುರುವಾರ ಆರೋಪಿ ಅಪ್ರಾಪ್ತಯನ್ನ ಆಕೆಯ ಮನೆ ಬಳಿಯೇ ಭೇಟಿ ಮಾಡಿದ್ದು,…

Read More

ಪಿ.ಎಂ.ಆವಾಸ್ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

 ಭಾರತ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ ಸೂರು” ಒದಗಿಸಲು 2024 ರ ಸೆಪ್ಟಂಬರ್ 1 ರಿಂದ ಅನ್ವಯವಾಗುವಂತೆ ಯೋಜನೆಯನ್ನು ಜಾರಿಗೊಳಿಸಿದ್ದು, ಈ ಯೋಜನೆಯಡಿ ಮುಂದಿನ 05 ವರ್ಷಗಳಲ್ಲಿ ದೇಶಾದ್ಯಂತ ನಗರ ಪ್ರದೇಶಗಳಲ್ಲಿ ಒಂದು ಕೋಟಿ ಬಡವರು, ಕೊಳಚೆ ನಿವಾಸಿಗಳನ್ನು ಒಳಗೊಂಡಂತೆ ಮಧ್ಯಮ ವರ್ಗದವರಿಗೆ ಸೂರು ಒದಗಿಸಲು ಸಹಾಯಧನ ಒದಗಿಸಲಾಗುವುದು. ಕಾಪು ಪುರಸಭಾ ವ್ಯಾಪ್ತಿಯಲ್ಲಿ ವಾಸಿಸುವ ವಸತಿ ರಹಿತರು ಮತ್ತು ನಿವೇಶನ ರಹಿತರು ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಕೇಂದ್ರ…

Read More

ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭೀಕರ ಕಾಲ್ತುಳಿತ : ಮೂವರು ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಪುರಿ : ಒಡಿಶಾದ ಪುರಿಯ ಗುಂಡಿಚಾ ದೇವಾಲಯದ ಹೊರಗೆ ಭಾನುವಾರ ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಂತಹ ಘಟನೆಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ವಾರ್ಷಿಕ ರಥಯಾತ್ರೆ ಉತ್ಸವಕ್ಕಾಗಿ ಪುರಿಯಲ್ಲಿ ಲಕ್ಷಾಂತರ ಭಕ್ತರು ಜಮಾಯಿಸಿದ್ದರು. ಶಾರದಾಬಲಿಯಲ್ಲಿ ಬೆಳಿಗ್ಗೆ 4-4:20 ರ ಸುಮಾರಿಗೆ ಧಾರ್ಮಿಕ ಸಾಮಗ್ರಿಗಳನ್ನು ಸಾಗಿಸುತ್ತಿದ್ದ ವಾಹನವು ಜನಸಮೂಹವನ್ನು ಪ್ರವೇಶಿಸಿದಾಗ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಯಾತ್ರಿಕರ ಸಂಖ್ಯೆಯನ್ನು ನಿರ್ವಹಿಸಲು ಸ್ಥಳದಲ್ಲಿ ಸಾಕಷ್ಟು ಪೊಲೀಸ್ ವ್ಯವಸ್ಥೆಗಳು ಅಥವಾ ಅಧಿಕಾರಿಗಳು ಇರಲಿಲ್ಲ ಎಂದು…

Read More