admin

ಮಂಗಳೂರು: ತಾನು ಕೆಲಸ ಮಾಡಿದ ಬ್ಯಾಂಕ್‌ನಲ್ಲೇ ನಿವೃತ್ತ ಉದ್ಯೋಗಿ ಆತ್ಮಹತ್ಯೆ

ಮಂಗಳೂರು, ಜೂ. 26 : ಬ್ಯಾಂಕ್ ನ ನಿವೃತ್ತ ಉದ್ಯೋಗಿಯೊಬ್ಬರು ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್ ನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಕೆನರಾ ಬ್ಯಾಂಕ್ ನಲ್ಲಿ ನಡೆದಿದೆ. ಮೃತರನ್ನು ಅಳಕೆ ನಿವಾಸಿ ಗಿರಿದರ್ ಯಾದವ್ (61) ಎಂದು ಗುರುತಿಸಲಾಗಿದೆ. ಇವರು ಕೊಡಿಯಾಲ್ ಬೈಲ್ ಕೆನರಾ ಬ್ಯಾಂಕ್ ನಲ್ಲಿ ಸುಮಾರು 40 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಇತ್ತೀಚೆಗೆ ನಿವೃತ್ತಿ ಹೊಂದಿದ್ದರು. ಆದರೂ ಬ್ಯಾಂಕ್ ನ ಮೇಲಿನ ಪ್ರೀತಿಗೆ ಬ್ಯಾಂಕ್ ಗೆ ಬಂದು ಹೋಗುತ್ತಿದ್ದರು ಎಂದು…

Read More

ಮಂಜೇಶ್ವರ: ಬೆಂಕಿ ಹಚ್ಚಿ ತಾಯಿಯನ್ನು ಕೊಲೆಗೈದ ಮಗ..!!

ಮಂಜೇಶ್ವರ : ರಾತ್ರಿ ಹೊತ್ತು ಮನೆಯಲ್ಲಿ ಮಲಗಿದ ತಾಯಿಗೆ ಬೆಂಕಿ ಹಚ್ಚಿ ಆಕೆಯನ್ನು ಕೊಂದು ಬಳಿಕ, ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ವರ್ಕಾಡಿಯಲ್ಲಿ ನಡೆದಿದೆ. ತಾಯಿ ಸಾವನ್ನಪ್ಪಿದ್ದು ನೆರೆಮನೆಯ ಮಹಿಳೆ ಗಂಭೀರವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರ್ಕಾಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್ ಮೊಂತೇರೋರವರ ಪತ್ನಿ ಹಿಲ್ಡಾ (60) ಮೃತಪಟ್ಟ ಮಹಿಳೆ. ಪುತ್ರ ಮೇಲ್ವಿನ್ ಈ ಕೃತ್ಯವೆಸಗಿದ್ದಾನೆ. ನೆರೆಮನೆಯ ವಿಕ್ಟರ್ ರವರ ಪತ್ನಿ ಲೊಲಿಟಾ (30) ಗಂಭೀರಾವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜೂನ್ 26…

Read More

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ- ಯುವಕನ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿ ವಿವಾಹವಾಗಲು ನಿರಾಕರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನೋರ್ವನ ವಿರುದ್ಧ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ. ಯುವತಿಯ ದೂರಿನಂತೆ ಆರೋಪಿ ಯುವಕನ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಮತ್ತು ನಂಬಿಕೆ ದ್ರೋಹದ ಪ್ರಕರಣ ದಾಖಲಾಗಿದೆ. ಪುತ್ತೂರಿನ ಬಪ್ಪಳಿಗೆ ನಿವಾಸಿ ಬಿಜೆಪಿ ಮುಖಂಡ ಹಾಗೂ ವಾಸ್ತುಶಿಲ್ಪಿ ಪಿ.ಜಿ ಜಗನ್ನಿವಾಸ್ ರಾವ್ ಎಂಬವರ ಪುತ್ರ ಪಿ.ಜಿ ಕೃಷ್ಣ ಜೆ. ರಾವ್ (21)…

Read More

ಮಳೆಯಿಂದ ಭೂಕುಸಿತ : ಶಿರಾಡಿ ಘಾಟ್ ಮಾರ್ಗದಲ್ಲಿ ವಾಹನ ಸಂಚಾರ ಬಂದ್..!!

 ಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು, ಶಿರಾಡಿಘಾಟ್ ಮಾರ್ಗದಲ್ಲಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ಸಕಲೇಶಪುರ ತಾಲೂಕಿನ ಹೆಗ್ಗದ್ದೆ ಮಾರನಹಳ್ಳಿ ಬಳಿ ಮಣ್ಣು ಕುಸಿತವಾಗಿದ್ದು,ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗಿದೆ.ಪರ್ಯಾಯ ಸಂಚಾರ ಮಾರ್ಗವನ್ನು ಜಿಲ್ಲಾಧಿಕಾರಿಗಳು ಸೂಚಿಸಿದ್ದು, ಮಂಗಳೂರು ಕಡೆಗೆ ತೆರಳುವ ವಾಹನಗಳಿಗೆ ಬೇಲೂರು ಮೂಲಕ ಚಾರ್ಮಾಡಿ ಘಾಟ್ ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಮಂಗಳೂರು ಕಡೆಯಿಂದ ಬರುವ ವಾಹನ ಸವಾರರು ಕೊಡಗಿನ…

Read More

ಶೀಘ್ರದಲ್ಲಿ ಪುತ್ತೂರು – ಮಂಗಳೂರು ನಡುವೆ ನಾನ್ ಸ್ಟಾಪ್ KSRTC ಬಸ್

ಪುತ್ತೂರು: ಶೀಘ್ರದಲ್ಲಿ ಪುತ್ತೂರು ಮಂಗಳೂರು ನಡುವೆ ನಾನ್ ಸ್ಟಾಪ್ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭವಾಗಲಿದೆ. ಶಾಸಕ ಅಶೋಕ್‌ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಪುತ್ತೂರಿನಿಂದ ನೇರವಾಗಿ ಮಂಗಳೂರಿಗೆ ತೆರಳುವ ಮತ್ತು ಮಂಗಳೂರಿನಿಂದ ನೇರವಾಗಿ ಪುತ್ತೂರಿಗೆ ಆಗಮಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಪುತ್ತೂರು – ಸ್ಟೇಟ್‌ಬ್ಯಾಂಕ್‌ ನಾನ್‌ಸ್ಟಾಪ್‌ ಬಸ್‌ಗಳನ್ನು ಶೀಘ್ರದಲ್ಲೇ ಸಂಚಾರ ಆರಂಭಿಸಿವೆ. ಆರಂಭದಲ್ಲಿ 6 ಬಸ್‌ಗಳು ಈ ಸೇವೆಗೆ ಲಭ್ಯವಾಗಲಿವೆ. ಇವು ಪುತ್ತೂರು ಬಿಟ್ಟ ಬಳಿಕ ಮಂಗಳೂರಿನಲ್ಲಿ…

Read More

ಉಪ್ಪಿನಂಗಡಿ : ರಾಷ್ಟ್ರೀಯ ಹೆದ್ದಾರಿಗೆ ಗುಡ್ಡ ಕುಸಿತ..! ವಾಹನ ಸಂಚಾರಕ್ಕೆ ಅಡಚಣೆ

ಉಪ್ಪಿನಂಗಡಿ: ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ನಿನ್ನೆ ಸಂಜೆ ಗುಡ್ಡ ಜರಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬಿ.ಸಿ.ರೋಡ್‍ನಿಂದ ಅಡ್ಡಹೊಳೆ ತನಕ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮಣ್ಣಗುಂಡಿಯಲ್ಲಿ ರಸ್ತೆ ನಿರ್ಮಾಣ ಸಂದರ್ಭ ಗುಡ್ಡ ಅಗೆಯಲಾಗಿದೆ. ಇಲ್ಲಿ ನೇರವಾಗಿ ಗುಡ್ಡ ಅಗೆದಿರುವುದರಿಂದ ಕೆಲ ದಿನಗಳಿಂದ ಮಣ್ಣು ಜರಿಯುತ್ತಿದ್ದು ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇಂದು ಸುರಿದ…

Read More

ಉಳ್ಳಾಲ: BA ಸೈಕಾಲಜಿ ವಿದ್ಯಾರ್ಥಿನಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ..!

ಉಳ್ಳಾಲ: ದ್ವಿತೀಯ ವರ್ಷದ ಬಿಎ ಸೈಕಾಲಜಿ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ತಲಪಾಡಿಯ ಕಿನ್ಯದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಶ್ರೇಯಾ (19) ಎಂದು ಗುರುತಿಸಲಾಗಿದೆ. ಶ್ರೇಯಾ ಓದಿನ ಒತ್ತಡ ಹಾಗೂ ತಲೆನೋವಿನಿಂದ ಬಳಲುತ್ತಿದ್ದಳು ಎಂದು ತಿಳಿದುಬಂದಿದೆ. ಶ್ರೇಯಾ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಆಕೆಯನ್ನು ಕಪ್ಪು ಎಂದು ಅವಮಾನಿಸುತ್ತಿದ್ದ ಬಗ್ಗೆ ಬರೆದಿದ್ದಾಳೆ. ಅಲ್ಲದೇ, ಮೇ ತಿಂಗಳಿನಲ್ಲಿ ಶ್ರೇಯಾ ಬರೆದಿರುವ ಡೆತ್ ನೋಟೊಂದು ಸಿಕ್ಕಿದೆ. ನನ್ನನ್ನು ಯಾರೂ ಪ್ರೀತಿಸುವುದಿಲ್ಲ. ನಾನು ಬದುಕಬಾರದು, ಮನೆಯವರಿಗೆ ಕಷ್ಟವಾಗುತ್ತದೆ ಎಂದು…

Read More

ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ‘ಬ್ರಹ್ಮಪುರಂ’ ಎಂದು ಮರು ನಾಮಕರಣ ಮಾಡಿದ ಯೋಗಿ ಸರ್ಕಾರ

ಲಖನೌ: ಯೋಗಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಹೆಸರು ಬದಲಾವಣೆ ರಾಜಕೀಯ ಮುಂದುವರೆದಿದೆ. ಇದೀಗ ಆಗ್ರಾದ ಫತೇಹಾಬಾದ್ ಪಟ್ಟಣ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಹೆಸರನ್ನು ಬದಲಾಯಿಸಲು ನಿರ್ಧರಿಸಲಾಗಿದೆ. ಫತೇಹಾಬಾದ್ ಪಟ್ಟಣದ ಹೆಸರನ್ನು ಸಿಂಧೂರಪುರಂ ಮತ್ತು ಬಾದಶಾಹಿ ಬಾಗ್ ಪ್ರದೇಶದ ಹೆಸರನ್ನು ಬ್ರಹ್ಮಪುರಂ ಎಂದು ಮರು ನಾಮಕರಣ ಮಾಡಲಾಗುತ್ತಿದೆ. ಸೋಮವಾರ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮಂಜು ಭಡೋರಿಯಾ ಅವರು ಈ ಕುರಿತು ಪ್ರಸ್ತಾವನೆಯನ್ನು ಮಂಡಿಸಿ ಸರ್ವಾನುಮತದಿಂದ ಅಂಗೀಕರಿಸಿದರು. ಇದೀಗ ಅನುಮೋದನೆಗಾಗಿ…

Read More

ಲೋನ್ ಆ್ಯಪ್‌ ಗಳ ಕಿರುಕುಳ : ಸಾಲ ತೀರಿಸಲಾಗದೇ ಬೇಸತ್ತು ಯುವಕ ನೇಣಿಗೆ ಶರಣು

ಮಂಗಳೂರು: ಇತ್ತಿಚ್ಚಿನ ದಿನಗಳಲ್ಲಿ ಹಣ ಇಲ್ಲದೆ ಮಾಧ್ಯಮ ವರ್ಗದ ಜನ ಆಪ್ ಲೋನಿನ ಮೊರೆಹೋಗುತ್ತಿರುವುದು ಅತಿಹೆಚ್ಚು,ಸಾಲ ಮಾಡಿ ವ್ಯವಹಾರಗಳಿಗೆ ಹೂಡಿಕೆ ಮಾಡಿದವರು ಕೊನೆಗೆ ಕೈಸುಟ್ಟು ಆತ್ಮಹತ್ಯೆ ಮಾಡಿಕೊಳ್ಳುವ ಘಟನೆಗಳು ಹೆಚ್ಚುತ್ತಲೇ ಇದೆ.ಅದರಂತೆಯೇ ಆ್ಯಪ್‌ಗಳಲ್ಲಿ ಸಾಲ ಪಡೆದು ತೀರಿಸಲಾಗದೇ ಆರ್ಥಿಕ ಹೊರೆಯಿಂದ ಬೇಸತ್ತು ಯುವಕನೋರ್ವನು ನೇಣಿಗೆ ಶರಣಾದ ಘಟನೆ ಮಂಗಳೂರಿನ ಕೋಡಿಕಲ್‌ನಲ್ಲಿ ನಡೆದಿದೆ. ಕೋಡಿಕಲ್ ನಿವಾಸಿ ನಿಖಿಲ್ ಪೂಜಾರಿ (30) ಮೃತಪಟ್ಟ ಯುವಕ. ಈ ಹಿಂದೆ ಆಪ್ ಗಳಲ್ಲಿ ಲೋನ್ ಪಡೆದವರಿಗೆ ಕಿರುಕುಳ ನೀಡುತ್ತಿರುವುದಲ್ಲದೆ ಲೋನ್ ಪಡೆದವರ ಫೋನ್ ನ…

Read More

ಉಡುಪಿ ಶಾಲೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಕಳುಹಿಸಿದ್ದ ಆರೋಪಿ ಅಹಮದಾಬಾದ್‌ನಲ್ಲಿ ಸೆರೆ

ಉಡುಪಿ: ನಗರದ ಖಾಸಗಿ ಶಾಲೆಯೊಂದಕ್ಕೆ ಇ-ಮೇಲ್ ಮೂಲಕ ಹುಸಿ ಬಾಂಬ್ ಕರೆ ಬಂದಿರುವ ಘಟನೆಗೆ ಸಂಬಂಧಿಸಿದಂತೆ ತಮಿಳುನಾಡಿನ ಚೆನ್ನೈ ಮೂಲದ ಮಹಿಳೆಯೊಬ್ಬರನ್ನು ಅಹಮದಾಬಾದ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆಕೆಯೇ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗುತ್ತಿದೆ. ಚೆನ್ನೈ ಮೂಲದ ಎಲೆಕ್ಟ್ರಿಕಲ್ ಇಂಜಿನಿಯರ್ ಮತ್ತು ಐಟಿ ಸಂಸ್ಥೆಯ ಹಿರಿಯ ಸಲಹೆಗಾರೆಯಾಗಿರುವ ರೆನೆ ಜೋಶಿಲ್ಡಾ ಎಂಬಾಕೆ ಹುಸಿ ಇ-ಮೇಲ್ ಐಡಿ ಮತ್ತು ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್‌ಗಳನ್ನು ಬಳಸಿ ಈ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದಳು. ಮಹಾರಾಷ್ಟ್ರ, ಕರ್ನಾಟಕ, ರಾಜಸ್ಥಾನ, ತಮಿಳುನಾಡು, ದೆಹಲಿ,…

Read More