ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

0 0
Read Time:3 Minute, 13 Second

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ (ಮಾರ್ಚ್‌ 1) ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. ಈಗಾಗಲೇ ಶಿಕ್ಷಣ ಇಲಾಖೆ ಮತ್ತು ಎಕ್ಸಾಂ ಬೋರ್ಡ್ ಪರೀಕ್ಷೆಗೆ ಸಕಲ ರೀತಿಯಲ್ಲಿ ಸಜ್ಜುಗೊಳಿಸಿದೆ.

ಪರೀಕ್ಷಾ ಅಕ್ರಮ ತಡೆಗೆ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಎಕ್ಸಾಂಗೂ ವೆಬ್ ಕಾಸ್ಟಿಂಗ್ ಕಣ್ಗಾವಲು ಇರಲಿದೆ. ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಈ ಪೈಕಿ 3,35,468 ಗಂಡು ಮಕ್ಕಳು, 3,78,389 ಹೆಣ್ಣು ಮಕ್ಕಳು ಹಾಗೂ ಐವರು ತೃತೀಯ ಲಿಂಗಿಗಳಿದ್ದಾರೆ. ಒಟ್ಟು 1,171 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಇದರೊಂದಿಗೆ 2,342 ಸ್ಥಾನಿಕ ಜಾಗೃತದಳ, 76 ಉತ್ತರ ಪತ್ರಿಕೆ ಮೌಲ್ಯಮಾಪನ ಕೇಂದ್ರಗಳು ಹಾಗೂ 31,000 ಮೌಲ್ಯಮಾಪಕರನ್ನ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಪರೀಕ್ಷಾ ನಿಯಮಗಳು ಹೀಗಿದೆ:
ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರದ 200 ಮೀಟರ್ ನಿಷೇಧಾಜ್ಞೆ.
ಪಿಯುಸಿ ಎಕ್ಸಾಂ ಎಲ್ಲಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ, ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇರಲಿದೆ.
ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್, ಸೈಬರ್ ಸೆಂಟರ್, ಕಂಪ್ಯೂಟರ್ ಸೆಂಟರ್ ಮುಚ್ಚಬೇಕು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಭದ್ರತೆ ವ್ಯವಸ್ಥೆ.
ಪ್ರಶ್ನೆ ಪತ್ರಿಕೆ ಲೀಕ್ ಮಾಡುವ, ಅಕ್ರಮ ಮಾಡುವವರ ವಿರುದ್ಧ ಕ್ರಮ.
ಪ್ರಶ್ನೆ ಪತ್ರಿಕೆ ರವಾನೆ ಮಾಡೋದ್ರೀಂದ ಹಿಡಿದು ಪರೀಕ್ಷಾ ಕೇಂದ್ರಕ್ಕೆ ತೆರಳೋವರೆಗೂ ಕ್ಯಾಮೆರಾ ರೆಕಾರ್ಡ್.
ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ.

ದ್ವೀತಿಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ
ಮಾರ್ಚ್ 1- ಕನ್ನಡ, ಅರೇಬಿಕ್.
ಮಾರ್ಚ್ 3- ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
. ಮಾರ್ಚ್ 4- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್.
ಮಾರ್ಚ್ 5- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ.
ಮಾರ್ಚ್ 7- ಇತಿಹಾಸ, ಭೌತಶಾಸ್ತ್ರ
ಮಾರ್ಚ್-10- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ.
ಮಾರ್ಚ್ 12- ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ.
ಮಾರ್ಚ್ 13- ಅರ್ಥಶಾಸ್ತ್ರ
ಮಾರ್ಚ್ 15- ಇಂಗ್ಲಿಂಷ್‌
ಮಾರ್ಚ್ 17- ಭೂಗೋಳಶಾಸ್ತ್ರ.
ಮಾರ್ಚ್ 18- ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮಾರ್ಚ್ 19- ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮಾರ್ಚ್ 20- ಹಿಂದಿ

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *