
Read Time:54 Second
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ವಿಶೇಷ ತನಿಖಾ ದಳದ (ಎಸ್.ಐ.ಟಿ) ಅಧಿಕಾರಿಗಳು ಮಂಗಳವಾರ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದರು.


ಪ್ರಕರಣದ ಮೃತದೇಹಗಳ ಅವಶೇಷಗಳು ಪತ್ತೆಯಾದ ಸ್ಥಳಗಳ ಸಮಗ್ರ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ, ಎಸ್.ಐ.ಟಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಆಗಮಿಸಿದ್ದರು.
ಪ್ರಕರಣದ ತನಿಖೆಗೆ ಪೂರಕವಾಗುವಂತೆ, ಹಿಂದೆ ಅವಶೇಷಗಳು ದೊರೆತಿದ್ದ ನಿರ್ದಿಷ್ಟ ಜಾಗಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ಕೆಚ್ ತಯಾರಿಸುವ ಕಾರ್ಯವನ್ನು ಅಧಿಕಾರಿಗಳ ತಂಡ ಕೈಗೊಂಡಿದೆ ಎಂದು ತಿಳಿದುಬಂದಿದೆ.