ಪ್ರಧಾನಿ ಉಡುಪಿ ಭೇಟಿ ಹಿನ್ನೆಲೆ: ನ.28ರಂದು ಶಾಲೆಗಳಿಗೆ ರಜೆ ಘೋಷಣೆ- ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಪ್ರಧಾನಿ ಮೋದಿ ರೋಡ್ ಶೋ

0 0
Read Time:1 Minute, 38 Second

ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ ಉಡುಪಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಧೆ ಕಾಪಾಡುವ ನಿಟ್ಟಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಸ್ವರೂಪ ಅವರು ಅದೇಶಿಸಿದ್ದಾರೆ.

ಉಡುಪಿ ನಗರ ಠಾಣಾ ವ್ಯಾಪ್ತಿಯ ಮಲ್ಪೆ ಠಾಣಾ ವ್ಯಾಪ್ತಿಯ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯ ಅಂಗನವಾಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನ.28ರಂದು ರಜೆ ಘೋಷಣೆ ಮಾಡಲಾಗಿದೆ.

ಕಾನೂನು ಸುವ್ಯವಸ್ಥೆ ಹಾಗೂ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳಿಗ್ಗೆ ಗಂಟೆ 11.40ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ‘ರೋಡ್ ಶೋ’. ಉಡುಪಿ-ಬನ್ನಂಜಿಯ ಡಾ|ವಿ.ಎಸ್. ಆಚಾರ್ಯ ಬಸ್ ನಿಲ್ದಾಣದ ಬಳಿ ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಪ್ರಾರಂಭಗೊಂಡು ಸಿಟಿ ಬಸ್ ನಿಲ್ದಾಣ ಮಾರ್ಗವಾಗಿ ಕಲ್ಸಂಕ ಜಂಕ್ಷನ್ ವರೆಗೆ ಸಾಗಲಿದೆ.ಕಲ್ಸಂಕ ರಸ್ತೆಯಿಂದ ನೇರವಾಗಿ ಪಾರ್ಕಿಂಗ್ ಏರಿಯಾ-ರಥಬೀದಿ ಮೂಲಕ ಮಧ್ಯಾಹ್ನ ಗಂಟೆ 12.00ಕ್ಕೆ ಶ್ರೀ ಕೃಷ್ಣ ಮಠವನ್ನು ತಲುಪಿ, ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹೇಳಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *