
Read Time:1 Minute, 8 Second
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿ ರುವ ನಿರಂತರ ಮಳೆಯಿಂದಾಗಿ ವಿವಿಧೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಇನ್ನಷ್ಟು ಪ್ರಾಕೃತಿಕ ವಿಕೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಬೀಚ್, ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ.


ದಕ್ಷಿಣ ಕನ್ನಡ ಡಿಸಿ ಮುನ್ನೈ ಮುಗಿಲನ್ ನಿಷೇಧ ಆದೇಶ ಹೊರಡಿಸಿದ್ದು, ಮಳೆಗಾಲ ಮುಗಿಯುವ ವರೆಗೆ ಹೋಮ್ ಸ್ಟೇ, ರೆಸಾರ್ಟ್ ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರೆಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹೇರಲಾಗಿದೆ. ಇದರ ಜೊತೆಗೆ ನದಿ, ಸಮುದ್ರ ತಟದಲ್ಲಿ ಈಜು, ಮೋಜು-ಮಸ್ತಿ, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.