
Read Time:1 Minute, 3 Second
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಪೋಟೋವನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ ಶ್ರದ್ದಾಂಜಲಿ ಎಂಬ ಪೋಸ್ಟ್ ಹಾಕಲಾಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.



ಬಿಲ್ಲವ ಸಂದೇಶ್ ಎಂಬ ಫೇಸ್ಬುಕ್ ಖಾತೆಯಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಭಾವಚಿತ್ರ ಬಳಸಿ ಅವರನ್ನು ನಿಂದಿಸಿ, ಅವಹೇಳನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವ್ಯಾಪಕವಾಗಿ ಖಂಡನೆ ವ್ಯಕ್ತವಾಗಿದೆ.
ಸುಳ್ಯ ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಸುಳ್ಯ ಪೋಲೀಸ್ ಠಾಣೆಗೆ ದೂರು ನೀಡಿದ್ದು, ಪೋಸ್ಟ್ ಹಾಕಿದ ಆರೋಪಿಯನ್ನು ಬಂಧಿಸುವಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗೆ ಸುಳ್ಯ ಬಿಜೆಪಿ ಮುಖಂಡರು ಮನವಿ ಮಾಡಿದ್ದಾರೆ.



