ಸಚಿವ ಜಮೀರ್ ಅಹ್ಮದ್ ಗೆ ಬಿಗ್ ಶಾಕ್ : ನ್ಯಾಯಾಂಗ ನಿಂದನೆ ಹಿನ್ನೆಲೆ ಕ್ರಮ ಕೈಗೊಳ್ಳಲು ಗವರ್ನರ್ ಸೂಚನೆ

0 0
Read Time:2 Minute, 36 Second

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿದ ಹೈಕೋರ್ಟ್ ಆದೇಶವನ್ನು ಸಚಿವ ಜಮೀರ್ ಅಹ್ಮದ್ ಖಾನ್ ರಾಜಕೀಯ ತೀರ್ಪು ಎಂದು ಕರೆದಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯಪಾಲರು ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದಿದ್ದಾರೆ.

ಹೌದು ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ ಸಾಮಾಜಿಕ ಕಾರ್ಯಕರ್ತ ಟಿ ಜೆ ಅಬ್ರಹಾಂ ಮನವಿ ಮಾಡಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಹೈಕೋರ್ಟ್ ಆದೇಶದ ನಂತರ, ಕರ್ನಾಟಕ ವಸತಿ ಮತ್ತು ವಕ್ಫ್ ಸಚಿವ ಬಿ ಝಡ್ ಜಮೀರ್ ಅಹಮದ್ ಖಾನ್ ಇದು ನಿಮ್ಮೆಲ್ಲರ ಮುಂದೆ ರಾಜಕೀಯ ತೀರ್ಪು ಎಂದು ಬಹಿರಂಗವಾಗಿ ಕರೆದಿದ್ದಾರೆ ಎಂದು ಅಬ್ರಾಹಂ ತಿಳಿಸಿದ್ದರು. ಅಬ್ರಾಹಂ ನೀಡಿದ ದೂರಿನ ಹಿನ್ನಲೆಯಲ್ಲಿ ರಾಜ್ಯಪಾಲರು ಅಡ್ವೋಕೇಟ್ ಜನರಲ್ ಗೆ ಪತ್ರ ಬರೆದು, ಮುಂದಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ?

ಮುಡಾ ಕೇಸ್ ನಲ್ಲಿ ತಮ್ಮ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಕೊಟ್ಟಿದ್ದ ಅನುಮತಿಯನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯನವರು ಹೈಕೋರ್ಟ್ ಮೊರೆ ಹೋಗಿದ್ದರು. ಸಿದ್ದರಾಮಯ್ಯನವರ ಅರ್ಜಿಯನ್ನು ತಳ್ಳಿಹಾಕಿದ ಹೈಕೋರ್ಟ್, ರಾಜ್ಯಪಾಲರ ನಡೆ ಸರಿಯಾಗಿದೆ ಎಂದು ಹೇಳಿತ್ತು.

ಸೆ. 25ರಂದು, ತೀರ್ಪು ನೀಡಿದ ಜನಪ್ರತಿನಿಧಿ ನ್ಯಾಯಾಲಯ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸುವಂತೆ ಹಾಗೂ ಎಫ್‌ಐಆರ್ ದಾಖಲಿಸುವಂತೆ ಮೈಸೂರು ಲೋಕಾಯುಕ್ತ ಎಸ್ಪಿಗೆ ಸೂಚನೆ ನೀಡಿತು.ಈ ತೀರ್ಪಿನ ವಿರುದ್ಧ ಟೀಕೆ ಮಾಡಿದ್ದ ಜಮೀರ್ ಅಹ್ಮದ್, ನ್ಯಾಯಾಲಯದ ತೀರ್ಪು ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು.ಇದೀಗ ಟಿಜೆ ಅಬ್ರಹಾಂ ನೀಡಿದ ದೂರಿನ ಮೇರೆಗೆ ರಾಜ್ಯಪಾಲರು ಕ್ರಮಕ್ಕೆ ಸೂಚನೆ ನೀಡಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *