
Read Time:1 Minute, 17 Second
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಾನೂರು ಶ್ರೀ ಗುರು ನಾರಾಯಣ ವೃತ್ತದ ಬಳಿ ನಿಲ್ಲಿಸಿದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ


ಕೇಡಿ ನಿವಾಸಿ ಸಂಪತ್ ಕುಮಾರ್ (28) ಅವರು ದಿನಾಂಕ 10.11.2025 ರಂದು ರಾತ್ರಿ KA 18-J-6348 ನಂಬರಿನ ಬೈಕನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಬಳಿಕ ಬೈಕ್ ಕಳವುಗೊಂಡಿದ್ದು, ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಮೋ ಪ್ರಕರಣ ಸಂ 88/2025 ಕಲಂ 3೦3(2) ಬಿಎನ್ ಎಸ್ 2023 ಅಡಿಯಲ್ಲಿ ಪ್ರಕರಣದ ದಾಖಲಿಸಲಾಗಿತ್ತು.
ತನಿಖೆ ವೇಳೆ ವೇಣೂರು ನಿವಾಸಿ ಮಹಮ್ಮದ್ ಇರ್ಷಾದ್ (25) ಹಾಗೂ ಪಾಡಂಗಡಿ ನಿವಾಸಿ ಸಾಧಿಕ್ ಖಾನ್ (26) ಅವರನ್ನು ಪೊಲೀಸರು ಬಂಧಿಸಿದ್ದು ಕಳವಾದ ದ್ವಿಚಕ್ರ ವಾಹನವನ್ನು ಸ್ವಾಧೀನ ಪಡಿಸಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


