ಕರಾವಳಿ ಭಾಗಗಳಲ್ಲಿ BSNL ನೆಟ್ ವರ್ಕ್ ಸಮಸ್ಯೆ..! ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ

0 0
Read Time:1 Minute, 16 Second

ಉಡುಪಿ: ಕರಾವಳಿಯ, ಮಲೆನಾಡು ಭಾಗದ ನೆಟ್‌ವರ್ಕ್‌ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕರಾವಳಿಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕ್ಯಾ| ಬ್ರಿಜೇಶ್‌ ಚೌಟ ಅವರು ಹೊಸದಿಲ್ಲಿಯಲ್ಲಿ ಮಂಗಳವಾರ ಬಿಎಸ್‌ಎನ್‌ಎಲ್‌ ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧ್ಯಕ್ಷ ರಾಬರ್ಟ್‌ ರವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಚಿಕ್ಕಮಗಳೂರಿನಲ್ಲಿ ದೂರವಾಣಿ ಸಂಪರ್ಕದ ಸಮಸ್ಯೆ ಇದೆ. ಈಗ ಇರುವ ಸುಮಾರು 400ಕ್ಕೂ ಹೆಚ್ಚು ಬಿಎಸ್‌ಎನ್‌ಎಲ್‌ ಟವರ್‌ಗಳು ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಮೊಬೈಲ್‌ ಬಳಕೆದಾರರಿಗೆ ಸಂಪರ್ಕದ ಕೊರತೆ ಕಾಡುತ್ತಿದೆ. ಜಿಲ್ಲೆಯ ಎಲ್ಲ ಬಿಎಸ್‌ಎನ್‌ಎಲ್‌ ಟವರ್‌ಗಳ ಪುನಶ್ಚೇತನಕ್ಕೆ ಅಗತ್ಯವಾದ ತಾಂತ್ರಿಕ ಉಪಕರಣಗಳನ್ನು ಕೂಡಲೇ ಸರಬರಾಜು ಮಾಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ರಾಬರ್ಟ್‌ ರವಿ ಯವರು ಈ ಎಲ್ಲ ಸಮಸ್ಯೆಗಳನ್ನು ಗಮನಿಸಿ 20 ದಿವಸಗಳ ಒಳಗಡೆ ಎಲ್ಲ ತಾಂತ್ರಿಕ ಉಪಕರಣ ಮತ್ತು ಆರ್ಥಿಕ ಸಹಕಾರವನ್ನು ಸರಬರಾಜು ಮಾಡಿ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದರು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *