ಮಂಗಳೂರಿಗೆ ಬರುತ್ತಿದ್ದ ಬಸ್ ಅಪಘಾತ: ಮಗು ಸಾವು , 10 ಮಂದಿಗೆ ಗಾಯ

0 0
Read Time:1 Minute, 12 Second

ದಾವಣಗೆರೆಯಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಅಪಘಾತವಾಗಿ, ಮಗು ಸಾವನ್ನಪ್ಪಿರುವ ಘಟನೆಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್​​ನಲ್ಲಿ ನಡೆದಿದೆ.

ಒಂದೂವರೆ ವರ್ಷದ ಮಗು ಮೃತಪಟ್ಟಿದ್ದರೆ, ಘಟನೆಯಲ್ಲಿ 10 ಜನರಿಗೆ ಗಂಭೀರ ಗಾಯವಾಗಿದೆ. ಬಸ್​ ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದ್ದು, ಘಟನೆ ಸಂಬಂಧ ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಿಂದ ಮಂಗಳೂರಿಗೆ ತೆರಳುತ್ತಿದ್ದ ದುರ್ಗಾಂಬ ಸಂಸ್ಥೆಯ ಬಸ್‌ ಹುಲಿಕಲ್‌ ಘಾಟಿಯಲ್ಲಿ ಧರೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸಾವನ್ನಪ್ಪಿದೆ. ಶರೀಫಾ ಬಿ (57) , ಇಮಾಮ್‌ ಸಾಬ್‌ (73), ಸಫಾನ (28) ಎಂಬುವವರು ಗಾಯಗೊಂಡಿದ್ದಾರೆ. ಅವರನ್ನು ಉಡುಪಿಯ ಆದರ್ಶನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂ ಆಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *