
Read Time:53 Second
ಮಂಗಳೂರು: ಕಾರ್ಕಳದಿಂದ ಪಡುಬಿದ್ರೆ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಬೀಚ್ ರಸ್ತೆ ಬಳಿ ನಡೆದಿದೆ.


ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಅತೀ ವೇಗದಿಂದ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದೆ. ಚಾಲಕ ತಕ್ಷಣ ಬ್ರೇಕ್ ಹಾಕಿ ಬಸ್ಸನ್ನು ನಿಲ್ಲಿಸಿದ್ದರಿಂದ ಅಪಾಯ ತಪ್ಪಿದೆ.
ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಘಟನೆ ಕಾರಣ ಎಂದು ಆರೋಪಿಸಲಾಗಿದೆ. ಸಂಚಾರಿ ಉತ್ತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


