
Read Time:49 Second
ಫರಂಗಿಪೇಟೆ: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬನ್ನೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರಾಷ್ಟ್ರೀಯ ಹೆದ್ದಾರಿಯ ಫರಂಗಿಪೇಟೆ ಸಮೀಪ ಹತ್ತನೇ ಮೈಲ್ ಕಲ್ಲು ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ


ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ವಿಭಜಕದ ಮಧ್ಯೆ ಇರುವ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಎರಡು ಮರಗಳಿಗೆ ಢಿಕ್ಕಿ ಹೊಡೆದು ಉರುಳಿಬಿದ್ದಿದೆ. ಇದರಿಂದ 10ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.