ಕೆನರಾ ಬ್ಯಾಂಕ್‌ ದರೋಡೆ: ಪ್ರಕರಣದ ಮಾಸ್ಟರ್ ಮೈಂಡ್ ಬ್ಯಾಂಕ್ ಮ್ಯಾನೇಜ‌ರ್ ಸೇರಿ ಮೂವರ ಬಂಧನ

0 0
Read Time:1 Minute, 57 Second

ಕೆನರಾ ಬ್ಯಾಂಕ್ ನಲ್ಲಿ ನಡೆದಿದ್ದ ಕೋಟ್ಯಾಂತರ ಮೌಲ್ಯದ ಬಂಗಾರ ಹಾಗೂ ನಗದು ದರೋಡೆ ಪ್ರಕರಣವನ್ನು ವಿಜಯಪುರ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ವ್ಯವಸ್ಥಾಪಕ ವಿಜಯಕುಮಾರ ಮಿರಿಯಾಲ(41), ಹುಬ್ಬಳ್ಳಿ ಜನತಾ ಕಾಲೊನಿಯ ಖಾಸಗಿ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ(38) ಮತ್ತು ಹುಬ್ಬಳ್ಳಿ ಚಾಲುಕ್ಯ ನಗರದ ಸುನೀಲ ಮೋಕಾ(40) ಎಂಬುವವರನ್ನು ಬಂಧಿಸಿರುವುದಾಗಿ ಹೇಳಿದರು.

ಆರೋಪಿಗಳು ವ್ಯವಸ್ಥಿತವಾಗಿ ಒಳಸಂಚು ಮಾಡಿ ಬ್ಯಾಂಕಿನಲ್ಲಿದ್ದ ಬೃಹತ್ ಮೊತ್ತದ ಬಂಗಾರದ ಆಭರಣಗಳನ್ನು ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದ್ದಲ್ಲದೆ, ತನಿಖೆಯ ದಿಕ್ಕು ತಪ್ಪಿಸುವಂತಹ ಹಲವಾರು ದೃಶ್ಯಾವಳಿಗಳನ್ನು ಸೃಷ್ಟಿಸಿದ್ದರೂ ಪ್ರಕರಣವನ್ನು ಭೇದಿಸಲಾಗಿದೆ ಎಂದು ತಿಳಿಸಿದರು.

ಆರೋಪಿಗಳ ಬಳಿ ಇದ್ದ 10.75 ಕೋಟಿ ಮೌಲ್ಯದ 10.5 ಕೆ.ಜಿ ಬಂಗಾರದ ಆಭರಣ ಹಾಗೂ ಆಭರಣ ಕರಗಿಸಿದ ಬಂಗಾರದ ಗಟ್ಟಿ ಹಾಗೂ ಕೃತ್ಯಕ್ಕೆ ಬಳಸಿದ 2 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನುಳಿದ ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಾಹಿತಿ ನೀಡಿದರು.

ಮೇ 25 ರಂದು ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಲಾಕರ್ನಲ್ಲಿದ್ದ ಅಂದಾಜು 53.26 ಕೋಟಿ ರೂ. ಮೌಲ್ಯದ 58.97 ಕೆ.ಜಿ ಬಂಗಾರದ ಆಭರಣಗಳು . 5,20,450 2 ದರೋಡೆಯಾಗಿತ್ತು.

Happy
Happy
0 %
Sad
Sad
0 %
Excited
Excited
0 %
Sleepy
Sleepy
0 %
Angry
Angry
0 %
Surprise
Surprise
0 %

Average Rating

5 Star
0%
4 Star
0%
3 Star
0%
2 Star
0%
1 Star
0%

Leave a Reply

Your email address will not be published. Required fields are marked *