
Read Time:48 Second
ಮಂಗಳೂರು: ವಿಮಾನ ನಿಲ್ದಾಣ ರಸ್ತೆಯಲ್ಲಿ ಕಾರೊಂದು ರಸ್ತೆಯ ಬದಿಗೆ ಉರುಳಿ ಬಿದ್ದು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.


ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತವಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಪಘಾತ ನಡೆದ ತಕ್ಷಣ ಕಾರಿನಲ್ಲಿದ್ದವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಯ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ರಸ್ತೆಯ ಬದಿಗೆ ಉರುಳಿದ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಸ್ಥಳೀಯರೊಬ್ಬರ ಮಾಹಿತಿ ಪ್ರಕಾರ ಚಾಲಕನಿಗೆ ತೀವು ಸ್ವರೂಪದ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

