ಪುತ್ತೂರು: 106 ಕೆಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ
ಪುತ್ತೂರು: ಎರಡು ವಾಹನಗಳಲ್ಲಿ ಸುಮಾರು 106 ಕೆಜಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬೆಳ್ತOಗಡಿ, ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ.(37) ಮತ್ತು ಅಬ್ದುಲ್ ಸಾದಿಕ್ (37) ಬಂಧಿತ ಆರೋಪಿಗಳು. ಬಂಧಿತರಿOದ ಎರಡು ವಾಹನಗಳಲ್ಲಿದ್ದ 106 ಕೆಜಿ ಮತ್ತು 160 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಅವುಗಳ ಮೌಲ್ಯ 53.03 ಲಕ್ಷ ರೂಪಾಯಿ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ತಿಳಿಸಿದ್ದಾರೆ. ಕಾರು ಮತ್ತು ಗೂಡ್ಸ್…

