ಮಂಗಳೂರು: ಮಹಿಳೆಯ ಕತ್ತಿನಿಂದ ಕರಿಮಣಿ ಸರ ಕಸಿದು ಪರಾರಿ- ಆರೋಪಿ ಅರೆಸ್ಟ್
ಮಂಗಳೂರು: ನಗರದ ಕೊಂಚಾಡಿ ಕೊಪ್ಪಳಕಾಡು ಎಂಬಲ್ಲಿ ಮಹಿಳೆಯ ಕುತ್ತಿಗೆಯಿಂದ 32 ಗ್ರಾಂ ತೂಕದ ಕರಿಮಣಿ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಸಿದ್ದಾರೆ. ಬಂಟ್ವಾಳ ತಾಲೂಕಿನ ರೋಹಿತ್ (25) ಬಂಧಿತ ಆರೋಪಿಯಾಗಿದ್ದಾನೆ. ಡಿ.25ರಂದು ಸಂಜೆ 6.30ಕ್ಕೆ ಕೊಂಚಾಡಿ ಗುರುನಗರದ ನಿವಾಸಿಗಳಾದ ರತ್ನಾವತಿ ಮತ್ತು ಅವರ ಮಗಳು ರಶ್ಮಿ ಯೆಯ್ಯಾಡಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿದ್ದರು. ಕೊಪ್ಪಳಕಾಡು ರಸ್ತೆಯಲ್ಲಿ ಅಪರಿಚಿತ ವ್ಯಕ್ತಿ ರತ್ನಾವತಿಯ ಕುತ್ತಿಗೆಗೆ ಕೈ ಹಾಕಿ ಕರಿಮಣಿ ಸರ ಕಸಿದು ಪರಾರಿಯಾಗಿದ್ದರು. ಸಿಸಿ ಕ್ಯಾಮರಾ…

