ಮಂಗಳೂರು: ಸ್ಕೂಟರ್ ಚಲಾಯಿಸಿದ ಅಪ್ರಾಪ್ತ ಬಾಲಕ – ಮಾಲಕನಿಗೆ 25,000 ರೂ. ದಂಡ

ಮಂಗಳೂರು: ಅಪ್ರಾಪ್ತ ಬಾಲಕ ಸ್ಕೂಟರ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಆರೋಪದಡಿ ಸ್ಕೂಟರ್ ಮಾಲಕನಿಗೆ ನ್ಯಾಯಾಲಯದ ದಂಡ ವಿಧಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ನಂತೂರು ಪದವು ಬಳಿ 2025ರ ಮಾ.30ರಂದು ಮುಂಜಾವ 3:50ರ ವೇಳೆಗೆ ಅಪ್ರಾಪ್ತ ಬಾಲಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ. ಆ ವೇಳೆ ಅದೇ ದಿಕ್ಕಿನಲ್ಲಿ ಕುಂಟಿಕಾನ ಕಡೆಗೆ ಸಾಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಬಾಲಕ ಢಿಕ್ಕಿ ಹೊಡೆದಿದ್ದು, ಇದರಿಂದ ಎರಡೂ ವಾಹನದಲ್ಲಿದ್ದವರು ಗಾಯಗೊಂಡಿದ್ದರು. ಈ ಬಗ್ಗೆ ಕದ್ರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಎಸ್‌ ಐ…

Read More

ಪುತ್ತೂರು: ಮನೆಯಂಗಳದಲ್ಲಿದ್ದ ನೀರಿನ ಟ್ಯಾಂಕ್‌ಗೆ ಬಿದ್ದು ಮಗು ಸಾವು!!

ಪುತ್ತೂರು: ತಾವರೆ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಮೃತಪಟ್ಟ ಘಟನೆ ಬನ್ನೂರು ನೀರ್ಪಾಜೆಯಲ್ಲಿ ನಡೆದಿದೆ. ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಬೆಳಕಿಗೆ ಬಂದಿದ್ದು, ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಲಾಗಿತ್ತು. ಆಗಾಗಲೇ ಮಗು ಮೃತಪಟ್ಟಿದೆ ಎಂದು ತಿಳಿದುಬಂದಿದೆ.

Read More

ಮಂಗಳೂರು: ಯುವಕ ನೇಣು ಬಿಗಿದು ಆತ್ಮಹತ್ಯೆ!!

ಮಂಗಳೂರು ನಗರ ಹೊರ ವಲಯದ ಪಡೀಲ್‌ನಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.  ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್(26) ಎಂದು ಗುರುತಿಸಲಾಗಿದೆ. ಶ್ರವಣ್ ಅವರ ಮೃತದೇಹ ಪಡೀಲ್ ಕೊಡೆಕ್ಕಲ್ ಬಳಿ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಂಕನಾಡಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. 

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಮಾಣಿಲ ಸ್ವಾಮೀಜಿಯವರಿಗೆ ಆಮಂತ್ರಣ ಪತ್ರ ನೀಡಿ ಆಹ್ವಾನಿಸಿ, ಆಶೀರ್ವಾದ ಪಡೆದ ಪದಾಧಿಕಾರಿಗಳು

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 4, 2026ರಂದು ನಡೆಯಲಿರುವ ಕುಂಭ ಕಲಾವಳಿ ಕುಲಾಲ ಕಲಾ ಸೇವಾಂಜಲಿ ಕಾಯ೯ಕ್ರಮದ ಆಮಂತ್ರಣ ಪತ್ರಿಕೆಯನ್ನು ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್‌ನ ಲ. ಅನಿಲ್‌ದಾಸ್ ಹಾಗೂ ಪದಾಧಿಕಾರಿಗಳು ಮಾಣಿಲ ಶ್ರೀಧಾಮದ…

Read More

ಕಾಸರಗೋಡು: ಬಾಡಿಗೆ ಮನೆಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ

ಕಾಸರಗೋಡು: ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಯಾಬಜಾರ್‌ ಬಳಿಯ ಚೆರುಗೋಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ 19 ವರ್ಷದ ಐಟಿಐ ವಿದ್ಯಾರ್ಥಿ ಅಬ್ದುಲ್ ಶಿಹಾಬ್ ಬುಧವಾರ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಕರ್ನಾಟಕದವರಾದ ಶಿಹಾಬ್ ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿ ವಾಸಿಸುತ್ತಿದ್ದರು. ಅವರ ತಂದೆ ಬಶೀರ್ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಬೆಳಿಗ್ಗೆ ಕುಟುಂಬ ಸದಸ್ಯರು ಕೋಣೆಗೆ ತೆರಳಿದಾಗ ಆತ ಭಾವನಾತ್ಮಕ ತೊಂದರೆ ಅನುಭವಿಸಿರುವ ಸುಳಿವುಗಳು ಗೋಚರಿಸಿದವು ಎಂದು ತಿಳಿಸಲಾಗಿದೆ. ವೈಯಕ್ತಿಕ ಸಂಬಂಧಕ್ಕೆ ಸಂಬಂಧಿಸಿದ ಮಾನಸಿಕ ಒತ್ತಡದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು…

Read More

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ಗೆ ನಿರೀಕ್ಷಣಾ ಜಾಮೀನು

ದೀಪಾವಳಿ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.22ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿರುವ ಬಗ್ಗೆ ಈಶ್ವರಿ ಪದ್ಮುಂಜ ಅವರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು…

Read More

ಮಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಪ್ರತೀಕಾರ ಪೋಸ್ಟ್‌..!! 16 Instagram ಖಾತೆ ವಿರುದ್ಧ FIR

ಮಂಗಳೂರು: ಪೊಲೀಸರ ಕಟ್ಟುನಿಟ್ಟಿನ ಕ್ರಮದ ಬಳಿಕ ಸೋಷಿಯಲ್‌ ಮೀಡಿಯಾದಲ್ಲಿ ಗಲಭೆ, ಹಿಂಸೆಗೆ ದುಷ್ಪ್ರೇರಣೆ ನೀಡುವ ಪೋಸ್ಟ್‌ಗಳು ಕಡಿಮೆಯಾಗಿದ್ದವು. ಇದೀಗ ಮತ್ತೆ ಸೋಷಿಯಲ್‌ ಮೀಡಿಯಾದಲ್ಲಿ ಇಂತಹಾ ಪೋಸ್ಟ್‌ಗಳು ಕಾಣಿಸಿದ್ದು ಆತಂಕಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ಓಡಾಡುತ್ತಿದ್ದು, Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. 2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ…

Read More

ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್ ಮಾಲಕ ಕಾರು ಅಪಘಾತಕ್ಕೆ ಬಲಿ..!!

ಮಂಗಳೂರಿನ ಹೆಸರಾಂತ Gowjee Events ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಲ್ಲಿ ನಿಧನರಾಗಿದ್ದಾರೆ. ರಾತ್ರಿ (ಡಿಸೆಂಬರ್ 10) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಸಂಭವಿಸಿದೆ,ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Read More

ಜ. 04ರಂದು “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ: ಶ್ರೀ ವಿಠಲ್ ಕುಲಾಲ್ ಅವರು “ಉದ್ಯಮ ಸಿಂಧೂರ” ಪ್ರಶಸ್ತಿಗೆ ಆಯ್ಕೆ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಪುತ್ತೂರು: 21ಲಕ್ಷ ಮೌಲ್ಯದ ಕಾಫಿ ಕಳ್ಳತನ- ಐವರು ಬಂಧನ, 80 ಚೀಲ ವಶಕ್ಕೆ

ಪುತ್ತೂರು: ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದು, ಲಕ್ಷಾಂತರ ಮೌಲ್ಯದ ಕಾಫಿ ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಮುಖ ಆರೋಪಿ ಆಶ್ಲೇಷ ಭಟ್, ಈತನ ಸಹಚರರಾದ ನಾರಾಯಣ ಶೆಟ್ಟಿಗಾರ್, ಮಿಥುನ್ ಕುಮಾರ್, ವಿಜಯ ಶೆಟ್ಟಿ ಹಾಗೂ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿಗಳು. ಕಬಕ ನಿವಾಸಿ ತೃತೇಶ್ (29) ಅವರ ದೂರಿನಂತೆ, ಲಾರಿ ಮಾಲಕ-ಚಾಲಕರಾದ ಅವರು, ಡಿ.3ರಂದು ಪಿರಿಯಪಟ್ಟಣದ ಕಾಫಿ ಕ್ಯೂರಿಂಗ್ ಕಂಪೆನಿಯಿಂದ ತಲಾ 60 ಕೆಜಿ…

Read More