ಶಾಸಕ ಹರೀಶ್‌ ಪೂಂಜಾ ಬಂಧನ ಬೇಡ ಎಂದ ಹೈಕೋರ್ಟ್‌

ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ಮತ್ತು ಪೊಲೀಸರನ್ನು ನಿಂದಿಸಿದ ಆರೋಪ ಎದುರಿಸುತ್ತಿರುವ ಬೆಳ್ತಂಗಡಿ ಶಾಸಕಹರೀಶ್‌ ಪೂಂಜಾ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರಕಾರದ ಹೆಚ್ಚುವರಿ ಅಭಿಯೋಜಕರು ಹೈಕೋರ್ಟ್‌ಗೆ ತಿಳಿಸಿದ್ದಾರೆ. 2 ಎಫ್‌ಐಆರ್‌ ಪ್ರಶ್ನಿಸಿ ಪೂಂಜಾ ಹೈಕೋರ್ಟ್‌ ಮೊರೆ ಹೋಗಿದ್ದು, ಈ ಅರ್ಜಿ ವಿಚಾರಣೆಯು ನ್ಯಾ.ಕೃಷ್ಣ ದೀಕ್ಷಿತ್‌ ಅವರ ಪೀಠದಲ್ಲಿ ನಿನ್ನೆ ನಡೆದಿತ್ತು. ತಮ್ಮ ಕಕ್ಷಿದಾರರಿಗೆ ಪೊಲೀಸರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಪೂಂಜಾ ಪರ ವಕೀಲರು ಹೇಳಿದಾಗ,ಅರ್ಜಿದಾರರನ್ನು ಬಂಧಿಸದಂತೆ ಕೋರ್ಟ್‌ ಸೂಚಿಸಿದೆ.

Read More

ಮಂಗಳೂರು : ಅಂಗಡಿ ಬೋರ್ಡ್‌ಗಳಲ್ಲಿ ಕನ್ನಡ ಕಡ್ಡಾಯ- ಮನಪಾ ಆಯುಕ್ತರ ಸೂಚನೆ

ಮಂಗಳೂರು : ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರಗಳ ಉದ್ದಿಮೆಗಳು, ಟ್ರಸ್ಟ್‌ಗಳು, ಸಮಾಲೋಚನಾ ಕೇಂದ್ರಗಳು, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮನೋರಂಜನಾ ಕೇಂದ್ರಗಳು, ಹೊಟೇಲ್‌ಗಳು ತಮ್ಮ ನಾಮಫಲಕಗಳ ಮೇಲ್ಬಾಗದಲ್ಲಿ ಕನ್ನಡ ಭಾಷೆಯನ್ನು ಶೇ.60ರಷ್ಟು ಪ್ರದರ್ಶಿಸುವುದು ಕಡ್ಡಾಯವಾಗಿದೆ. ಹಾಗಾಗಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಉದ್ದಿಮೆದಾರರು ಉದ್ದಿಮೆ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಅಗ್ರಸ್ಥಾನದಲ್ಲಿ ಶೇ.60ರಷ್ಟು ಪ್ರದರ್ಶಿಸುವ ನಿಬಂಧನೆಯನ್ನು ವಿಧಿಸಿ ಉದ್ದಿಮೆ ಪರವಾನಿಗೆಯನ್ನು ನೀಡಲಾಗುತ್ತಿದೆ. ಉದ್ದಿಮೆ ಪರವಾನಿಗೆ ನವೀಕರಣ ಅಥವಾ ಹೊಸದಾಗಿ ಮಂಜೂರಾತಿ ವೇಳೆ ಈ ಬಗ್ಗೆ ಪರಿಶೀಲಿಸಲಾಗುತ್ತಿದೆ. ಕೆಲವು…

Read More

ಮಂಗಳೂರು: ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಗೆ ಕುಶಾಲಪ್ಪ ಕುಲಾಲ್ ಆಯ್ಕೆ

ಪ್ರತಿಷ್ಠಿತ ಮಂಗಳೂರು ವಕೀಲರ ಸಂಘದ ಕಾರ್ಯಕಾರಿಣಿ ಸಮಿತಿಗೆ ಬಹುಮತದಿಂದ ಆಯ್ಕೆಗೊಂಡ,ದ. ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಕೋಶಾಧಿಕಾರಿ ಶ್ರೀ ಕುಶಾಲಪ್ಪ ಕುಲಾಲ್ ರವರನ್ನು ಮಾತೃ ಸಂಘದ ಅಧ್ಯಕ್ಷರು ಮಯೂರ್ ಉಳ್ಳಾಲ್ , ಪ್ರಧಾನ ಕಾರ್ಯದರ್ಶಿ ಸದಾಶಿವ ಕುಲಾಲ್ ಹಾಗೂ ಜೊತೆ ಕಾರ್ಯದರ್ಶಿಯಾದ ಪ್ರದೀಪ್ ಅತ್ತಾವರ ಮತ್ತು ಮುಡಿಪು ಕುಲಾಲ ಸಂಘದ ಅಧ್ಯಕ್ಷರಾದ ಪುಂಡರಿಕಾಕ್ಷ ಅಭಿನಂದಿಸಿದರು.

Read More

ಉಳ್ಳಾಲ: ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನಿಗೆ ಹಲ್ಲೆ ..!

ಉಳ್ಳಾಲ : ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟದ ಬಳಿಕ ಮಂಗಳವಾರ ಸಂಜೆ ಕುಂಪಲದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದ ಬಿಜೆಪಿ ಕಾರ್ಯಕರ್ತನ ತಲೆಗೆ ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಲೆಗೆತ್ನಿಸಿದ ಘಟನೆ ಕುಂಪಲ ಬಾರ್ದೆ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಸದ್ಯ ಉಳ್ಳಾಲ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕುಂಪಲ ಮೂರುಕಟ್ಟ, ಪಲ್ಲ ನಿವಾಸಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ(35) ಹಲ್ಲೆಗೊಳಗಾದ ಯುವಕ. ಬಿಜೆಪಿ ಗೆಲುವು ಸಾಧಿಸಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ಪೂಜಾರಿ ಮತ್ತು ಸ್ನೇಹಿತರು ಮಂಗಳವಾರ ಸಂಜೆ…

Read More

ಮಂಗಳೂರು:ಕರ್ತವ್ಯ ಲೋಪ ಪ್ರಕರಣ-ವೆನ್ಲಾಕ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಅಮಾನತು

ಮಂಗಳೂರು: ಕರ್ತವ್ಯ ಲೋಪ ಎಸಗಿರುವ ಆರೋಪದ ಮೇರೆಗೆ ದ.ಕ. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಕಚೇರಿ ಅಧೀಕ್ಷಕ ಲೋಕೇಶ್‌ರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಔಷಧ ಖರೀದಿ ಪ್ರಕ್ರಿಯೆಯಲ್ಲಿ ಕೆಟಿಪಿಪಿ ನಿಯಮ ಉಲ್ಲಂಘಿಸಿದ್ದಲ್ಲದೆ ಮರು ಅನುಮೋದನೆ ಪಡೆಯದೆ ಬಿಲ್ ಪಾವತಿಗಾಗಿ ಕಡತವನ್ನು ಮಂಡಿಸುವ ಮೂಲಕ ತನ್ನ ಕರ್ತವ್ಯವನ್ನು ನಿರ್ಲಕ್ಷಿಸಿದ ಆರೋಪದ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಇಲಾಖಾ ತನಿಖೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅಮಾನತಿನ ಅವಧಿಯಲ್ಲಿ ಲೋಕೇಶ್ ಕಚೇರಿಯ ಪೂರ್ವಾನುಮತಿ ಪಡೆಯದೆ…

Read More

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಮತ್ತೋರ್ವ ಆರೋಪಿಯನ್ನು ಬಂಧಿಸಿದ ‘NIA

ದಕ್ಷಿಣಕನ್ನಡ : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್​ಐಎ ಅಧಿಕಾರಿಗಳು ಮತ್ತೋರ್ವ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಹೌದು ಆರೋಪಿಯು ಮುಂಬೈ ವಿಮಾನ ನಿಲ್ದಾಣದಿಂದ ವಿದೇಶಕ್ಕೆ ಹಾರಲು ಪ್ರಯತ್ನಿಸುತ್ತಿದ್ದ ಈ ವೇಳೆ ಎನ್ ಆಯಾಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿಯನ್ನು ಬಂದಿಸಿದ್ದಾರೆ ಎಂದು ತಿಳಿದುಬಂದಿದೆ.ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆ‌ಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್​ನನ್ನು…

Read More

ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು- ಬ್ರಿಜೇಶ್ ಚೌಟ

ಮಂಗಳೂರು: ನವಯುಗ ನವಪಥದ ಆಧಾರದಲ್ಲಿ ಹಿಂದುತ್ವಕ್ಕೆ ಬದ್ಧತೆಯಿರಿಸಿ, ಅಭಿವೃದ್ಧಿಯನ್ನು ಆದ್ಯತೆಯಾಗಿರಿಸಿ ದ.ಕ.ಜಿಲ್ಲೆಯಲ್ಲಿ ಹೊಸಪರ್ವ, ಹೊಸಕನಸು, ಹೊಸ ಆಶೋತ್ತರಗಳನ್ನು ಜನರ ಮಧ್ಯೆ ಹುಟ್ಟಿಸುತ್ತೇನೆ. ಎಲ್ಲರ ಸಹಕಾರದೊಂದಿಗೆ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತೇನೆ ಎಂದು ದ.ಕ.ಜಿಲ್ಲೆಯಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಹೇಳಿದರು. ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಂತೆ ಸುರತ್ಕಲ್ ನ‌ ಮತ ಎಣಿಕಾ ಕೇಂದ್ರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ದ.ಕ.ಜಿಲ್ಲೆಯ ಬಿಜೆಪಿಯ ಗೆಲುವು, ಮೋದಿಯವರ, ಹಿಂದುತ್ವದ, ಸಂಘಟನೆಯ ಕಾರ್ಯಕರ್ತರ, ಜಿಲ್ಲಾಧ್ಯಕ್ಷರ ಗೆಲುವು. ಸತ್ಯ, ಧರ್ಮ, ನ್ಯಾಯ, ಹಿಂದುತ್ವದ…

Read More

ದಕ್ಷಿಣಕನ್ನಡ: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೆಶ್‌ ಚೌಟ ಗೆಲುವು

ಕರಾವಳಿಯಲ್ಲಿ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೇಸ್ ನ ಪದ್ಮರಾಜ್ ಅವರಿಗಂತ  138288 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ. ಭಾರೀ ಪೈಪೋಟಿ ಕ್ಷೇತ್ರವಾಗಿದ್ದ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೇಸ್ ಬಿಜೆಪಿಗೆ ಪ್ರಬಲ ಪೈಪೋಟಿ ಕೊಟ್ಟಿತ್ತು, ಆದರೆ ತಮ್ಮ ಭದ್ರಕೋಟೆಯಲ್ಲಿ ಮತ್ತೆ ಬಿಜೆಪಿ ಗೆಲುವನ್ನು ಸಾಧಿಸುವ ಮೂಲಕ ಮತ್ತೆ ಸೀಟ್ ನ್ನು ಉಳಿಸಿಕೊಂಡಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮುನ್ನಡೆ- 138288 ಲಕ್ಷ ಮತಗಳ ಅಂತರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ ಎಣಿಕಾ ಕಾರ್ಯ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಕಾಯ್ದಿದೆ. ಮೊದಸ ಸುತ್ತಿನಲ್ಲಿ ಬಿಜೆಪಿಯ ಬ್ರಿಜೇಶ್ ಚೌಟ 624483 ಮತ ಪಡೆದು ಮುನ್ನಡೆ ಸಾಧಿಸಿದರೆ, ಕಾಂಗ್ರೆಸ್ ನ ಪದ್ಮರಾಜ್ ಆರ್ ಪೂಜಾರಿಯವರು 486195 ಮತ ಪಡೆದು ಹಿನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ  138288 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ. 19401 ನೋಟಾ ಮತ ಚಲಾವಣೆಯಾಗಿದೆ.

Read More

ದಕ್ಷಿಣ ಕನ್ನಡ: ಎಂಟನೇ ಸುತ್ತಿನಲ್ಲಿ  1 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ ಬಿಜೆಪಿಯ ಚೌಟ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಎಂಟನೇ ಸುತ್ತಿನ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.

Read More