40 ಕ್ಕೂ ಅಧಿಕ ಕಳವು ಪ್ರಕರಣ: ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ

ಮಂಗಳೂರು: ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ರೂ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಅ.02ರಿಂದ ದಿನಾಂಕ ಅ.6ರ ಮಧ್ಯದ ಅವಧಿಯಲ್ಲಿ ಬೀಗ…

Read More

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು..!! ಹೈಕೋರ್ಟ್

ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿದ ಪುತ್ತೂರು ಸಹಾಯಕ ಆಯುಕ್ತರ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ…

Read More

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರ ಬಂಧನ

ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಮೂಡಬಿದ್ರೆ ಪೊಲೀಸರು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಅದ್ಯಪಾಡಿ @ ಮೊಹಮ್ಮದ್ ಮನ್ಸೂರ್ ವಿರುದ್ಧ ಮಾತ್ರ ಈಗಾಗಲೇ 29ಕ್ಕೂ ಹೆಚ್ಚು ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಇದು 30ನೇ ಪ್ರಕರಣವಾಗಿದೆ. ಅಕ್ಟೋಬರ್ 15, 2025ರಂದು ಸಂಜೆ 5 ಗಂಟೆಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ, ಮೂಡಬಿದ್ರೆ ತಾಲೂಕು ಹೊಸ್ಮಾರು – ನೆಲ್ಲಿಕಾರು ರಸ್ತೆಯಲ್ಲಿ ಟಾಟಾ ಎಸಿ ಕಂಟೈನರ್ ವಾಹನದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ…

Read More

ಮಂಗಳೂರು ಪೊಲೀಸರ ಭರ್ಜರಿ ಕಾರ್ಯಾಚರಣೆ!! 250 ಸಿಮ್ ಬಳಸಿ 300 ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿದ್ದ ಖದೀಮರು ಅರೆಸ್ಟ್

ಮಂಗಳೂರು: ಬರೋಬ್ಬರಿ 250ಕ್ಕೂ ಅಧಿಕ ಸಿಮ್‌ಗಳನ್ನು ಬಳಸಿಕೊಂಡು 300ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಲಕ್ಷಗಟ್ಟಲೆ ಹಣವನ್ನು ಲಪಟಾಯಿಸಿದ ಆರೋಪಿಗಳನ್ನು ಬಂಧಿಸುವ ಮೂಲಕ ಬೃಹತ್ ಸೈಬರ್ ವಂಚನಾ ರಾಕೆಟ್ ಅನ್ನು ಮಂಗಳೂರಿನ ಸಿ.ಇ.ಎನ್. ಪೊಲೀಸರು ಪತ್ತೆಮಾಡಿದ್ದಾರೆ. ತ್ರಿಪುರಾದ ಧಲಾಯಿ ಎಂಬಲ್ಲಿನ ರಂಗ್ ರುಂಘಾ ರೀಂಗ್ ಎಂಬವರ ಪುತ್ರ ಡಮೆಂಜೋಯ್ ರೀಂಗ್(27) ಹಾಗೂ ಪಣಿಪುರದ ಕಂಗ್ಪೊಕ್ಪಿ ಜಿಲ್ಲೆಯ ಹಮ್ನ್‌ಗ್ಟೆ ರೀಯಲ್ ಕೋಂ @ ಮಂಗ್ಟೆ ಅಮೋಶ್ ಬಂಧಿತ ಆರೋಪಿಗಳು. ಇತ್ತೀಚೆಗೆ ಮಂಗಳೂರು ನಗರ ಸಿ.ಇ.ಎನ್. ಕ್ರೈಂ ಪೊಲೀಸ್…

Read More

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿ..!! ಮಗು ಸಾವು, 5 ಮಂದಿಗೆ ಗಾಯ

ಬೆಳ್ತಂಗಡಿ: ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ಸಾವನ್ನಪ್ಪಿದ ಹೃದಯ ವಿದ್ರಾಹಕ ಘಟನೆ ನ.16 ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ನಾವೂರಿನ ಶಶಿ ಎಂಬವರ ಆಟೋ ಪಲ್ಟಿ ಆಗಿದ್ದು, ಐದು ಮಂದಿಗೆ ಗಾಯವಾಗಿದೆ. ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ…

Read More

 ಧರ್ಮಸ್ಥಳ ಪ್ರಕರಣ : ‘SIT’ ಅಧಿಕಾರಿಗಳ ವಿರುದ್ಧವೆ ದೂರು ಸಲ್ಲಿಸಿದ ಟಿ.ಜಯಂತ್

 ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮತ್ತೊಂದು ತಿರುಗು ಸಿಕ್ಕಿದ್ದು, ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳ ವಿರುದ್ಧವೇ ಬೆಳ್ತಂಗಡಿ ಠಾಣೆಗೆ ಜಯಂತ್ ಟಿ ಅವರು ದೂರು ನೀಡಿದ್ದಾರೆ. ಹೌದು ಎಸ್‌ಐಟಿ ಅಧಿಕಾರಿಗಳಾದ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸೆಕ್ಟ‌ರ್ ಮಂಜುನಾಥ ಗೌಡ, ಸಬ್ ಇನ್‌ಸ್ಪೆಕ್ಟರ್ ಗುಣಪಾಲ್‌ ವಿರುದ್ಧ ಸೌಜನ್ಯ ಪರ ಹೋರಾಟಗಾರ ಟಿ ಜಯಂತ್ ದೂರು ನೀಡಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ದೈಹಿಕ ಹಲ್ವೆ ಪ್ರಾಣ ಬೆದರಿಕೆ, ಅಪರಾಧಿಕ ಪಿತೂರಿ, ಸುಳ್ಳು…

Read More

ಮಂಗಳೂರು: ಟ್ಯಾಂಕರ್, ಕಾರು, ಆಟೋ ಮಧ್ಯ ಸರಣಿ ಅಪಘಾತ : ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವು!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರ ಪಣಂಬೂರು ಸಿಗ್ನಲ್ ಬಳಿ ಶನಿವಾರ ಬೆಳಗ್ಗೆ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಪಣಂಬೂರು ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಸಿಗ್ನಲ್ ನಲ್ಲಿ ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೊ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿವೆ. ಸಿಗ್ನಲ್ ನಲ್ಲಿ ನಿಂತಿದ್ದ ಟ್ಯಾಂಕರ್ ವೊಂದರ ಹಿಂಭಾಗದಲ್ಲಿ ಕಾರು ಮತ್ತು ಆಟೊ ರಿಕ್ಷಾ ನಿಂತಿತ್ತು. ಈ ವೇಳೆ ಹಿಂದಿನಿಂದ ಬಂದ ಇನ್ನೊಂದು ಟ್ಯಾಂಕರ್ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ….

Read More

ಬಂಟ್ವಾಳ: ಕಾರು ಢಿಕ್ಕಿ, ಇಬ್ಬರು ಸ್ಥಳದಲ್ಲೇ ಮೃತ್ಯು- ಐವರಿಗೆ ಗಾಯ

ಬಂಟ್ವಾಳ : ಇನ್ನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಢಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಢಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು…

Read More

ಬಂಟ್ವಾಳ: ಚೆಕ್ ಬೌನ್ಸ್ ಕೇಸ್, ಶಾಲಾ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ

ಬಂಟ್ವಾಳ: ಚೆಕ್ ಅಮಾನ್ಯ ಪ್ರಕರಣವೊಂದರಲ್ಲಿ ಪ್ರಾಥಮಿಕ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಒಂಭತ್ತನೇ ಜೆಎಂಎಫ್‌ಸಿ ನ್ಯಾಯಾಲಯ ತೀರ್ಪು ನೀಡಿದೆ.  ಬಂಟ್ವಾಳದ ಕಾವಳಕಟ್ಟೆಯಲ್ಲಿರುವ ಕಲೈ ಚಂದ್ರಮೌಳಿ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಎಸ್. ನಾಯಕ್ ಅವರು ಶಿಕ್ಷೆಗೊಳಗಾದವರು.  ಮಂಗಳೂರಿನ ದಿವ್ಯಶ್ರೀ ಡಿ.ಕೆ. ಎಂಬವರು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಕೊಡಿಯಾಲ್‌ಬೈಲ್ ಶಾಖೆಯಿಂದ ಸಾಲ ಪಡೆದಿದ್ದರು. ಈ ಸಾಲಕ್ಕೆ ಚಂದ್ರಶೇಖರ್ ಎಸ್. ನಾಯಕ್ ಜಾಮೀನುದಾರರಾಗಿದ್ದರು. ದಿವ್ಯಶ್ರೀ ಪಡೆದ ಸಾಲವನ್ನು ಸಕಾಲಕ್ಕೆ ತೀರಿಸದೆ…

Read More

ಮೂಡುಬಿದಿರೆಯ ಕಾಲೇಜು ಕ್ಯಾಂಟಿನ್‌ನ ಕೆಲಸಗಾರನ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಮೂಡಬಿದಿರೆಯ ಕಾಲೇಜೊಂದರಲ್ಲಿ ಕ್ಯಾಂಟೀನ್‌ ಕೆಲಸ ಮಾಡುತ್ತಿದ್ದ ಚೇತನ್‌ ಎಂಬವರನ್ನು ಕೊಲೆ ಮಾಡಿದ ಆರೋಪಿ ಚಿದಾನಂದ ಪರಶು ನಾಯ್ಕನಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ಮಂಗಳೂರಿನ ೨ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.ಮೂಡಬಿದಿರೆಯ ಕಾಲೇಜೊಂದರ ಕ್ಯಾಂಟೀನ್‌ನಲ್ಲಿ ಜೊತೆಗೆ ಕೆಲಸ ಮಾಡಿಕೊಂಡಿರುವ ಚೇತನ್ (22) ಮತ್ತು ಚಿದಾನಂದ ಎಂಬವರಿಗೆ ಗೆ ಕ್ಯಾಂಟೀನ್ ನಲ್ಲಿ ಕೆಲಸದ ವಿಚಾರದಲ್ಲಿ ಮತ್ತು ವೈಯುಕ್ತಿಕ ವಿಚಾರದಲ್ಲಿ ಪರಸ್ಪರ ತಕರಾರು ನಡೆದಿತ್ತು. ಆರೋಪಿ ಚಿದಾನಂದ ಪರಶು ನಾಯ್ಕ ಎಂಬಾತನು 2020…

Read More