ಮಿಥುನ್ ರೈ ಅವರ ಹುಟ್ಟುಹಬ್ಬ

ಮಂಗಳೂರು: ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟುಹಬ್ಬ. ಅದ್ಬುತ ಮಾತುಗಾರ, ಸಂಘಟಕ,ಸಮಾಜ ಸೇವಕ,ಸಮರ್ಥ ಯುವ ನಾಯಕರಾಗಿರುವ ಮಿಥುನ್ ರೈ ಅವರ ಹುಟ್ಟುಹಬ್ಬಕ್ಕೆ ಲಯನ್ ಅನಿಲ್ ದಾಸ್ ರವರು ಶುಭ ಹಾರೈಸಿದರು.

Read More

ಕಾರ್ಕಳ: ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್..!! ತಾಯಿಯಿಂದಲೇ ಕೊಲೆಯಾದ ಮಗಳು

ಕಾರ್ಕಳ : ತಾಯಿಯೋರ್ವಳು ತನ್ಮ ಮಗಳನ್ನೇ ಹತ್ಯೆಗೈದಿರುವ ಘಟನೆ ಕಾರ್ಕಳ ತಾಲೂಕು ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ವರದಿಯಾಗಿದೆ. 17 ವರ್ಷದ ಶಿಫನಾಜ್ ಕೊಲೆಯಾದ ಯುವತಿ. ಸೆ. 20ರಂದು ಶಿಫನಾಜ್ ತನ್ನ ಸ್ನೇಹಿತನನ್ನು ಭೇಟಿಯಾಗಲು ಉಡುಪಿಗೆ ಹೋಗಿ ಬರುವುದಾಗಿ ತಾಯಿಯಲ್ಲಿ ಹೇಳಿದ್ದು ಅದಕ್ಕೆ ತಾಯಿ ಗುಲ್ಬಾರ್ ಬಾನು (45) ನಿರಾಕರಿಸಿದ್ದಳು. ಇದರಿಂದ ತಾಯಿ ಹಾಗೂ ಮಗಳ ಮಧ್ಯೆ ಜಗಳವಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಕುತ್ತಿಗೆ ಬಿಗಿಹಿಡಿದು ಉಸಿರುಗಟ್ಟಿಸಿ ಶಿಫನಾಜ್‌ಳನ್ನು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಅಧಿಕೃತ…

Read More

ಬಂಟ್ವಾಳ: ರಸ್ತೆ ದಾಟುತ್ತಿದ್ದ ಲೋಕೇಶ್ ಮೂಲ್ಯರವರಿಗೆ ರಿಕ್ಷಾ ಡಿಕ್ಕಿ ಹೊಡೆದು ಮೃತ್ಯು

ಬಂಟ್ವಾಳ : ಸಮೀಪ ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಅಮ್ಟೂರು ಕ್ರಾಸ್‌ನಲ್ಲಿ ಸಂಭವಿಸಿದೆ. ಸಾವನ್ನಪ್ಪಿದವರು ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಲೋಕೇಶ್ ಮೂಲ್ಯ (44 ) ಎಂದು ತಿಳಿದು ಬಂದಿದೆ. ಲೋಕೇಶ್ ಅವರು ಕಲ್ಲಡ್ಕದ ನಯಾರ ಪೆಟ್ರೋಲ್ ಪಂಪ್ ನ ಮುಂಭಾಗದಲ್ಲಿ ರಸ್ತೆಯನ್ನು ದಾಟುವ ವೇಳೆ ಅತೀ ವೇಗದಿಂದ ಬಂದ ರಿಕ್ಷಾ ಡಿಕ್ಕಿ ಹೊಡೆದು ಚಾಲಕನ ನಿಯಂತ್ರಣ ಕಳೆದುಕೊಂಡು ಬಳಿಕ ಪಲ್ಟಿಯಾಗಿದೆ….

Read More

ಬಂಟ್ವಾಳ: ಪದೇ ಪದೇ ಗೋಕಳ್ಳತನ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದ ಆರೋಪಿಯ ಮನೆ ಮುಟ್ಟುಗೋಲು

ಬಂಟ್ವಾಳ: ಗೋಕಳ್ಳತನ ಮತ್ತು ಗೋಹತ್ಯೆ ಪ್ರಕರಣಗಳಲ್ಲಿ ಪದೇ ಪದೇ ಭಾಗಿಯಾಗುತ್ತಿದ್ದ ಆರೋಪಿಯೊಬ್ಬನ ಮನೆ ಮತ್ತು ಅಕ್ರಮ ಕಸಾಯಿಖಾನೆಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿದ್ದಾರೆ. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020ರ ಕಲಂ ಅಡಿಯಲ್ಲಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಇಂತಹ ಪ್ರಕರಣದಲ್ಲಿ ಮನೆ ಅಥವಾ ಅಕ್ರಮ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿರುವುದು ಇದೇ ಮೊದಲನೆಯದು ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿಯಾದ…

Read More

ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ

ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ ರಜಾಕ್ (43) ಬಂಧಿತ ಆರೋಪಿ. ದಿನಾಂಕ ಅಕ್ಟೋಬರ್ 1 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಅವಿನಾಶ್ ಹೆಚ್ ರವರು ಮತ್ತು ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ವಾಹನ ತಪಾಸಣೆ ಮಾಡುವ ಸಮಯ ಸುಮಾರು 4 ಗಂಟೆಗೆ ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಪ್ಪು…

Read More

ನಾಳೆ (ಅ. 2) ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆ ಕಲ್ಲಡ್ಕದಲ್ಲಿ ಶುಭಾರಂಭ

ಪುತ್ತೂರು: ಸುದೀರ್ಘ 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆಯು ಅ. 2ರಂದು ಕಲ್ಲಡ್ಕದ ಕೆ.ಸಿ ರೋಡ್ ಈಶಾನ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಳ್ಳಲಿದೆ ಎಂದ ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಹೇಳಿದರು. ಸೆ. 29ರಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರಿಕೆ ಮತ್ತು ಗ್ರಾಮೀಣ ಗುಡಿ ಕೈಗಾರಿಕೆಗಳ ಅಭಿವೃದ್ಧಿಗಾಗಿ 1958ರಲ್ಲಿ ಸ್ಥಾಪನೆಗೊಂಡ ಸಹಕಾರಿ ಸಂಘವು ಪ್ರಸ್ತುತ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಜಿಲ್ಲಾ ವ್ಯಾಪ್ತಿಯನ್ನು ಹೊಂದಿದೆ. ಈಗಾಗಲೇ 16 ಕಡೆಗಳಲ್ಲಿ ಶಾಖೆಗಳು ಪ್ರಾರಂಭಗೊಂಡಿದ್ದು…

Read More

ಮಂಗಳೂರು ದಸರಾ: ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆ – ಪರ್ಯಾಯ ಮಾರ್ಗಗಳನ್ನು ಬಳಸಲು ಸೂಚನೆ

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ನಡೆಯುವ ದಸರಾ ಮೆರವಣಿಗೆಯ ಹಿನ್ನೆಲೆಯಲ್ಲಿ ಅಕ್ಟೋಬರ್ 2ರಂದು ಸಂಜೆ 4 ಗಂಟೆಯಿಂದ ಅಕ್ಟೋಬರ್ 3ರ ಬೆಳಗ್ಗೆ 6 ಗಂಟೆಯವರೆಗೆ ನಗರದ ವಿವಿಧ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಬದಲಾವಣೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಇಲಾಖೆ ತಿಳಿಸಿದೆ. ಮೆರವಣಿಗೆ ಕುದ್ರೋಳಿ ದೇವಸ್ಥಾನದಿಂದ ಆರಂಭವಾಗಿ ದುರ್ಗಾಮಹಲ್ ಜಂಕ್ಷನ್, ಮಣ್ಣಗುಡ್ಡೆ, ನಾರಾಯಣಗುರು ವೃತ್ತ, ಲಾಲ್‌ಭಾಗ್, ಬಳ್ಳಾಲ್ ಭಾಗ್, ಕೊಡಿಯಲ್‌ಗುತ್ತು, ಪಿವಿಎಸ್, ನವಭಾರತ ವೃತ್ತ, ಹಂಪನಕಟ್ಟೆ, ಕಾರ್ ಸ್ಟ್ರೀಟ್, ಅಳಕೆ ಬ್ರಿಡ್ಜ್ ಮೂಲಕ ಮತ್ತೆ…

Read More

ಧರ್ಮಸ್ಥಳ ಪ್ರಕರಣ: ಅವಶೇಷ ಪತ್ತೆಯಾದ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್.ಐ.ಟಿ ಪರಿಶೀಲನೆ

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ವಿಶೇಷ ತನಿಖಾ ದಳದ (ಎಸ್.ಐ.ಟಿ) ಅಧಿಕಾರಿಗಳು ಮಂಗಳವಾರ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದರು. ಪ್ರಕರಣದ ಮೃತದೇಹಗಳ ಅವಶೇಷಗಳು ಪತ್ತೆಯಾದ ಸ್ಥಳಗಳ ಸಮಗ್ರ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ, ಎಸ್.ಐ.ಟಿ ಅಧಿಕಾರಿಗಳು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಆಗಮಿಸಿದ್ದರು.ಪ್ರಕರಣದ ತನಿಖೆಗೆ ಪೂರಕವಾಗುವಂತೆ, ಹಿಂದೆ ಅವಶೇಷಗಳು ದೊರೆತಿದ್ದ ನಿರ್ದಿಷ್ಟ ಜಾಗಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸ್ಕೆಚ್ ತಯಾರಿಸುವ ಕಾರ್ಯವನ್ನು ಅಧಿಕಾರಿಗಳ ತಂಡ ಕೈಗೊಂಡಿದೆ ಎಂದು ತಿಳಿದುಬಂದಿದೆ.

Read More

2025-26ನೇ ಸಾಲಿನ ಕಂಬಳ ಪಟ್ಟಿ ಪ್ರಕಟ

ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲಾ ಕಂಬಳ ಸಮಿತಿ ಮತ್ತು ದ.ಕ. ಉಡುಪಿ ಕಂಬಳ ವ್ಯವಸ್ಥಾಪಕರ ಜಂಟಿ ಸಭೆ ಮೂಡುಬಿದಿರೆ ಕಂಬಳ ಕ್ರೀಡಾಂಗಣದ ಬಳಿಯ ‘ಸೃಷ್ಟಿ ಗಾರ್ಡನ್’ ಸಭಾಂಗಣದಲ್ಲಿ ನಡೆಯಿತು. ರವಿವಾರ ಕಂಬಳ ಸಮಿತಿ ಅಧ್ಯಕ್ಷ ರಾದ ಡಾ। ದೇವಿ ಪ್ರಸಾದ್‌ ಶೆಟ್ಟಿ ಬೆಳಪು ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ 2025-26ನೇ ಸಾಲಿನ ಕಂಬಳ ದಿನಾಂಕಗಳನ್ನು ಅಂತಿಮ ಮಾಡಲಾಯಿತು. ಕಂಬಳ: ಎಲ್ಲೆಲ್ಲಿ ಯಾವಾಗ? 1) ಪಣಪಿಲ ನವೆಂಬರ್ 15ಕ್ಕೆ 2) ಕೊಡಂಗೆ ನವಂಬರ್ 22ಕ್ಕೆ 3)…

Read More

ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರವರೆಗೆ ಜಾರಿಗೊಳಿಸದಂತೆ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠದ ಮಂಗಳವಾರ ವಿಚಾರಣೆ…

Read More