ಸೆ. 21ರಂದು ವೆನ್‍ಲಾಕ್, ಲೇಡಿಗೋಷನ್ 175ನೇ ವರ್ಷದ ಸಂಭ್ರಮಾಚರಣೆ

ಮಂಗಳೂರು:  ವೆನ್‍ಲಾಕ್, ಲೇಡಿಗೋಷನ್ ಮತ್ತು ಕೆ.ಎಂ.ಸಿ. ಆಸ್ಪತ್ರೆಗಳ ಹಳೆ ವಿದ್ಯಾರ್ಥಿ ಸಂಘ ಇದರ ಉದ್ಘಾಟನಾ ಸಮಾರಂಭ ಹಾಗೂ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಮತ್ತು ಲೇಡಿಗೋಷನ್ ಆಸ್ಪತ್ರೆಗಳ 175ನೇ ವರ್ಷದ ಸಂಭ್ರಮಾಚರಣೆಯ ಚಾಲನಾ ಕಾರ್ಯಕ್ರಮ ಸೆಪ್ಟೆಂಬರ್  21 ರಂದು  ಮಧ್ಯಾಹ್ನ 2.30 ಗಂಟೆಗೆ ಕಂಕನಾಡಿ ಫಾದರ್ ಮುಲ್ಲರ್ ಕನ್ವೆಂಷನ್ ಸೆಂಟರ್‍ನಲ್ಲಿ ನಡೆಯಲಿದೆ. ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಫರೀದ್ ಘನ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್…

Read More

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹರಡಿದ ಯುವಕ ಅರೆಸ್ಟ್

ಮಂಗಳೂರು: “Karavali_tigers” ಎಂಬ ಇನ್‌ಸ್ಟಾಗ್ರಾಂ ಪೇಜ್ ಮೂಲಕ ಪ್ರಚೋದನಕಾರಿ ಸಂದೇಶಗಳನ್ನು ಹರಡುತ್ತಿದ್ದ ಆರೋಪಿತನನ್ನು ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಕೈಫ್ , 22 ಕಿಲ್ಲೂರು ಮನೆ, ಮಾಲವಂತಿಗೆ, ದಕ್ಷಿಣ ಕನ್ನಡ ಬಂಧಿತ ಆರೋಪಿ. 2025ರ ಜುಲೈ 19ರಂದು ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಅ.ಕ್ರ.41/2025) ದಾಖಲಿಸಲಾಗಿತ್ತು. ಆರೋಪಿಯ ವಿರುದ್ಧ ಐಟಿ ಕಾಯ್ದೆಯ ಕಲಂ 66(ಸಿ) ಹಾಗೂ ಭಾರತೀಯ ನ್ಯಾಯ ಸಂಹಿತೆಯ ಕಲಂ 56, 353(1), 192 ಅಡಿಯಲ್ಲಿ ಪ್ರಕರಣ ದಾಖಲಾಗಿದೆ….

Read More

ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿ ನಜೀಮ್‌ ಬಂಧನ

ಬಂಟ್ವಾಳ: ಬಂಟ್ವಾಳ ತಾಲೂಕು ನರಿಗಾನ ಗ್ರಾಮದ ಪಟ್ಟುಲಿಕೆ ವಾಸಿಯಾಗಿರುವ ನಜೀಮ್‌ ಅಲಿಯಾಸ್‌ ನಜ್ಜು (30) ವಿರುದ್ಧ ಉಳ್ಳಾಲ, ಕೊಣಾಜೆ, ಮಂಗಳೂರು ನಾರ್ತ್‌, ಬೇಗೂರು (ಬೆಂಗಳೂರು ನಗರ) ಹಾಗೂ ಭಟ್ಕಳ ಪೊಲೀಸ್‌ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು. ಜಾಮೀನು ಪಡೆದು ಒಂದೂವರೆ ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಈತನ ವಿರುದ್ಧ ವಾರೆಂಟ್ ಹಾಗೂ ಪ್ರೋಕ್ಲಮೇಷನ್ ಹೊರಡಿಸಲಾಗಿತ್ತು. ವಿಶೇಷ ಕ್ರಮ ಕೈಗೊಂಡ ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ.

Read More

 ಮಂಗಳೂರು: ಭೀಕರ ರಸ್ತೆ ಅಪಘಾತ- ಯುವ ಇಂಜಿನಿಯರ್ ಸಾವು

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್‌ನಲ್ಲಿ ಬುಧವಾರ ನಡೆದ ಅಪಘಾತದಲ್ಲಿ ಯುವ ಎಂಜಿನಿಯರ್ ಮೃತಪಟ್ಟ ಘಟನೆ ನಡೆದಿದೆ. ಸ್ಥಳೀಯ ನಿವಾಸಿ ಕೌಶಿಕ್ (27) ಮೃತಪಟ್ಟವರು. ನಿತ್ಯವೂ ಬೆಳಗ್ಗೆ ಮನೆಗಳಿಗೆ ಪೇಪ‌ರ್ ಹಾಕುತ್ತಿದ್ದರು. ತಂದೆಯ ಜೊತೆಗೆ ಬೆಳಗ್ಗೆ ಪೇಪರ್ ಹಾಕಿ ಬರುತ್ತಿರಬೇಕಾದರೆ ಕೌಶಿಕ್ ಸವಾರಿ ನಡೆಸುತ್ತಿದ್ದ ಬೈಕ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡ ಕೌಶಿಕ್ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಈ ಕುರಿತು ಸಂಚಾರಿ ಪೂರ್ವ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ಮಂಗಳೂರು: ನಕಲಿ ದಾಖಲೆ ಸಲ್ಲಿಸಿ ಬ್ಯಾಂಕಿಗೆ ಕೋಟ್ಯಂತರ ರೂ.ಪ್ರಕರಣ ವಂಚನೆ- ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಅರೆಸ್ಟ್

ಮಂಗಳೂರು: ಎಂಎಸ್‌ಎಂಇ ಯೋಜನೆಯಲ್ಲಿ ನಕಲಿ ದಾಖಲೆ ಸಲ್ಲಿಸಿ ಬ್ಯಾಂಕಿಗೆ ಕೋಟ್ಯಂತರ ರೂ. ವಂಚಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಉಜ್ಜೋಡಿಯ ಮುನೀರ್ ಕದಮನ್ ಅಬೂಬಕರ್ (53), ನಂದಿಗುಡ್ಡೆಯ ಹುಸೇನ್. ಪಿ (52) ಮತ್ತು ಜೆಪ್ಪು ನಿವಾಸಿ ಮುಹಮ್ಮದ್ ಮುಸ್ತಾಫ (27) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಕಂಪೆನಿ ತೆರೆದು ಸುಳ್ಳು ದಾಖಲಾತಿ ಸೃಷ್ಟಿಸಿ ಲೋನ್ ಹೆಸರಿನಲ್ಲಿ ನಗರದ ಮಲ್ಲಿಕಟ್ಟೆಯ ಬ್ಯಾಂಕ್ ಗೆ ಕೋಟ್ಯಾಂತರ ರೂ. ಮೋಸ ಮಾಡಿದರೆಂದು ಆರೋಪಿಸಲಾಗಿದೆ….

Read More

 ಮಂಗಳೂರು: ಜಾನುವಾರು ಕಳ್ಳತನ- ಮೂವರು ಆರೋಪಿಗಳ ಬಂಧನ

ಮಂಗಳೂರಿನ ಅಡ್ಯಾರ್‌ನಲ್ಲಿ ಮನೆಯೊಂದರ ಅಂಗಳದಿಂದ ದನವನ್ನು ಕಳವು ಮಾಡಿದ ಮೂವರು ಆರೋಪಿಗಳನ್ನು ಕಂಕನಾಡಿ ಪೊಲೀಸರು ಬಂಧಿಸಿದ್ದಾರೆ.  ಬಂಧಿತರನ್ನು ಮಂಗಳೂರಿನ ನಿವಾಸಿಗಳಾದ ಶಾಬಾಜ್ ಅಹಮ್ಮದ್ , ಮೊಹಮ್ಮದ್ ಸುಹಾನ್, ವಳಚ್ಚಿಲ್ ಖಾದರ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಶಾಬಾಜ್ ಕಣ್ಣೂರು ಮತ್ತು ಸುಹಾನ್ ವಳಚ್ಚಿಲ್ ಇವರು ದನ ಕಳ್ಳತನ ಮಾಡಿ, ವಳಚ್ಚಿಲ್ ಖಾದರ್‌ನಿಗೆ ಮಾರಾಟ ಮಾಡಿದ್ದರು. ಈ ವೇಳೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.  ಶಾಬಾಜ್ ಅಹ್ಮದ್ ಕಣ್ಣೂರು ಎಂಬಾತನ ವಿರುದ್ದ ಈಗಾಗಲೇ ಮಂಗಳೂರು ಗ್ರಾಮಾಂತರ ಮತ್ತು ಕಂಕನಾಡಿ ಠಾಣೆಯಲ್ಲಿ ಒಂದು…

Read More

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಬಂಗ್ಲೆಗುಡ್ಡದಲ್ಲಿ 5 ತಲೆಬುರುಡೆ, 113 ಮೂಳೆಗಳು ಪತ್ತೆ.!

ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಬಂಗ್ಲೆ ಗುಡ್ಡದಲ್ಲಿ ವಿಠಲ ಗೌಡ ತೋರಿಸಿದ ಜಾಗದಲ್ಲಿ ಬುರುಡೆಗಳು ಮತ್ತು ಅಸ್ತಿ ಪಂಜರಗಳು ಪತ್ತೆಯಾಗಿವೆ ಎನ್ನಲಾಗಿದೆ. 13 ಎಕರೆ ವಿಸ್ತೀರ್ಣದ ಬಂಗ್ಲೆಗುಡ್ಡದಲ್ಲಿ 5 ಕಡೆ ಮಹಜರು ನಡೆದಿದೆ. ಈ ವೇಳೆ 5 ತಲೆಬುರಡೆ, 113 ಮೂಳೆಗಳು ಸಿಕ್ಕಿವೆ ಎನ್ನಲಾಗಿದೆ. ಧರ್ಮಸ್ಥಳದ ಬಂಗ್ಲೆ ಗುಡ್ಡದಲ್ಲಿ ಮತ್ತೆ 5 ಕಡೆಗಳಲ್ಲಿ…

Read More

ಲಯನ್ಸ್ ಇಂಟ‌ರ್ ನ್ಯಾಷನಲ್ ಜಿಲ್ಲೆ 317ಡಿ ವತಿಯಿಂದ ಸೆ. 21 ರಂದು ಪುರಭವನದಲ್ಲಿ ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ದೆ

ಮಂಗಳೂರು: ಲಯನ್ಸ್ ಇಂಟರ್ ನ್ಯಾಷನಲ್ ಜಿಲ್ಲೆ 317 ಡಿ ಇದರ ಆಶ್ರಯದಲ್ಲಿ “ಸಿಂಹವಾಹಿನಿ ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆ ಸೆಪ್ಟೆಂಬರ್ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಕುದ್ಮಲ್ ರಂಗರಾವ್ ಪುರಭವನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಲಯನ್ ರಾಜೇಶ್ ಶೆಟ್ಟಿ ಶಬರಿ ತಿಳಿಸಿದರು. ಅವರು ನಗರದ ಲಯನ್ ಅಶೋಕದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಲಯನ್ಸ್ ಜಿಲ್ಲಾ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಸುಮಾರು 25 ತಂಡಗಳು ಭಾಗವಹಿಸಲಿದ್ದು, ಸೆಟ್ಟಿಂಗ್ ಸೇರಿ ಒಂದು ತಂಡಕ್ಕೆ 20 ನಿಮಿಷಗಳ ಕಾಲಾವಧಿ…

Read More

ಧರ್ಮಸ್ಥಳ ಕೇಸ್ : ಬಂಗ್ಲೆಗುಡ್ಡೆ ಕಾಡಿನಲ್ಲಿ ಮೂಳೆ ತುಂಡುಗಳು ಪತ್ತೆ..!

ಧರ್ಮಸ್ಥಳ ಪ್ರಕರಣ ದಿನವೊಂದಕ್ಕೆ ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಇದೀಗ ಎಸ್ಐಟಿ ಅಧಿಕಾರಿಗಳು ಬಂಗ್ಲೆಗುಡ್ಡದಲ್ಲಿ ಶೋಧ ನಡೆಸಿದ್ದಾರೆ. ಧರ್ಮಸ್ಥಳ ಸಮೀಪದ ಬಂಗ್ಲೆಗುಡ್ಡೆ ಕಾಡಿನಲ್ಲಿ ಸಂಶಯಾಸ್ಪದ ಶವ ಪತ್ತೆ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ತಂಡವು ಪಿವಿಸಿ ಪೈಪ್ ಬಳಸಿ ಮಣ್ಣಿನ ಮಾದರಿಗಳನ್ನು ಸಂಗ್ರಹಿಸಿದ್ದು, ಈ ವೇಳೆ ಸಣ್ಣ ಮೂಳೆ ಮತ್ತು ಬಟ್ಟೆಯ ತುಂಡುಗಳು ಪತ್ತೆಯಾಗಿವೆ. ಈ ಮಾದರಿಗಳನ್ನು ಫಾರೆನ್ಸಿಕ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಹೌದು ತನಿಖಾಧಿಕಾರಿ ಜಿತೇಂದ್ರ ದಯಾಮಾ ನೇತೃತ್ವದ ತಂಡ ಕಳೆದ ಎರಡು ಗಂಟೆಗಳಿನಿಂದ ಸ್ಥಳದಲ್ಲೇ ಶೋಧ ಕಾರ್ಯ ಮುಂದುವರೆಸಿದ್ದು,…

Read More

ಮಂಗಳೂರು: ಸಂಚಾರದಲ್ಲಿದ್ದ ಬಸ್‌ನಲ್ಲೇ ಯುವತಿಗೆ ಕಿರುಕುಳ- ಕಾಮುಕನಿಗೆ ಜೈಲು ಶಿಕ್ಷೆ

ಮಂಗಳೂರು: ಸಂಚಾರದಲ್ಲಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲೇ ಸೀಟ್‌ ಪಕ್ಕದಲ್ಲಿ ಕುಳಿತಿದ್ದ ಯುವತಿಗೆ ಕಿರುಕುಳ ನೀಡಿರುವ ಯುವಕನ ಮೇಲಿನ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಾಮುಕನಿಗೆ ಪ್ರಧಾನ ಹಿರಿಯ ಸಿವಿಲ್ ಮತ್ತು ಎ ಸಿ ಜೆ ಎಂ ನ್ಯಾಯಾಲಯವು ನಾಲ್ಕು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ. 2022ರ ಎಪ್ರಿಲ್ 22ರಂದು ಯುವತಿ ಕೆಎಸ್ಆರ್‌ಟಿಸಿ ಬಸ್‌‌ನಲ್ಲಿ ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದಳು. ಈ ಸಂದರ್ಭ ಯುವತಿ ಕುಳಿತಿದ್ದ ಸೀಟಿನ ಪಕ್ಕದಲ್ಲಿ ಕುಳಿತಿದ್ದ ಆರೋಪಿತ ಮಾಡ್ನೂರು ಗ್ರಾಮದ ನಿವಾಸಿ ಮೊಹಮ್ಮದ್…

Read More