ಉಡುಪಿ: ಸಮುದ್ರದಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳು ನೀರುಪಾಲು..! ಓರ್ವ ಮೃತ್ಯು, 5 ಮಂದಿಯ ರಕ್ಷಣೆ

ಉಡುಪಿ: ಕಟಪಾಡಿಯ ಮಟ್ಟು ಬೀಚ್ ಬಳಿ ಸಮುದ್ರದಲ್ಲಿ ಆಟವಾಡುತ್ತ ಈಜಾಡುತ್ತಿದ್ದ 6 ವಿದ್ಯಾರ್ಥಿಗಳ ತಂಡದಲ್ಲಿ ಓರ್ವ ವಿದ್ಯಾರ್ಥಿ ಸಾವಿಗೀಡಾದ ಘಟನೆ ಇಂದು (ಶನಿವಾರ) ಮಧ್ಯಾಹ್ನ ಸಂಭವಿಸಿದೆ. ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ ವೀರೂರುಲ್ಕರ್ ( 18) ಮೃತಪಟ್ಟ ವಿದ್ಯಾರ್ಥಿ. ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ಸ್ಥಳೀಯರು ಈ ವಿದ್ಯಾರ್ಥಿಗಳ ತಂಡವನ್ನು ಎಚ್ಚರಿಸಿದ್ದರೂ ಕೂಡ ನಿರ್ಲಕ್ಷಿಸಿ ಪ್ರಾಣಕ್ಕೆ ಕುತ್ತು ತಂದರೆನ್ನಲಾಗಿದೆ. ಸ್ಥಳೀಯರಾದ ಆರ್ಯನ್, ಪ್ರವೀಣ್ ಮತ್ತಿತರರು ರಕ್ಷಣಾ ಕಾರ್ಯ ನಡೆಸಿದ್ದರು. ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಚಿನ್ನದಂಗಡಿ ಕಳವು ಪ್ರಕರಣ: ಐದು ಮಂದಿ ಆರೋಪಿಗಳ ಬಂಧನ-ಚಿನ್ನಾಭರಣ ಜಪ್ತಿ

ಉಡುಪಿ ನಗರದ ಚಿತ್ತರಂಜನ್ ವೃತ್ತದಲ್ಲಿ ಚಿನ್ನ ಕರಗಿಸುವ ಅಂಗಡಿಯಲ್ಲಿ 95 ಲಕ್ಷ ಮೌಲ್ಯದ ಚಿನ್ನ ಬೆಳ್ಳಿ ಹಾಗೂ ನಗದು ಕಳವು ಮಾಡಿದ ಪ್ರಕರಣವನ್ನು ಉಡುಪಿ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಸೋಲಾಪುರದ ಶುಭಂ ತಾನಾಜಿ ಸಾಥೆ(25), ಪ್ರವೀಣ ಅಪ್ಪ ಸಾಥೆ, ನಿಲೇಶ ಬಾಪು ಕಸ್ತೂರಿ, ಸಾಗರ ದತ್ತಾತ್ರೇಯ ಕಂಡಗಾಲೆ(32), ಬಾಗವ ರೋಹಿತ್ ಶ್ರೀಮಂತ್(25)ಬಂಧಿತರು. ಆರೋಪಿಗಳನ್ನು ಸೆ. 12 ರಂದು ಮಹಾರಾಷ್ಟ್ರ ಸೋಲಾಪುರ ಜಿಲ್ಲೆ ಮಲ್‌ಶಿರೋಸ್ ತಾಲೂಕು, ನಿಮ್‌ಗಾಂವ್‌ ಎಂಬಲ್ಲಿ ವಶಕ್ಕೆ ಪಡೆದು ಆರೋಪಿಗಳಿಂದ…

Read More

ಉಡುಪಿ: ನಾಪತ್ತೆಯಾದ ಕಾಲೇಜು ವಿದ್ಯಾರ್ಥಿ ಮೃತದೇಹ ಪತ್ತೆ..!!

ಕುಂದಾಪುರ: ಗುರುವಾರ ಸಂಜೆ ಕಾಲೇಜಿನಿಂದ‌ ಮನೆಗೆ ಬಾರದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್ ಪೂಜಾರಿ ಇವರ ಪುತ್ರ ನಮೇಶ್ (17) ಮೃತ ವಿದ್ಯಾರ್ಥಿ ಗುರುವಾರ ಸಂಜೆ ಕಾಲೇಜು ಬಿಟ್ಟ ಬಳಿಕ ನಮೇಶ್ ಮನೆಗೆ ವಾಪಾಸಾಗಿರಲಿಲ್ಲ. ಇತ್ತೀಚೆಗಷ್ಟೇ ತಂದೆ ಕೊಡಿಸಿದ್ದ ತನ್ನ ಐಫೋನ್ ಮೊಬೈಲ್ ಅನ್ನು ಮನೆಯಲ್ಲಿಯೇ ಬಿಟ್ಟು ಬೈಕ್‌ನಲ್ಲಿ ತೆರಳಿದ್ದ ನಮೇಶ್ ಹೆಮ್ಮಾಡಿ ಸಮೀಪದ‌ ಕನ್ನಡಕುದ್ರು ನದಿ…

Read More

ಗೆಳೆಯರಿಬ್ಬರ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ..!!

ಬೈಂದೂರು: ಮದ್ಯವ್ಯಸನಿಗಳಾದ ಗೆಳೆಯರಿಬ್ಬರ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಯಡ್ತರೆ ಗ್ರಾಮದ ಕೊಸಳ್ಳಿ ಸಮೀಪದ ದೇವರಗದ್ದೆ ಎಂಬಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಕೇರಳ ಮೂಲದ ಬಿನೋ ಫಿಲಿಪ್ (45) ಕೊಲೆಯಾದ ಕಾರ್ಮಿಕ. ಉದಯ್ ಕೊಲೆ ಆರೋಪಿ. ತೂದಳ್ಳಿ ದೇವರಗದ್ದೆ ನಿವಾಸಿ ಥೋಮಸ್ ಎನ್ನುವವರ ತೋಟದಲ್ಲಿ ಕೇರಳ ಮೂಲದ ಬಿನೋ ಫಿಲಿಪ್ ಹಾಗೂ ಉದಯ್ ಕಳೆದ ಎರಡು ವರ್ಷಗಳಿಂದ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಮದ್ಯಪಾನ ಮಾಡಿದಾಗ ಆಗ್ಗಾಗೆ ಗಲಾಟೆ ಮಾಡಿಕೊಳ್ಳುತ್ತಿದ್ದರೆನ್ನಲಾಗಿದೆ. ಶನಿವಾರ ತಡರಾತ್ರಿಯೂ ಇಬ್ಬರ ನಡುವೆ…

Read More

ಉಡುಪಿ: ಕಡವೆ ಅಡ್ಡ ಬಂದು ಬೈಕ್ ಸವಾರ ಸ್ಥಳದಲ್ಲೇ ಸಾವು-ಸಹ ಸವಾರ ಗಂಭೀರ

ಉಡುಪಿ: ಚಲಿಸುತ್ತಿದ್ದ ಬೈಕ್ ಮೇಲೆ ಕಡವೆಯೊಂದು ಹಾರಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ಮಧ್ಯಾಹ್ನ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ಸಂಭವಿಸಿದೆ. ಕಾವ್ರಾಡಿ ಗ್ರಾಮದ ನೆಲ್ಲಿಕಟ್ಟೆಯ ನಿವಾಸಿ ಶ್ರೇಯಸ್  (22) ಮೃತಪಟ್ಟ ಯುವಕ. ಘಟನೆಯಲ್ಲಿ  ಸಹಸವಾರ ಗಾಯಗೊಂಡ ಘಟನೆ ಪಡುವಾಲೂರರು ನಿವಾಸಿ ವಿಘ್ನೇಶ  (19) ಗಂಭೀರವಾಗಿ ಗಾಯಗೊಂಡಿದ್ದು, ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರಾಗಿದ್ದ ಅವರಿಬ್ಬರೂ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ವಾಪಸಾಗುತ್ತಿರುವಾಗ ತಾರೆಕೊಡ್ಲು ಬಳಿ ಏಕಾಏಕಿ ದೊಡ್ಡ ಕಡೆವೆಯು ಬೈಕಿಗೆ ಅಡ್ಡ ಬಂದಿದ್ದು,…

Read More

ಉಡುಪಿ: ಯುವತಿಗೆ ಚಾಕು ಇರಿದು ಪರಾರಿಯಾಗಿದ್ದ ಯುವಕ  ಶವವಾಗಿ ಪತ್ತೆ

ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕನ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.  ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ. ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Read More

ಕಾರ್ಕಳ: ವೃದ್ಧೆಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳನ ಬಂಧನ..!

ಕಾರ್ಕಳದ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಕತ್ತಿನಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸವದತ್ತಿ ತಾಲೂಕಿನ ಗೊರವನ ಕೊಳ್ಳ ನಿವಾಸಿ ಸುನಿಲ್ ರಮೇಶ್ ಲಮಾಣಿ(29) ಬಂಧಿತ ಆರೋಪಿ.  ಕಾರ್ಕಳ ಪೊಲೀಸ್ ಠಾಣಾ ನಿರೀಕ್ಷಕ ಡಿ. ಮಂಜಪ್ಪ ನೇತೃತ್ವದಲ್ಲಿ ಅಜೆಕಾರು ಪಿಎಸ್‌ಐ ಮಹೇಶ್ ಹಾಗೂ ಸಿಬ್ಬಂದಿಯವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸೆ. 9ರಂದು ಸಂಜೆ 4.30ರ ಸುಮಾರಿಗೆ ಕಾರ್ಕಳದ ಮುಳ್ಕಾಡು ಎಳ್ಳಾರೆ ಗ್ರಾಮದ ಹೊಸಮನೆ ನಿವಾಸಿ 80 ವರ್ಷದ ಕುಮುದಾ ಶೆಟ್ಟಿ…

Read More

ಉಡುಪಿ: ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದು ಯುವಕ ಪರಾರಿ- ಯುವತಿ ಗಂಭೀರ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಚೂರಿ ಇರಿದು ಇದೀಗ ಪರಾರಿಯಾಗಿದ್ದಾನೆ. ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ ಮನೆಯವರು ಇದಕ್ಕೆ ಒಪ್ಪದಂತಹ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ನೀಡಿದ ಸಂಗೀತ ನಿರ್ದೇಶಕ ಇಳಯರಾಜ

ಉಡುಪಿ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಿ ದೇವರ ಬಗ್ಗೆ ತಮ್ಮ ಅಪಾರ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ದೈವಿಕ ತಾಯಿಯ ಮೇಲಿನ ಆಧ್ಯಾತ್ಮಿಕ ಗೌರವ ಮತ್ತು ಪ್ರೀತಿಗೆ ಹೆಸರುವಾಸಿಯಾಗಿರುವ ಇಳಯರಾಜ ಅವರು ಹಲವಾರು ವರ್ಷಗಳಿಂದ ದೇವಿಗೆ ಹಲವಾರು ಅಮೂಲ್ಯವಾದ ಆಭರಣಗಳನ್ನು ಅರ್ಪಿಸಿದ್ದಾರೆ. ವಜ್ರದ ಕಿರೀಟ ಸೇರಿದಂತೆ ಈ ಇತ್ತೀಚಿನ ಅರ್ಪಣೆಯು ಅವರ ಭಕ್ತಿ ಮತ್ತು ದೇವರನ್ನು ಭವ್ಯ ಮತ್ತು ಹೃತ್ಪೂರ್ವಕ ರೀತಿಯಲ್ಲಿ ಗೌರವಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದೇವಿ ಮತ್ತು ವೀರಭದ್ರ ದೇವರಿಗೆ…

Read More

ಉಡುಪಿ : ಆನ್‌ಲೈನ್ ಟ್ರೇಡಿಂಗ್ ವಂಚನೆ- ಆರು ಮಂದಿ ಬಂಧನ

ಉಡುಪಿ: ಎರಡು ಪ್ರತ್ಯೇಕ ಆನ್‌ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ,…

Read More