ಪಾಕಿಸ್ತಾನ ಪರ ಬೇಹುಗಾರಿಕೆ: ಮಲ್ಪೆಯಲ್ಲಿ ಆರೋಪಿ ಭರತ್ ಕುಮಾರ್ ಬಂಧನ
ಉಡುಪಿ: ಮಲ್ಪೆ ಕೊಚ್ಚಿನ್ ಶಿಪ್‌ಯಾರ್ಡ್‌ಗೆ ಸಂಬಂಧಿಸಿದ ನೌಕರರು ಭಾರತೀಯ ನೌಕಾಸೇನೆಗೆ ಸೇರಿದ ಅತ್ಯಂತ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಅನಧಿಕೃತವಾಗಿ ರವಾನಿಸಿ ಅಕ್ರಮ ಲಾಭ ಪಡೆದಿರುವ ಪ್ರಕರಣದಲ್ಲಿ ಉಡುಪಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುಜರಾತ್ ರಾಜ್ಯದ ಆನಂದ ತಾಲೂಕಿನ ಕೈಲಾಸ್ ನಗರ ನಿವಾಸಿ ಹೀರೇಂದ್ರ ಕುಮಾರ್ ಅಲಿಯಾಸ್ ಭರತ್ ಕುಮಾರ್ ಖಡಯಾತ್ (34) ಬಂಧಿತ ಆರೋಪಿ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಮೂವರಿಗೆ ಏರಿಕೆಯಾಗಿದೆ. ಈ ಮೊದಲು ಉತ್ತರ ಪ್ರದೇಶದ ನಿವಾಸಿಗಳಾದ ರೋಹಿತ್ ಹಾಗೂ…

