ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚನೆ: ಮಹಿಳೆ ಬಂಧನ

ಪ್ರಧಾನ ಮಂತ್ರಿ ಉದ್ಯೋಗ ಸೃಷ್ಟಿ ಯೋಜನೆಯಲ್ಲಿ ಸಬ್ಸಿಡಿ ಸಾಲ ತೆಗೆಸಿ ಕೊಡುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮೋಸಕ್ಕೆ ಬಲಿಯಾದವರು ಉಡುಪಿ ನಗರ ಮತ್ತು ಬ್ರಹ್ಮಾವರ ಠಾಣೆಗಳಲ್ಲಿ ದೂರು ದಾಖಲಿಸಿದ್ದು , ವಂಚನೆ ಜಾಲ ಬೆನ್ನತ್ತಿರುವ ಪೊಲೀಸರು ಕಾರ್ಯಾಚರಣೆ ನಡೆಸಿ ವಂಚನೆ ಜಾಲದ ಕಿಂಗ್ ಪಿನ್ ಬ್ರಹ್ಮಾವರ ತಾಲ್ಲೂಕು ಆರೂರು ಗ್ರಾಮ ಕೌಸಲ್ಯಾ ಎಂಬ ಮಹಿಳೆಯನ್ನು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಲ್ಲದೆ ಈ ವಂಚನೆ ಜಾಲದ ಕೊಕ್ಕರ್ಣೆ…

Read More

ಕಾರ್ಕಳ: ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕಿಗೆ 10.58 ಲ.ರೂ ವಂಚನೆ!!

ಕಾರ್ಕಳ : ನಕಲಿ ಚಿನ್ನಾಭರಣವನ್ನು ಅಡಮಾನ ಇಟ್ಟು ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ ಬರೋಬ್ಬರಿ 10.58 ಲಕ್ಷ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಕುರಿತು ನಕಲಿ ಚಿನ್ನ ಅಡಮಾನ ಇರಿಸಿದ ದಂಪತಿ ನಾಗರಾಜ ಹಾಗೂ ಆತನ ಪತ್ನಿ ರೇಣುಕಾ ಹಾಗೂ ಚಿನ್ನದ ಅಸಲಿಯತ್ತು ಪರೀಕ್ಷೆ ಮಾಡುವ ಅಕ್ಕಸಾಲಿಗ ಸತೀಶ್ ಆಚಾರ್ಯ ಎಂಬವರ ವಿರುದ್ಧ ಬ್ಯಾಂಕ್ ಮ್ಯಾನೇಜರ್ ಲಕ್ಷ್ಮಣ್ ಶೇಟ್ ಎಂಬವರು ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾರ್ಕಳದ ಗೋಕರ್ಣನಾಥ ಕೋ-ಅಪರೇಟಿವ್ ಬ್ಯಾಂಕಿಗೆ…

Read More

ಕಾರ್ಕಳ: ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣ- ಯುವತಿ ನಿರೀಕ್ಷಾ ಬಂಧನ

ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಯುವತಿ ನಿರೀಕ್ಷಾಳನ್ನು ಬಂಧಿಸಲಾಗಿದೆ.  ಮಂಗಳೂರಿನಲ್ಲಿ ಯುವತಿ ನಿರೀಕ್ಷಾಳನ್ನು ಕದ್ರಿ ಪೊಲೀಸರು ಮಂಗಳೂರಿನಲ್ಲಿ ಬಂಧಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಭಿಷೇಕ್ ಹನಿ ಟ್ರ್ಯಾಪ್ ಗೆ ಒಳಪಡಿಸಿ ದುಡ್ಡಿಗಾಗಿ ಬೇಡಿಕೆ ಇಡಲಾಗಿತ್ತು. ಇದರಿಂದ ಬೇಸತ್ತು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ನಲ್ಲಿ ಯುವತಿ ನಿರೀಕ್ಷಾ ಸೇರಿ 4 ಹೆಸರುಗಳನ್ನು ಉಲ್ಲೇಖಿಸಿದ್ದು, ಇದೀಗ ಯುವತಿಯನ್ನು ಬಂಧಿಸಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.

Read More

ವಿಟ್ಲ: ಜೈಲಿನಲ್ಲಿ ಕಂಬಿ ಎಣಿಸಿದ ಪೆರುವಾಯಿ ಗ್ರಾಮ ಪಂ. ಅಧ್ಯಕ್ಷೆ ನಫೀಸರವರನ್ನು ತಕ್ಷಣ ವಜಾಗೊಳಿಸಿ- ಗ್ರಾಮಸ್ಥರ ಆಗ್ರಹ

ವಿಟ್ಲ: ಲಂಚದ ಬೇಡಿಕೆ ಇಟ್ಟು ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧನವಾಗಿ ಇದೀಗ ಬಿಡುಗಡೆಗೊಂಡು ಅಧ್ಯಕ್ಷ ಸ್ಥಾನದಲ್ಲಿ ಮತ್ತೆ ಮುಂದುವರಿದಿರುವ ಒಂದನೇ ಆರೋಪಿ ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ನಫೀಸರವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹಿಸಿ ಗ್ರಾಮಸ್ಥರಿಂದ ಪತ್ರಿಕಾಗೋಷ್ಠಿ ನಡೆಯಿತು. ’ಪತ್ರಿಕಾಗೋಷ್ಠಿಯಲ್ಲಿ ಗ್ರಾಮಸ್ಥರು ಮಾತನಾಡಿ ’ಸಣ್ಣ ನೀರಾವರಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದಿಂದ ಪೆರುವಾಯಿ ಮತ್ತು ಮಾಣಿಲ ಗ್ರಾಮದ ಕೃಷಿಕ ವರ್ಗದ 30 ಕುಟುಂಬಗಳು ಉಚಿತ ಯೋಜನೆಗೆ ಆಯ್ಕೆಯಾಗಿದೆ. ಪೆರುವಾಯಿ ಗ್ರಾಮ ಪಂಚಾಯತ್…

Read More

ಉಡುಪಿ: ಪ್ರೇಮಿಗಳಿಬ್ಬರು ನೇಣು ಬಿಗಿದು ಆ*ತ್ಮ*ಹ*ತ್ಯೆ..!!

ಉಡುಪಿ: ಪ್ರೇಮಿಗಳಿಬ್ಬರು ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಂಬಲಪಾಡಿಯ ಕಾಳಿಕಾಂಬ ನಗರದ ಲೇಬರ್ ಕಾಲನಿಯಲ್ಲಿ ಇಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಪವಿತ್ರ (17) ಹಾಗೂ ಮಲ್ಲೇಶ (23) ಎಂದು ಗುರುತಿಸಲಾಗಿದೆ. ಪವಿತ್ರ ಅಜ್ಜರಕಾಡು ಸರಕಾರಿ ಮಹಿಳಾ ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಈಕೆಯ ತಾಯಿ ರಾಯಚೂರಿಗೆ ತೆರಳಿದ್ದ ಮೇಲೆ ಮಲ್ಲೇಶ ಮನೆಗೆ ಬಂದಿದ್ದ ಎನ್ನಲಾಗಿದೆ. ಬಳಿಕ ಇವರಿಬ್ಬರೂ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಉಡುಪಿ…

Read More

ಕಾರ್ಕಳ: ಯುವಕ ಆತ್ಮಹತ್ಯೆ ಪ್ರಕರಣ- ಸ್ನೇಹಿತರ ಮೊಬೈಲ್‌ ಪೊಲೀಸರ ವಶಕ್ಕೆ

ಉಡುಪಿ : ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಪರಪ್ಪಾಡಿಯ ನಿವಾಸಿ ಅಭಿಷೇಕ್ ಆಚಾರ್ಯ (23), ಗುರುವಾರ ಬೆಮ್ಮಣ್‌ನ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಅಭಿಷೇಕ್ ಪ್ರೇಮ ವೈಫಲ್ಯದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ ಎಂದು ಉಡುಪಿ ಜಿಲ್ಲೆಯ ಪೊಲೀಸ್‌ ಅಧೀಕ್ಷಕ ಹರಿರಾಮ್ ಶಂಕರ್‌ತಿಳಿಸಿದ್ದಾರೆ. ಕುಟುಂಬದವರ ಪ್ರಕಾರ ಆತ ಕಳೆದ ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದನು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಅಭಿಷೇಕ್…

Read More

ಬೀಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಮುತ್ತು ಕೊಟ್ಟ ವ್ಯಕ್ತಿಯ ವಿರುದ್ಧ ಪೋಕ್ಸೋ ಪ್ರಕರಣ

ತಂದೆ-ತಾಯಿ ಜತೆಗೆ ಮೈಸೂರಿನಿಂದ ಕಾಪು ಬೀಚ್‌ಗೆ ಬಂದಿದ್ದ ಹದಿನೈದರ ಹರೆಯದ ಬಾಲಕನಿಗೆ ಮುತ್ತು ಕೊಟ್ಟ ಆರೋಪದಲ್ಲಿ ಉಳ್ಳಾಲದ ವ್ಯಕ್ತಿಯ ವಿರುದ್ಧ ಕಾಪು ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ.  ಸಂತ್ರಸ್ತ ಬಾಲಕ ಮತ್ತು ಆತನ ಮನೆಯವರು  ಬೀಚ್ ನಲ್ಲಿ ಸುತ್ತಾಡುತ್ತಿದ್ದಾಗ ಶೌಚಾಲಯ ಬಳಿ ಬಂದ ಆರೋಪಿ ಶೌಕತ್ ಅಲಿ (47) ಬಾಲಕನಿಗೆ ಮುತ್ತು ಕೊಟ್ಟಿದ್ದನು. ಇದನ್ನು ಗಮನಿಸಿದ ಬಾಲಕನ ತಂದೆ ಬೊಬ್ಬೆ ಹೊಡೆದಿದ್ದು ಆರೋಪಿ ಸ್ಥಳದಿಂದ ಪರಾರಿಯಾಗಲೆತ್ನಿಸಿದ್ದಾನೆ. ಈ ವೇಳೆ ಗಸ್ತು ನಿರತ ಪೊಲೀಸರು ಮತ್ತು ಸಾರ್ವಜನಿಕರು ಜತೆ…

Read More

SDPI ಮುಖಂಡ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ

ಉಡುಪಿ: ಉಡುಪಿ ನಗರ ಪೊಲೀಸ್ ಠಾಣೆಯಲ್ಲಿನ ದ್ವೇಷ ಭಾಷಣ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಷರತ್ತು ಉಲ್ಲಂಘಿಸಿದ ಎಸ್ ಡಿ ಪಿ ಐ ಮುಖಂಡ ರಿಯಾಜ್ ಕಡಂಬು ಅವರನ್ನು ಉಡುಪಿ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಹಿಂದೆ ದ್ವೇಷ ಭಾಷಣಕ್ಕೆ ಸಂಬಂಧಿಸಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು ಈ ಬಗ್ಗೆ ಅವರು ಹೈಕೋರ್ಟ್ ನಿಂದ ಜಾಮೀನು ಪಡೆದಿದ್ದ ಅವರು,…

Read More

ಉಡುಪಿ: ರಸ್ತೆ ಬದಿ ನಿಲ್ಲಿದ್ದ ಕಾರನ್ನು ಸುಟ್ಟು ಹಾಕಿದ ದುಷ್ಕರ್ಮಿಗಳು

ಉಡುಪಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರದ ಕಾವ್ರಾಡಿಯ ನೂರಾನಿ ಮಸೀದಿ ಎದುರಿನಲ್ಲಿ ನಿಲ್ಲಿಸಿದ್ದ ಮಾರುತಿ ಸ್ವಿಫ್ಟ್ ಕಾರು ದುಷ್ಕರ್ಮಿಗಳ ಬೆಂಕಿಗೆ ಆಹುತಿಯಾಗಿದೆ. ಕಾವ್ರಾಡಿ ಗ್ರಾಮದ ಶೇಖ್ ಮೊಹಮ್ಮದ್ ಗೌಸ್ ಕುಟುಂಬ ಅ.1ರಂದು ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಪ್ರವಾಸಕ್ಕೆ ಹೋಗುವ 10 ದಿನಗಳ ಮೊದಲು 5 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಖರೀದಿಸಿದ್ದರು. ಆದರೆ ಕಾರನ್ನು ಅವರ ಮನೆಗೆ ತೆಗೆದುಕೊಂಡು…

Read More

ಉಡುಪಿ : AKMS ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ- ಮಹಿಳೆಯ ಬಂಧನ

ಉಡುಪಿ : ಖಾಸಗಿ ಬಸ್ ಮಾಲೀಕ ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದು, ಇದೀಗ ಕೊಲೆಗೆ ಸಂಚು ರೂಪಿಸಿ ಕೃತ್ಯದಲ್ಲಿ ಭಾಗಿಯಾದ ನಾಲ್ಕನೇ ಆರೋಪಿ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ರಿಧಾ ಶಭನಾ (27) ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೈಫುದ್ದೀನ್ ಕೊಲೆ ಪ್ರಕರಣ ಸಂಬಂಧ ಉಡುಪಿ ಮಿಷನ್ ಕಾಂಪೌಂಡ್ ನಿವಾಸಿ ಮಹಮದ್‌ ಫೈಸಲ್ ಖಾನ್ (27), ಕರಂಬಳ್ಳಿ ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಮಂಗಳೂರು ಕಾಟಿಪಳ್ಳ ನಿವಾಸಿ ಅಬ್ದುಲ್‌ ಶುಕುರ್…

Read More