ಉಡುಪಿ: ಯುವತಿಗೆ ಚಾಕು ಇರಿದು ಪರಾರಿಯಾಗಿದ್ದ ಯುವಕ  ಶವವಾಗಿ ಪತ್ತೆ

ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ಯುವತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕನ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.  ಕಾರ್ತಿಕ್ ಪೂಜಾರಿ ಶವ ಬಾವಿಯಲ್ಲಿ ಪತ್ತೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ಯುವತಿ ರಕ್ಷಿತಾಳನ್ನು ಚಾಕುವಿನಿಂದ ಇರಿದಿದ್ದ. ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಇದೀಗ ಯುವಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ

Read More

ಕಾರ್ಕಳ: ವೃದ್ಧೆಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳನ ಬಂಧನ..!

ಕಾರ್ಕಳದ ಅಜೆಕಾರು ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯೊಬ್ಬರ ಕತ್ತಿನಿಂದ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಸವದತ್ತಿ ತಾಲೂಕಿನ ಗೊರವನ ಕೊಳ್ಳ ನಿವಾಸಿ ಸುನಿಲ್ ರಮೇಶ್ ಲಮಾಣಿ(29) ಬಂಧಿತ ಆರೋಪಿ.  ಕಾರ್ಕಳ ಪೊಲೀಸ್ ಠಾಣಾ ನಿರೀಕ್ಷಕ ಡಿ. ಮಂಜಪ್ಪ ನೇತೃತ್ವದಲ್ಲಿ ಅಜೆಕಾರು ಪಿಎಸ್‌ಐ ಮಹೇಶ್ ಹಾಗೂ ಸಿಬ್ಬಂದಿಯವರ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸೆ. 9ರಂದು ಸಂಜೆ 4.30ರ ಸುಮಾರಿಗೆ ಕಾರ್ಕಳದ ಮುಳ್ಕಾಡು ಎಳ್ಳಾರೆ ಗ್ರಾಮದ ಹೊಸಮನೆ ನಿವಾಸಿ 80 ವರ್ಷದ ಕುಮುದಾ ಶೆಟ್ಟಿ…

Read More

ಉಡುಪಿ: ಮದುವೆ ನಿರಾಕರಿಸಿದ್ದಕ್ಕೆ ಯುವತಿಗೆ ಚೂರಿ ಇರಿದು ಯುವಕ ಪರಾರಿ- ಯುವತಿ ಗಂಭೀರ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಚೂರಿ ಇರಿದು ಇದೀಗ ಪರಾರಿಯಾಗಿದ್ದಾನೆ. ಯುವಕ ಯುವತಿಯನ್ನು ಪ್ರೀತಿಸುತ್ತಿದ್ದು ಮದುವೆ ಆಗಬೇಕು ಎಂದು ಬಹಳ ಸಮಯದಿಂದ ಒತ್ತಾಯಿಸುತ್ತಿದ್ದ. ಆಕೆ ಆಕೆಯ ಮನೆಯವರು ಇದಕ್ಕೆ ಒಪ್ಪದಂತಹ ಹಿನ್ನೆಲೆಯಲ್ಲಿ ಇಬ್ಬರಿಗೆ ಜಗಳ…

Read More

ಕೊಲ್ಲೂರು ಮೂಕಾಂಬಿಕಾ ದೇವಿಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ನೀಡಿದ ಸಂಗೀತ ನಿರ್ದೇಶಕ ಇಳಯರಾಜ

ಉಡುಪಿ: ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಕರ್ನಾಟಕದ ಕೊಲ್ಲೂರು ಮೂಕಾಂಬಿಕಾ ದೇವಿ ದೇವರ ಬಗ್ಗೆ ತಮ್ಮ ಅಪಾರ ಭಕ್ತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ. ದೈವಿಕ ತಾಯಿಯ ಮೇಲಿನ ಆಧ್ಯಾತ್ಮಿಕ ಗೌರವ ಮತ್ತು ಪ್ರೀತಿಗೆ ಹೆಸರುವಾಸಿಯಾಗಿರುವ ಇಳಯರಾಜ ಅವರು ಹಲವಾರು ವರ್ಷಗಳಿಂದ ದೇವಿಗೆ ಹಲವಾರು ಅಮೂಲ್ಯವಾದ ಆಭರಣಗಳನ್ನು ಅರ್ಪಿಸಿದ್ದಾರೆ. ವಜ್ರದ ಕಿರೀಟ ಸೇರಿದಂತೆ ಈ ಇತ್ತೀಚಿನ ಅರ್ಪಣೆಯು ಅವರ ಭಕ್ತಿ ಮತ್ತು ದೇವರನ್ನು ಭವ್ಯ ಮತ್ತು ಹೃತ್ಪೂರ್ವಕ ರೀತಿಯಲ್ಲಿ ಗೌರವಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ದೇವಿ ಮತ್ತು ವೀರಭದ್ರ ದೇವರಿಗೆ…

Read More

ಉಡುಪಿ : ಆನ್‌ಲೈನ್ ಟ್ರೇಡಿಂಗ್ ವಂಚನೆ- ಆರು ಮಂದಿ ಬಂಧನ

ಉಡುಪಿ: ಎರಡು ಪ್ರತ್ಯೇಕ ಆನ್‌ಲೈನ್ ವಂಚನೆ ಪ್ರಕರಣಗಳಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಉಡುಪಿ ಸೆನ್ ಪೊಲೀಸರು ಬಂಧಿಸಿ, ಒಟ್ಟು ೬ಲಕ್ಷ ರೂ. ನಗದು ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಕಾಪು ತಾಲೂಕಿನ ಶಂಕರಪುರದ ಜೊಸ್ಸಿ ರವೀಂದ್ರ ಡಿಕ್ರೂಸ್(೫೪), ಎಂಬವರಿಗೆ ಹೂಡಿಕೆ ಹೆಸರಿನಲ್ಲಿ ಒಟ್ಟು ೭೫,೦೦,೦೦೦ರೂ. ಹಣವನ್ನು ಆನ್‌ಲೈನ್ ವಂಚನೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಸೆನ್ ಪೊಲೀಸರು, ಸುರತ್ಕಲ್ ಕೋಡಿಕೆರೆಯ ಮೊಹಮದ್ ಕೈಸ್(೨೦), ಹೆಜಮಾಡಿ ಕನ್ನಂಗಾರಿನ ಅಹಮದ್ ಅನ್ವೀಜ್ (೨೦), ಬಂಟ್ವಾಳ ಜೋಡುಮಾರ್ಗದ ಸಫ್ವಾನ್(೩೦), ತಾಸೀರ್(೩೧) ಎಂಬವರನ್ನು ಬಂಧಿಸಿ,…

Read More

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ..!!

ಉಡುಪಿ: ಏಕಾಏಕಿ ವಾಷಿಂಗ್ ಮೆಶಿನ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟಗೊಂಡ ಘಟನೆ ಮಣಿಪಾಲದ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ಮಧ್ಯಾಹ್ನ ವೇಳೆ ಸಂಭವಿಸಿದೆ. ಮಣಿಪಾಲ ಡಿಸಿ ಆಫೀಸ್ ರಸ್ತೆಯಲ್ಲಿರುವ ಅದಿತಿ ಪರ್ವ ಅಪಾರ್ಟ್ ಮೆಂಟ್ ನಲ್ಲಿ ಈ ಅವಘಡ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕದಳದವರು ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ, ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಅವಘಡದಲ್ಲಿ ಸುಮಾರು ಅಂದಾಜು 50 ಸಾವಿರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಫ್ಲ್ಯಾಟ್ ನಲ್ಲಿ ಸಿಲುಕಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದವರು…

Read More

ಉಡುಪಿ: ಮನೆಗೆ ಕರೆದು ವ್ಯಕ್ತಿಗೆ ಹನಿಟ್ರ್ಯಾಪ್, ಹಣ ಸುಲಿಗೆ- ಮಹಿಳೆ ಸಹಿತ 6 ಮಂದಿ ಅರೆಸ್ಟ್

ಉಡುಪಿ : ಹನಿಟ್ರ್ಯಾಪ್ ಜಾಲವೊಂದನ್ನು ಭೇದಿಸಿರುವ ಜಿಲ್ಲೆಯ ಕುಂದಾಪುರ ನಗರ ಠಾಣೆ ಪೊಲೀಸರು ಮಹಿಳೆ ಸಹಿತ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸಿದ ಎರಡು ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ. ನಾವುಂದ ಬಡಾಕೆರೆಯ ಸವದ್ ಯಾನೆ ಅಚ್ಚು (28), ಗುಲ್ವಾಡಿ ಗಾಂಧಿಕಟ್ಟೆಯ ಸೈಪುಲ್ಲಾ(38), ಹಂಗಳೂರು ಗ್ರಾಮದ ಮೊಹಮ್ಮದ್ ನಾಸೀರ್ ಶರೀಫ್ (36), ಕುಂಭಾಶಿ ಮೂಡುಗೋಪಾಡಿ ಜನತಾ ಕಾಲೋನಿಯ ಅಬ್ದುಲ್ ಸತ್ತಾರ್…

Read More

ಮಗುವಿನೊಂದಿಗೆ ತಾಯಿ ಆತ್ಮಹತ್ಯೆ..!!

ಬ್ರಹ್ಮಾವರದಲ್ಲಿ ತಾಯಿ ಮಗು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆಯ ಸಿಲಿಂಗ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ತಾಯಿ ಸುಷ್ಮೀತಾ (23) ಮಗು ಶ್ರೇಷ್ಠ (1ವರ್ಷ 6 ತಿಂಗಳು) ಮೃತ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಪತಿ ಕೋರ್ಟ್ ಸಂಬಂಧಿತ ಕೆಲಸಕ್ಕಾಗಿ ಬೆಂಗಳೂರಿಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದ್ದುಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಜಾಳು ಹೆರಂಜೆ ಕ್ರಾಸ್ ಬಳಿ ಈ ಘಟನೆ ಸಂಭವಿಸಿದೆ.

Read More

ಸತತ 216 ಗಂಟೆಗಳ ಭರತನಾಟ್ಯ ಪ್ರದರ್ಶನ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ ದೀಕ್ಷಾ

ಉಡುಪಿ : ನಿರಂತರವಾಗಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸುವ ಮೂಲಕ ಉಡುಪಿಯ ವಿದುಷಿ ದೀಕ್ಷಾ ವಿ. ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ, ಈ ಪ್ರದರ್ಶನದ ಮೂಲಕ ದೀಕ್ಷಾ ಹಿಂದಿನ 170 ಗಂಟೆಗಳ ದಾಖಲೆಯನ್ನು ಮುರಿದಿದ್ದಾರೆ. ದಾಖಲೆಯ ಮ್ಯಾರಥಾನ್ ಪ್ರದರ್ಶನವು ಆ. 21 ರಂದು ಮಧ್ಯಾಹ್ನ 3:30ಕ್ಕೆ ಪ್ರಾರಂಭವಾಯಿತು ಮತ್ತು ಒಂಬತ್ತು ದಿನಗಳ ಕಾಲ ಮುಂದುವರಿದು, ಇದೀಗ 216 ಗಂಟೆಗಳನ್ನು ಪೂರ್ಣಗೊಂಡಿದೆ.ಬ್ರಹ್ಮಾವರ ತಾಲ್ಲೂಕಿನ ಮುಂಕಿಜಡ್ಡು ಮೂಲದ ವಿದುಷಿ ದೀಕ್ಷಾ ವಿ. ಪೂಜಾರಿ ಅವರು ಭರತನಾಟ್ಯಂನಲ್ಲಿ ಉನ್ನತ ಸ್ಥಾನಗಳನ್ನು…

Read More

ಉಡುಪಿ: ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿತ

ಉಡುಪಿ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಲ್ಲೂರು ಘಾಟ್ ರಸ್ತೆಯ ಗುಡ್ಡ ಕುಸಿದಿರುವ ಬಗ್ಗೆ ವರದಿಯಾಗಿದೆ.ಭಾರಿ ಮಳೆಯಿಂದಾಗಿ ಬೆಳಗ್ಗೆ ರಸ್ತೆ ಪಕ್ಕದಲ್ಲಿರುವ ಗುಡ್ಡ ಕುಸಿದಿದ್ದು ಇದರ ಮಣ್ಣು ರಸ್ತೆ ಮೇಲೆ ಬಿದ್ದಿದೆ. ಇದರಿಂದ ಘಾಟ್ ರಸ್ತೆಯ ಸಂಚಾರ ಬಂದ್ ಆಗುವ ಸಾಧ್ಯತೆ ಇದೆ. ಸ್ಥಳಕ್ಕೆ ಸಂಬಂಧಪಟ್ಟ ಇಲಾಖೆಯವರು ಹಾಗೂ ಪೊಲೀಸರು ಆಗಮಿಸಿ, ಮಣ್ಣು ತೆರವುಗೊಳಿಸುವ ಕಾರ್ಯಚರಣೆ ನಡೆಸಿದ್ದಾರೆ

Read More