
IPL 2024 ಬೆಂಗಳೂರಲ್ಲಿಂದು ಆರ್‌ಸಿಬಿ vs ಚೆನ್ನೈ ಬಹುನಿರೀಕ್ಷಿತ ನಾಕೌಟ್ ಕದನ
ಆರ್‌ಸಿಬಿಯ ಈ ಬಾರಿಯ ಪ್ರದರ್ಶನ ಯಾವ ಥ್ರಿಲ್ಲರ್ ಸಿನಿಮಾಕ್ಕೂ ಕಡಿಮೆಯೇನಲ್ಲ. ಮೊದಲಾರ್ಧದಲ್ಲಿ 8 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದು, ಇನ್ನೇನು ಪ್ಲೇ-ಆಫ್ ರೇಸ್‌ನಿಂದ ಹೊರಬಿತ್ತು ಅನ್ನುವಷ್ಟರಲ್ಲಿ ಗೇರ್ ಬದಲಿಸಿ ಹೈಸ್ಪೀಡ್‌ನಲ್ಲಿ ಓಡಲು ಶುರುವಿಟ್ಟ ತಂಡ ಸದ್ಯ ಸತತ 5, ಒಟ್ಟಾರೆ 6 ಗೆಲುವಿನೊಂದಿಗೆ 12 ಅಂಕ ಸಂಪಾದಿಸಿದೆ. ಬೆಂಗಳೂರು(ಮೇ.18): 17ನೇ ಆವೃತ್ತಿ ಐಪಿಎಲ್‌ನ ಬಹುನಿರೀಕ್ಷಿತ, ಸಾಂಪ್ರದಾಯಿಕ ಬದ್ಧವೈರಿಗಳಾದ ಆರ್‌ಸಿಬಿ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ನಿರ್ಣಾಯಕ ಹಣಾಹಣಿಗೆ ನಗರದ ಚಿನ್ನಸ್ವಾಮಿ ಕ್ರೀಡಾಂಗಣ ಸಜ್ಜಾಗಿದೆ. ಉಭಯ ತಂಡಗಳಿಗೂ…