ಕುಲಾಲ ಸಂಘ (ರಿ.) ವಿಟ್ಲ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕೋತ್ಸವ

ವಿಟ್ಲ : ಕುಲಾಲ ಸಂಘ (ರಿ.) ವಿಟ್ಲ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ವಾರ್ಷಿಕೋತ್ಸವವು ಸಂಘದ ಮಹಿಳಾ ಘಟಕದ ಸಹಭಾಗಿತ್ವದಲ್ಲಿ ದಿನಾಂಕ ಡಿ. 28 ರಂದು ಕುಲಾಲ ರಜತ ಭವನದಲ್ಲಿ ನಡೆಯಲಿದೆ.ಬೆಳಿಗ್ಗೆ 11ಗಂಟೆಗೆ ಸಭಾ ಕಾರ್ಯಕ್ರಮವು ಪರಮಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮಾಣಿಲ ಇವರ ಆರ್ಶಿವಾದೊಂದಿಗೆ ನಡೆಯಲಿದೆ. ಕಾರ್ಯಕ್ರಮಗಳ ವಿವರ:ಬೆಳಿಗ್ಗೆ 7:30 ಕ್ಕೆ ಗಣಹೋಮ, 9 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ ಆರಂಭ, 9:30 ಕ್ಕೆ ಭಜನೆ,…

Read More

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಉಜಿರೆ ಪೇಟೆಯಲ್ಲಿ ಮೈಕ್‌ನಲ್ಲಿ ಆದೇಶ ಘೋಷಿಸಿದ ಪೊಲೀಸರು

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಸಮಾಜಘಾತುಕ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಮತ್ತೆ ಗಡಿ ಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರಾಗಿರುವ ಆದೇಶವನ್ನು ಬೆಳ್ತಂಗಡಿ ಪೊಲೀಸರು ಧ್ವನಿವರ್ಧಕದ ಮೂಲಕ ಸಾರ್ವಜನಿಕರಿಗೆ ತಿಳಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸರು ಗುರುವಾರ ನೋಟಿಸ್ ನೀಡಲು ಉಜಿರೆಯ ಅವರ ಮನೆಗೆ ತೆರಳಿದಾಗ…

Read More

ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ಮೋಸ ಮಾಡಿ ಮೂವರು ಯುವಕರ ವಿರುದ್ದ ದೂರು ದಾಖಲು

ಮಂಗಳೂರು: ವಿದೇಶದಲ್ಲಿ ಒಂದೂವರೆ ಲಕ್ಷ ಸಂಬಳ ಇರುವ ಕೆಲಸ ತೆಗೆಸಿಕೊಡುತ್ತೇನೆ ಎಂದು ಹೇಳಿ ಅಮಾಯಕ ಯುವಕರನ್ನು ದೂರದ ಬಡ ರಾಷ್ಟ್ರ ಅರ್ಮೇನಿಯಾಕ್ಕೆ ಕರೆಸಿಕೊಂಡು ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸಗೈದ ಬಗ್ಗೆ ಸಂತ್ರಸ್ತ ಯುವಕರು ಬಜ್ಜೆ ಮತ್ತು ಕದ್ರಿ ಠಾಣೆಗೆ ಮೂವರು ಯುವಕರ ವಿರುದ್ಧ ದೂರು ನೀಡಿದ್ದಾರೆ. ಗಂಜಿಮಠ ಮಣೇಲ್ ನಿವಾಸಿ ರಾಕೇಶ್ ರೈ ಭೂಷಣ್ ಕುಲಾಲ್ ಯೆಯ್ಯಾಡಿ ಮತ್ತು ಆಂಟನಿ ಪ್ರೀತಮ್ ಗರೋಡಿ ಎಂಬವರು ಹಣ ಪಡೆದು 30ಕ್ಕೂ ಹೆಚ್ಚು ಯುವಕರನ್ನು ಮೋಸ ಮಾಡಿದ್ದಾರೆಂದು ಸಂತ್ರಸ್ತ ಮಂಜುನಾಥ್…

Read More

ವಿದ್ಯಾರ್ಥಿಗಳಲ್ಲಿ ಶಿಸ್ತು, ಸೇವಾ ಮನೋಭಾವ, ಮತ್ತು ದೇಶ ಪ್ರೇಮ ರೂಪಿಸುವಲ್ಲಿ ಸ್ಕೌಟ್ ಗೈಡ್ ಪೂರಕ – ಅನಿಲ್ ದಾಸ್

ಮಂಗಳೂರು: ಸ್ಕೌಟ್ಸ್ ಗೈಡ್ಸ್ ಶಿಕ್ಷಣದಿಂದ ವಿದ್ಯಾರ್ಥಿಗಳು ಉತ್ತಮ ಪ್ರಜೆಗಳಾಗಿ ಮೂಡಿ ಬರಲು ಸಾಧ್ಯ. ಮಕ್ಕಳು ಎಳವೆಯಲ್ಲೇ ಉತ್ತಮ ಸಂಸ್ಕಾರಯುತ ಶಿಕ್ಷಣದೊಂದಿಗೆ ಶಿಸ್ತು, ಸೇವಾಮನೋಭಾವ , ದೇಶ ಪ್ರೇಮ ಮುಂತಾದ ವಿಚಾರಗಳನ್ನು ಕಲಿತಾಗ ಉತ್ತಮ ಭಾರತ ನಿರ್ಮಾಣ ಆಗುತ್ತದೆ. ಈ ಶಿಕ್ಷಣ ಸ್ಕೌಟ್ಸ್ ಗೈಡ್ಸ್ ನಿಂದ ಸಾಧ್ಯ ಎಂದು ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆಯ ಅಧ್ಯಕ್ಷರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಆಗಿರುವ ಅನಿಲ್ ದಾಸ್ ಅವರು ಅಭಿಪ್ರಾಯ…

Read More

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ಮತ್ತೆ ಗಡಿಪಾರು ಆದೇಶ..!!

ಪುತ್ತೂರು: ಸೌಜನ್ಯಾ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿ ಎರಡನೇ ಬಾರಿ ಪುತ್ತೂರು ಸಹಾಯಕ್ತ ಆಯುಕ್ತೆ ಆದೇಶ ಹೊರಡಿಸಿದ್ದಾರೆ. ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್ ಡಿ.17 ರಂದು ಈ ಆದೇಶ ಹೊರಡಿಸಿದ್ದಾರೆ. ಮಹೇಶ್ ಶೆಟ್ಟಿಯನ್ನು ಈ ಹಿಂದೆ ಗಡಿಪಾರು ಮಾಡಿ ಪುತ್ತೂರು ಎ.ಸಿ. ಆದೇಶ ಹೊರಡಿಸಿದ್ದರು. ಇದನ್ನು ಮರು ಪರಿಶೀಲಿಸಲು ಹೈಕೋರ್ಟ್ ಸೂಚಿಸಿತ್ತು. ಹೈಕೋರ್ಟ್ ಆದೇಶದಂತೆ ಮರು ಪರಿಶೀಲನೆ ಮಾಡಿ ಒಂದು ವರ್ಷಗಳ ಕಾಲ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು…

Read More

ಧರ್ಮಸ್ಥಳ ಪ್ರಕರಣ: ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆ

ಧರ್ಮಸ್ಥಳ ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆಗೊಂಡಿದ್ದಾನೆ.  ಜಾಮೀನು ಸಿಕ್ಕಿದ 24 ದಿನಗಳ ಬಳಿಕ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ನವೆಂಬರ್ 24ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನು ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀಯ ಶ್ಯೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಜಾಮೀನು ನೀಡಲು ಯಾರೂ ಮುಂದೆ ಬಾರದ ಕಾರಣ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ.   ಇಂದು…

Read More

ಉಳ್ಳಾಲ: ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರರಿಗೆ ಗಂಭೀರ ಗಾಯ

ಉಳ್ಳಾಲ: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರ್ ಬಳಿ ಬುಧವಾರ ತಡರಾತ್ರಿ ನಡೆದಿದೆ. ಗಾಯಗೊಂಡವರನ್ನು ನಿಖಿಲ್, ಗಗನ್ ಜೀತ್ ಎಂದು ಗುರುತಿಸಲಾಗಿದೆ. ಇವರು ವಾಮಂಜೂರು ಮತ್ತು ದೇರಳಕಟ್ಟೆ ಮೂಲದವರು ಎಂದು ತಿಳಿದು ಬಂದಿದೆ. ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ಎದುರಿನಿಂದ ಚಲಿಸುತ್ತಿದ್ದ ಕಾರಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರು ರಸ್ತೆಗೆ ಎಸೆಯಲ್ಪಟ್ಟು…

Read More

ಮಂಗಳೂರು: ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ- ಇಬ್ಬರು ಆರೋಪಿಗಳ ಬಂಧನ

ಅಂತರ್ ರಾಜ್ಯ ವಾಹನ ಹಾಗೂ ಸರಗಳ್ಳತನ ಪ್ರಕರಣಗಳ ಇಬ್ಬರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ . ತೋಟ ಪೈಸಲ್ ಮತ್ತು ಮೈಸೂರಿನ ವಿನಾಯಕ ನಗರದ ನಿತೀನ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 1,20,000 ರೂ. ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಿಸಿದ 45 ಸಾವಿರ ರೂ. ಮೌಲ್ಯದ ಬೈಕ್‌ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡಿ.12ರಂದು ಮಂಗಳೂರಿನ ಯೆಯ್ಯಾಡಿಯ ಶ್ರೀ ಹರಿ ಕಾಂಪ್ಲೆಕ್ಸ್ ನ ಪಾರ್ಕಿಂಗ್ ಬಳಿ ನಿಲ್ಲಿಸಿದ್ದ ಬೈಕ್ ಕಳವು ಆಗಿರುವ ಬಗ್ಗೆ…

Read More

 ಮಂಗಳೂರು: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿಯವರು ಕೆಲವೊಂದು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ. ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಸಹಾಯ ಆಯುಕ್ತರ ಕಚೇರಿಯಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮವು ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು…

Read More

ಮೂಡುಬಿದಿರೆಯ ‘ಸಿಂಗಮ್’ ಕಾರ್ಯಾಚರಣೆ-ಬಂಟ್ವಾಳದ ರೌಡಿಶೀಟರ್ ಬಂಧನ: ಎಂಡಿಎಂಎ, ತಲವಾರು ವಶ

ಮೂಡುಬಿದಿರೆ: ಮೂಡುಬಿದಿರೆಯ ‘ಸಿಂಗಮ್’ ಎಂದೇ ಖ್ಯಾತರಾಗಿರುವ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದಲ್ಲಿ ನಡೆದ ಸಿನಿಮೀಯ ಶೈಲಿಯ ಕಾರ್ಯಾಚರಣೆಯಲ್ಲಿ ಬಂಟ್ವಾಳದ ರೌಡಿಶೀಟರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಕಲ್ಲಡ್ಕ ನಿವಾಸಿ ತೌಸೀಫ್ ಯಾನೆ ಅಪ್ಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು ₹50,000 ಮೌಲ್ಯದ 10 ಗ್ರಾಂ ಎಂಡಿಎಂಎ ಮಾದಕವಸ್ತು ಹಾಗೂ ಒಂದು ತಲವಾರು ವಶಪಡಿಸಿಕೊಳ್ಳಲಾಗಿದೆ.ಆರೋಪಿ ತಲವಾರು ಇಟ್ಟುಕೊಂಡು ಕಾರಿನಲ್ಲಿ ಸಂಚರಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ…

Read More