ಪ್ರಯಾಣಿಕರ ಗಮನಕ್ಕೆ: ಮಂಗಳೂರು-ಯಶವಂತಪುರ ಎಕ್ಸ್ ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆ
ಮಂಗಳೂರು: ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರದವರೆಗೆ ವಾರಕ್ಕೆ ಮೂರು ಬಾರಿ ಸಂಚರಿಸುವ ಎಕ್ಸ್ಪ್ರೆಸ್ ರೈಲಿನ ಸಮಯದಲ್ಲಿ ಬದಲಾವಣೆಯಾಗಿದೆ. ಈ ಬಗ್ಗೆ ನೈಋತ್ಯ ರೈಲ್ವೆ ಮಾಹಿತಿ ನೀಡಿದೆ. ಮಂಗಳೂರು ಜಂಕ್ಷನ್ನಿಂದ ಬೆಂಗಳೂರಿನ ಯಶವಂತಪುರದವರೆಗೆ ಸಂಚರಿಸುವ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ರೈಲಿನ ವೇಳಾಪಟ್ಟಿಯನ್ನು ನವೆಂಬರ್ 1 ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಲಾಗುತ್ತದೆ. ರೈಲು ಸಂಖ್ಯೆ- 16576 ಮಂಗಳೂರು ಜಂಕ್ಷನ್ನಿಂದ ಬೆಳಿಗ್ಗೆ 11.30 ರ ಬದಲು ಬೆಳಿಗ್ಗೆ 7 ಗಂಟೆಗೆ ಹೊರಟು, ಅದೇ ದಿನ ರಾತ್ರಿ 8:45 ರ ಬದಲು…

