ಬಂಟ್ವಾಳ: ಪೊಸಳ್ಳಿಯಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ ಸಂಭ್ರಮ

ಬಿ.ಸಿ.ರೋಡ್ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ ತಿನಸುಗಳ ಹಬ್ಬ ಕಾರ್ಯಕ್ರಮ ಆದಿತ್ಯವಾರ ಪೊಸಳ್ಳಿ ಕುಲಾಲ ಸಮುದಾಯ ಭವನದಲ್ಲಿ ನಡೆಯಿತು.ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ಸಮಾರಂಭವನ್ನು ಉದ್ಘಾಟಿಸಿ ಸಭಾಧ್ಯಕ್ಷತೆ ವಹಿಸಿದ್ದರು. ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಪ್ರಧಾನ ಕಾರ್ಯದರ್ಶಿ ನಾರಾಯಣ ಸಿ. ಪೆರ್ನೆ ತುಳುನಾಡು ಮತ್ತು ಆಟಿತಿಂಗಳ ಮಹತ್ವದ…

Read More

ಮಂಗಳೂರು : ನೆರೆ, ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,  ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಅಧಿಕಾರಿಗಳೊಂದಿಗೆ ಜಿಲ್ಲೆಯ ವಿವಿಧ ನೆರೆ ಪೀಡಿತ ಹಾಗೂ ಮಳೆಹಾನಿ ಪ್ರದೇಶಗಳಿಗೆ ಇಂದು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು. ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿದ ಜಿಲ್ಲಾಧಿಕಾರಿ ಸ್ಥಳೀಯ ಸಾರ್ವಜನಿಕರೊಂದಿಗೆ ಅಹವಾಲು ಆಲಿಸಿದರು. ನೆರೆ ಪೀಡಿತ ಪ್ರದೇಶಗಳಲ್ಲಿ ಹಾಗೂ ಸಂಭಾವ್ಯ ನೆರೆ ಪ್ರದೇಶಗಳಲ್ಲಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಪ್ರದೇಶಗಳ ನಿವಾಸಿಗಳ ಸ್ಥಳಾಂತರ ಮತ್ತು ಕಾಳಜಿ ಕೇಂದ್ರಗಳ ಸ್ಥಾಪನೆಯ ಬಗ್ಗೆ ಸ್ಥಳೀಯ ಅಧಿಕಾರಿಗಳಿಗೆ ಅವರು…

Read More

ದ.ಕ ಜಿಲ್ಲೆಯ ನಾಳೆ (ಆ.01) ಶಾಲೆ – ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ (ಆಗಸ್ಟ್ 1) ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.

Read More

ಮಂಗಳೂರು: ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಿದ್ರೆ FIR – ಜಿಲ್ಲಾಧಿಕಾರಿ ಎಚ್ಚರಿಕೆ

ಮಂಗಳೂರು: ಮಳೆಗಾಲದ ಸಂದರ್ಭ ಅಪಾಯಕಾರಿ ಪ್ರದೇಶಗಳಲ್ಲಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಎಚ್ಚರಿಕೆ ನೀಡಿದ್ದಾರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಪ್ರವಾಸಿ ತಾಣ, ಬೀಚ್ ಗಳಲ್ಲಿ ಅಪಾಯಕಾರಿ ಬೋರ್ಡ್ ಆಳವಡಿಸಲಾಗಿದೆ. ಬೋರ್ಡ್ ಜೊತೆ ಕೆಲವು ಕಾನೂನುಗಳು ಅನ್ವಯವಾಗುತ್ತದೆ. ಇಂತಹ ಬೋರ್ಡ್ ಇರುವ ಪ್ರದೇಶಗಳಲ್ಲಿ ಕಾನೂನು ಮೀರಿ ರೀಲ್ಸ್ ಮಾಡಿದರೆ ಅವರ ಮೇಲೆ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಕಾಡಿನ ಮಧ್ಯೆ ಹಾಗು ಇತರ ಅಪಾಯಕಾರಿ ಪ್ರದೇಶಗಳಲ್ಲಿ ವಿಡಿಯೋ ಮಾಡುವುದು…

Read More

ಮಂಗಳೂರು: ಬಸ್ಸಿನಲ್ಲಿ ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು- ಆಸ್ಪತ್ರೆಯ ಒಳಗೆ ಬಸ್ ನುಗ್ಗಿಸಿದ ಚಾಲಕ, ನಿರ್ವಾಹಕ..!

ಮಂಗಳೂರು: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಚಾಲಕ ಹಾಗು ನಿರ್ವಾಹಕ ಏನನ್ನೂ ಯೋಚಿಸದೆ ಬಸ್ಸನ್ನು ಆಂಬುಲೆನ್ಸ್ ಮಾದರಿಯಲ್ಲಿ ಚಲಾಯಿಸಿ ಸೂಕ್ತ ಸಮಯದಲ್ಲಿ ಆಸ್ಪತ್ರೆಗೆ ಸೇರಿಸಿ ಜೀವ ಉಳಿಸಿದ್ದಾರೆ. 13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ಸು ಎಂದಿನಂತೆ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಈ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗೆ ಹಠಾತ್ತನೆ ಎದೆ ನೋವು ಕಾಣಿಸಿಕೊಂಡಿದೆ. ಆಕೆಗೆ ಹೃದಯಾಘಾತವಾಗುವ ಲಕ್ಷಣಗಳು ಕಂಡುಬರುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಗಜೇಂದ್ರ ಕುಂದರ್ ಹಾಗೂ ನಿರ್ವಾಹಕ ಮಹೇಶ್ ಪೂಜಾರಿ…

Read More

ಭಾರೀ ಮಳೆಯ ಹಿನ್ನಲೆ ದ.ಕ ಜಿಲ್ಲೆಯಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ ಅಂದರೆ ಜು.31ರಂದು ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಆದೇಶ ಹೊರಡಿಸಿದ್ದಾರೆ. ಅದರಂತೆ ಬುಧವಾರ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ & ಪಿಯು ಕಾಲೇಜುಗಳವರೆಗೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲೆಯಲ್ಲಿ ನಾಳೆ ಹವಾಮಾನ ಇಲಾಖೆ ರೆಡ್‌ಅಲರ್ಟ್‌ ಘೋಷಣೆ ಮಾಡಿರುವುದರಿಂದ ಶಾಲಾ-ಕಾಲೇಜಿಗೆ ರಜೆ ನೀಡಲಾಗಿದೆ.

Read More

ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆ: ದಕ್ಷಿಣಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದು,. ನಿನ್ನೆ ಸಂಜೆಯಿಂದ ಪ್ರಾರಂಭವಾದ ಮಳೆ ಇಂದು ಮುಂದುವರೆದಿದೆ. ಈಗಾಗಲೇ ಎಡಬಿಡದೇ ಮಳೆ ಸುರಿಯುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ಬಾರಿ ಮಳೆಯಾಗಲಿದ್ದು, ಗಾಳಿ 30 – 40 ಕಿಲೋ ಮೀಟರ್ ಬೀಸಲಿದೆ ಎಂದು ಹವಮಾನ…

Read More

ಪಡೀಲ್ ಅಂಡರ್ ಪಾಸ್ ನಲ್ಲಿ ನೀರು ನುಗ್ಗಿ ತಾಂತ್ರಿಕ ದೋಷದಿಂದ ಕೆಟ್ಟು ನಿಂತ KSRTC ಬಸ್

ಮಂಗಳೂರು: ಮಳೆ ಅಬ್ಬರ ಮುಂದುವರೆದಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಭಾರೀ ಅವಾಂತರವನ್ನೇ ಸೃಷ್ಠಿಸಿದೆ. ಈ ನಡುವೆ ಅಂಡರ್ ಪಾಸ್ ನಲ್ಲಿ ತುಂಬಿದ್ದ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ಮಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಎಡೆಬಿಡದೆ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರಕ್ಕೆ ತೊಂದರೆಯಾಗಿದೆ. ಈ ನಡುವೆ ಮಂಗಳೂರಿನ ಪಡೀಲ್ ರೈಲ್ವೇ ಅಂಡರ್ ಪಾಸ್ ನಲ್ಲಿ ನೀರು ನಿಂತಿದ್ದು ಈ ನೀರಿನಲ್ಲಿ ಕೆಎಸ್ಆರ್ ಟಿಸಿ ಬಸ್ ಒಂದು ಸಿಕ್ಕಿಹಾಕಿಕೊಂಡಿದೆ….

Read More

ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟಿನ ಹೆಲ್ತ್ ಕೇರ್ ಸೆಂಟರ್ ನ ವತಿಯಿಂದ ವಯೋವೃದ್ದೆ ಯೊಬ್ಬರ ಅಂತ್ಯಕ್ರಿಯೆಗೆ ಸಹಾಯ ಹಸ್ತ

ಮಂಗಳೂರು: ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ ವತಿಯಿಂದ ಪ್ರವರ್ತಿಸುವ ಓಲ್ಡ್ ಏಜ್ ಹೆಲ್ತ್ ಕೇರ್ ಹೋಂ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿಮೆನ್ಶ್ಯಾ ಕಾಯಿಲೆ ಯಿಂದ ಬಳಲುತ್ತಿದ್ದ ಕೇರಳ ಮೂಲದ ವಸಂತಿ ನಾಯರ್ (ವಯಸ್ಸು.88 )ಇಂದು ಬೆಳಿಗ್ಗೆ ತೀವ್ರ ಅಸೌಖ್ಯ ಗೊಂಡು . ಆಸ್ಪತ್ರೆಗೆ ದಾಖಲಾದರು ತಕ್ಷಣದಲ್ಲಿ ಅವರ ಮಗ ಮುಂಬೈಯಿಂದ ಬರಲು ಅನಾನುಕೂಲವಾದ ಕಾರಣ. ದಾಸ್ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಲಯನ್ ಅನಿಲ್ ದಾಸ್ ತಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾತಿ ಮಾಡಿದರು. ಗೆಳೆಯರಾದ ಫೈಝಲ್ ಕೆನಡಾ ಹಾಗೂ…

Read More

ಮಂಗಳೂರು: ನಂತೂರು ಪದವು ಬಳಿ ರಸ್ತೆ ಅಪಘಾತ- ದ್ವಿಚಕ್ರ ಸವಾರ ಸಾವು

ಮಂಗಳೂರು ನಗರದ ನಂತೂರು ಪದವು ಬಳಿ  ಮಂಗಳವಾರ ಬೆಳಗ್ಗೆ  ನಡೆದ  ರಸ್ತೆ ಅಪಘಾತ (accident) ದಲ್ಲಿ ದ್ವಿಚಕ್ರ ಸವಾರನೊಬ್ಬ ದಾರುಣ ಅಂತ್ಯ ಕಂಡಿದ್ದಾನೆ. ನಂತೂರು ಪದವು ಬಳಿ ಹೋಗುತ್ತಿದ್ದಾಗ ದ್ವಿಚಕ್ರ ವಾಹನ  ಸವಾರನ ನಿಯಂತ್ರಣ ತಪ್ಪಿ ಸ್ಕೂಟಿ ರಸ್ತೆಗೆ ಉರುಳಿದ್ದು, ಹಿಂದಿನಿಂದ ಬರುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎಂದು  ಹೇಳಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಸಂಚಾರ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದು, ಮೃತ ವ್ಯಕ್ತಿಯ ಹೆಚ್ಚನ ಮಾಹಿತಿ ತಿಳಿಯ ಬೇಕಷ್ಟೇ..

Read More