ಆ.18 ರಂದು ಓಂ ಶ್ರೀ ಗೆಳೆಯರ ಬಳಗ ನಾಯಿಲ ವತಿಯಿಂದ “ಕೆಸರ್ ದ ಕಂಡೊಡು ಗೊಬ್ಬುದ ಕೂಟ”

ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗ ನಾಯಿಲ ಪಾಣೆಮಂಗಳೂರು ವತಿಯಿಂದ “ಕೆಸರ್ ದ ಕಂಡೊಡು ಗೊಬ್ಬುದ ಕೂಟ”ದಿನಾಂಕ 18.08.2024 ರಂದು ಆಯೋಜಿಸಲಾಗಿದೆ.ಪುರುಷರಿಗೆ : ಮುಕ್ತ ವಿಭಾಗದ ವಾಲಿಬಾಲ್ ಮತ್ತು ಹಗ್ಗಜಗ್ಗಾಟಮಹಿಳೆಯರಿಗೆ : ತ್ರೋಬಾಲ್ ಮತ್ತು ಹಗ್ಗಜಗ್ಗಾಟ.ಸ್ಥಳೀಯರಿಗೆ ವಿವಿಧ ಸಾಂಸ್ಕೃತಿಕ ಕ್ರೀಡೆಗಳು ಮತ್ತು ಮನೋರಂಜನೆ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಎಂದು ಅಧ್ಯಕ್ಷರಾದ ಕಿರಣ್ ಅಟ್ಲೂರು ತಿಳಿಸಿದ್ದಾರೆ.

Read More

ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಮಂಗಳೂರು: ದ.ಕ ಜಿಲ್ಲಾ ನಿವೃತ್ತಿ ಸೈನಿಕರ ಸಂಘದ ವತಿಯಿಂದ ಕಾರ್ಗಿಲ್ ವಿಜಯ ದಿವಸದ ರಜತ ಮಹೋತ್ಸವವನ್ನು ನಗರ ಕದ್ರಿ ಯುದ್ದ ಸ್ಮಾರಕದಲ್ಲಿ ಶುಕ್ರವಾರ ಆಚರಿಸಲಾಯಿತು. ದೇಶಕ್ಕಾಗಿ ಮಡಿದ ವೀರಯೋಧರಿಗೆ ಹೂ- ಹಾರ ಅರ್ಪಿಸಿ, ಮೊಂಬತ್ತಿ ದೀಪ ಬೆಳಗಿಸಿ ನಮನ ಸಲ್ಲಿಸಲಾಯಿತು.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಮಾತನಾಡಿ ದೇಶಕ್ಕಾಗಿ ಎದೆಯೊಡ್ಡುವ ಸೈನಿಕರ ಸೇವೆ ಬಲಿದಾನವನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು ಎಂದರು. ಮೇಯರ್ ಸುಧಿರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಸುನೀತಾ, ನಿವೃತ್ತಿ ಬ್ರಿಗೇಡಿಯರ್ ಬಿ.ಎನ್….

Read More

ಬೆಂಗಳೂರಿಗೆ ನಾಯಿ ಮಾಂಸ ಆರೋಪ; ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ ಮಟನ್​ ಮಾಂಸದ ಬಾಕ್ಸ್​ಗಳನ್ನು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತರು ತಡೆ ಹಿಡಿದಿದ್ದು, ಹಿಂದೂ ಸಂಘಟನೆ ಮುಖಂಡ ಪುನೀತ್‌ ಕೆರೆಹಳ್ಳಿ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ…

Read More

ಮಂಗಳೂರು : ವಿದ್ಯಾರ್ಥಿಗಳಿಗೆ ಮದ್ಯಪಾರ್ಟಿಗೆ ಆಫರ್ ನೀಡಿದ್ದ ರೆಸ್ಟೋರೆಂಟ್ ಮೇಲೆ ಎಫ್ಐಆರ್‌ ದಾಖಲು

ಮಂಗಳೂರು : ವಿದ್ಯಾರ್ಥಿಗಳನ್ನು ಮದ್ಯಪಾರ್ಟಿ ಮಾಡಲು ನಗರದ ದೇರೆಬೈಲ್‌ನಲ್ಲಿ ನೂತನವಾಗಿ ಆರಂಭಗೊಂಡಿದ್ದ ಹೋಟೆಲ್ ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ವಿಶೇಷ ಆಫರ್ ನೀಡಿತ್ತು. ಇದರ ಬೆನ್ನಲ್ಲೇ ಅಬಕಾರಿ ಇಲಾಖೆ ಹೊಟೇಲ್ ಮೇಲೆ ಎಫ್ಐಆರ್‌ ದಾಖಲು ಮಾಡಿದೆ. ಲಾಲ್‌ಬಾಗ್ ಇನ್ (ಲಿಕ್ವಿಡ್ ಲಾಂಜ್ ಬಾರ್) ವಿದ್ಯಾರ್ಥಿಗಳು ಹಾಗೂ ಅಪ್ರಾಪ್ತರಿಗೆ ಸ್ಪೂಡೆಂಟ್ಸ್ ನೈಟ್ಸ್ ಹೆಸರಿನಲ್ಲಿ ಮದ್ಯಸೇವಿಸಲು ಆಫರ್ ನೀಡಿತ್ತು. ಸ್ಕೂಲ್ ಐಡಿ ತಂದರೆ ವಿದ್ಯಾರ್ಥಿಗಳಿಗೆ 15 ಪರ್ಸೆಂಟ್ ಆಫರ್ ನೀಡಲಾಗುತ್ತದೆ. ಅಲ್ಲದೆ, ವಿದ್ಯಾರ್ಥಿನಿಯರಿಗೆ ಐಡಿ ತೋರಿಸಿದರೆ ಫ್ರೀ ಶೂಟ‌ರ್…

Read More

ಮಂಗಳೂರು: ಕಾರ್ಗೊ ಶಿಪ್‌ಗೆ ಬೆಂಕಿ- ತೈಲ ಸೋರಿಕೆ ಭೀತಿ..!

ಮಂಗಳೂರು: ಗುಜರಾತಿನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಅತ್ಯಂತ ದಹನಕಾರಿ ತೈಲ ಹಾಗೂ ಘನ ವಸ್ತುವನ್ನು ಗುಜರಾತ್‌ನ ಮುಂದ್ರಾ ಬಂದರಿನಿಂದ ಶ್ರೀಲಂಕಾದ ಕೊಲಂಬೊಗೆ ಒಯ್ಯುತ್ತಿದ್ದ ಬೃಹತ್ ಸರಕು ಹಡಗಿನಲ್ಲಿ (ಕಾರ್ಗೋ ಕಂಟೈನರ್) ಗೋವಾ -ಕಾರವಾರ ನಡುವೆ ಅರಬಿ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಸ್ತುತ, ಹಡಗು ಮಂಗಳೂರಿನ ಎನ್‌ಎಂಪಿಟಿಗೆ ಸಮೀಪವಿರುವ ಸುರತ್ಕಲ್ ಬಳಿ ಸಮುದ್ರದ ಮಧ್ಯದಲ್ಲಿ ಲಂಗರು ಹಾಕಿದೆ. ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹಾಗೂ ಮಲ್ಪೆ ಕರಾವಳಿ ಕಾವಲು ಪಡೆ ಎಸ್ಪಿ ಮಿಥುನ್ ಎಚ್.ಎನ್ ಅವರು ಜೂ.19ರಂದು ಸಂಭವಿಸಿದ…

Read More

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಪೊಲೀಸರು

ಮಂಗಳೂರು: ಮದ್ಯದ ನಶೆಯಲ್ಲಿ ಮೋರಿಗೆ ಬಿದ್ದ ಕುಡುಕನೋರ್ವನನ್ನು ಸಂಚಾರಿ ಪೊಲೀಸರಿಬ್ಬರು ಮೇಲಕ್ಕೆತ್ತಿ ರಕ್ಷಿಸಿದ ಘಟನೆ ಮಂಗಳೂರಿನ ಪಂಪ್‌ವೆಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಆರೇಳು ಅಡಿ ಆಳವಿದ್ದ ಈ ಮೋರಿಯಲ್ಲಿ ಮಳೆಯ ಕಾರಣ ನೀರು ರಭಸವಾಗಿ ಹರಿಯುತ್ತಿತ್ತು. ಕೊಂಚ ಹೆಚ್ಚು ಕಡಿಮೆಯಾದರೂ ಮೋರಿಗೆ ಬಿದ್ದ ವ್ಯಕ್ತಿ ನೀರಿನಲ್ಲಿ ಕೊಚ್ಚಿಹೋಗುವ ಸಾಧ್ಯತೆಯಿತ್ತು. ಇದನ್ನು ಗಮನಿಸಿದ ಮಂಗಳೂರು ನಗರ ಜೆಪ್ಪಿನಮೊಗರು ಸಂಚಾರಿ ಠಾಣೆಯ ಹೆಡ್ ಕಾನ್‌ಸ್ಟೇಬಲ್ ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ವಿಲ್ಸನ್ ಫೆರ್ನಾಂಡಿಸ್ ಅವರು ಸ್ವತಃ ಮೋರಿಗಿಳಿದು ಹರಸಾಹಪಟ್ಟು ಮೇಲಕ್ಕೆತ್ತಿ ವ್ಯಕ್ತಿಯನ್ನು…

Read More

ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ: ಶರಣ್‌ ಪಂಪ್‌ವೆಲ್‌

ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್‌ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡ್ದಿದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರ…

Read More

ಸುರತ್ಕಲ್: ಭಾರಿ ಮಳೆ ಗಾಳಿಗೆ ತಡೆಗೋಡೆ ಕುಸಿದು 17 ವರ್ಷದ ಬಾಲಕ ಮೃತ್ಯು

ಮಂಗಳೂರು: ಗಾಳಿ ಮಳೆಗೆ ಮನೆ ಕುಸಿದು ಬಾಲಕ ಸಾವನ್ನಪ್ಪಿದ ಘಟನೆ ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದಿದೆ.  ಮೃತ ದುರ್ದೈವಿಯನ್ನು ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿ ಶೈಲೇಶ್ (17) ಎಂದು ಗುರುತಿಸಲಾಗಿದೆ. ನಿನ್ನೆ ರಾತ್ರಿ ಮಂಗಳೂರು ಭಾಗದಲ್ಲಿ ಭಾರೀ ಗಾಳಿ ಮಳೆ ಸುರಿಯುತ್ತಿತ್ತು. ಭಾರೀ ಗಾಳಿ-ಮಳೆ ಪರಿಣಾಮ ಜೋಕಟ್ಟೆಯ ಮನೆಯೊಂದರ ಮೇಲೆ ತಡೆಗೋಡೆ ಕುಸಿದಿದೆ.ಗ್ರಹಚಾರದ ಅಥಿತಿಯಾಗಿದ್ದ ಬಾಲಕನ ಮೇಲೆ ಗೋಡೆ ಕುಸಿದು ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ರಕ್ಷಣಾ ಸಿಬ್ಬಂದಿ ಬಂದಿದ್ದು ಬಾಲಕನ ಮೃತದೇಹವನ್ನು…

Read More

ಮಂಗಳೂರು: ಜೈಲಿನಲ್ಲಿ ಖೈದಿಗಳಿಗೆ ಪೊಲೀಸ್‌ ಶಾಕ್‌ ; 150 ಪೊಲೀಸರಿಂದ ಏಕಕಾಲದಲ್ಲಿ ರೇಡ್ –ಗಾಂಜಾ, ಡ್ರಗ್ಸ್ ಪತ್ತೆ

ಮಂಗಳೂರು:ನಗರದ  ಜೈಲು ಮೇಲೆ  ಮಂಗಳೂರು ಪೊಲೀಸ್ ಕಾರ್ಯಾಚರಣೆ ನಡೆಸಿದ್ದು ಈ  ವೇಳೆ ಅಲ್ಲಿ, ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾದ ಆಘಾತಕಾರಿ ಘಟನೆ ನಡೆದಿದೆ. ಬುಧವಾರ ಮುಂಜಾನೆ ನಾಲ್ಕು ಗಂಟೆ ವೇಳೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ಇಪ್ಪತ್ತೈದು ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಪೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳನ್ನು ಪೊಲೀಸರು  ವಶಕ್ಕೆ ಪಡೆದಿದ್ದಾರೆ . ಜತೆಗೆ ಜೈಲು ಖೈದಿಗಳ ಜೊತೆಗಿದ್ದ ಗಾಂಜಾ…

Read More

ಗುರುಪುರ ಸೇತುವೆಯಲ್ಲಿ ಅನಾಥ ಸ್ಥಿತಿಯಲ್ಲಿ ಸ್ಕೂಟರ್, ಚಪ್ಪಲಿ ಪತ್ತೆ, ನದಿಗೆ ಹಾರಿರುವ ಶಂಕೆ

ಮಂಗಳೂರು ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯ ಗುರುಪುರದ ಪಾಲ್ಗುಣಿ ನದಿಯ ಸೇತುವೆಯಲ್ಲಿ ಅನಾಥ ಸ್ಥಿತಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಮತ್ತು ಒಂದು ಜೊತೆ ಚಪ್ಪಲಿ ಪತ್ತೆಯಾಗಿದೆ. ಸ್ಕೂಟರ್ ವಾರೀಸುದಾರರು ಇದ್ದಲ್ಲಿ ತಿಳಿಸುವಂತೆ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಮಧ್ಯೆ ಕಂಕನಾಡಿ ಠಾಣಾ ವ್ಯಾಪ್ತಿಯ ಅಳಪೆ ಗ್ರಾಮದ ಪಡೀಲ್ ನಿವಾಸಿ ಗಣೇಶ್(48)ಎಂಬವರು 22ರ ರಾತ್ರಿ 8 ಗಂಟೆಯಿಂದ KA19 HM 4598 ಸಂಖ್ಯೆಯ ಸ್ಕೂಟರ್ ಜೊತೆ ನಾಪತ್ತೆಯಾದ ಬಗ್ಗೆ ಪತ್ನಿ ಅಶ್ವಿತಾ ಎಂಬವರು ಕಂಕನಾಡಿ ಠಾಣೆಗೆ ದೂರು ನೀಡಿದ್ದಾರೆ….

Read More