ಜುಲೈ.28 ರಂದು ಕುಲಾಲ ಸಂಘ (ರಿ) ಮೂಡಬಿದ್ರೆ ವತಿಯಿಂದ “ಆಟಿಡ್ ಒಂಜಿ ದಿನ”

ಕುಲಾಲ ಸಂಘ (ರಿ) ಮೂಡಬಿದ್ರೆ ವತಿಯಿಂದ ಸ್ವಜಾತಿ ಬಾಂಧವರಿಗಾಗಿ “ಆಟಿಡ್ ಒಂಜಿ ದಿನ ಕಾರ್ಯಕ್ರಮ” ದಿನಾಂಕ 28-೦7-2024,ಆದಿತ್ಯವಾರ ರಂದು ಕುಲಾಲ ಸಂಘದ ನಿವೇಶನದಲ್ಲಿ ನಡೆಯಲಿದೆ. ಸಮಯ ಬೆಳಿಗ್ಗೆ 10.00 ರಿಂದ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ ಸ್ಪರ್ಧೆಗಳ ವಿವರ- ಮಕ್ಕಳ ವಿಭಾಗ : ಲಿಂಬೆ ಚಮಚ ಓಟ ಸಂಗೀತ ಕುರ್ಚಿ ಸ್ಪರ್ಧೆ ಎಲೆಗಳ ಹೆಸರನ್ನು ಗುರುತಿಸಿ ಬರೆಯುವುದು ಚಿತ್ರಕಲೆ ವಿಷಯ : ಆಟಿ ತಿಂಗಳ ಆಚರಣೆಗಳು ಜ್ಞಾಪಕ ಶಕ್ತಿ ಪರೀಕ್ಷೆ ಪುರುಷರ ವಿಭಾಗಹಗ್ಗ- ಜಗ್ಗಾಟ ಮಹಿಳೆಯರ ವಿಭಾಗಹಗ್ಗ…

Read More

ಕರಾವಳಿ ಭಾಗಗಳಲ್ಲಿ BSNL ನೆಟ್ ವರ್ಕ್ ಸಮಸ್ಯೆ..! ತಾಂತ್ರಿಕ ಸಮಸ್ಯೆಯನ್ನು ಸರಿಪಡಿಸುವಂತೆ ಮನವಿ

ಉಡುಪಿ: ಕರಾವಳಿಯ, ಮಲೆನಾಡು ಭಾಗದ ನೆಟ್‌ವರ್ಕ್‌ ಸಮಸ್ಯೆ ಸರಿಪಡಿಸುವ ನಿಟ್ಟಿನಲ್ಲಿ ಕರಾವಳಿಯ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕ್ಯಾ| ಬ್ರಿಜೇಶ್‌ ಚೌಟ ಅವರು ಹೊಸದಿಲ್ಲಿಯಲ್ಲಿ ಮಂಗಳವಾರ ಬಿಎಸ್‌ಎನ್‌ಎಲ್‌ ನಿಗಮದ ಆಡಳಿತ ನಿರ್ದೇಶಕ ಹಾಗೂ ಅಧ್ಯಕ್ಷ ರಾಬರ್ಟ್‌ ರವಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಚಿಕ್ಕಮಗಳೂರಿನಲ್ಲಿ ದೂರವಾಣಿ ಸಂಪರ್ಕದ ಸಮಸ್ಯೆ ಇದೆ. ಈಗ ಇರುವ ಸುಮಾರು 400ಕ್ಕೂ ಹೆಚ್ಚು ಬಿಎಸ್‌ಎನ್‌ಎಲ್‌ ಟವರ್‌ಗಳು ಮೂಲಭೂತ ಸೌಕರ್ಯ ಕೊರತೆಯಿಂದಾಗಿ ಮೊಬೈಲ್‌ ಬಳಕೆದಾರರಿಗೆ ಸಂಪರ್ಕದ ಕೊರತೆ ಕಾಡುತ್ತಿದೆ. ಜಿಲ್ಲೆಯ ಎಲ್ಲ ಬಿಎಸ್‌ಎನ್‌ಎಲ್‌…

Read More

ಬಂಟ್ವಾಳ: ಗರ್ಭವತಿ ಮಾಡಿದ ಆರೋಪ; ಪ್ರಕರಣ ದಾಖಲು

ಬಂಟ್ವಾಳ: ವಿವಾಹಿತ ವ್ಯಕ್ತಿಯೋರ್ವ ಸಂಬಂಧಿ ಯುವತಿಯನ್ನು ಅಕ್ರಮವಾಗಿ, ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಗರ್ಭವತಿ ಮಾಡಿದ ಬಗ್ಗೆ ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಮ್ಟಾಡಿ ನಿವಾಸಿ ಗುರುಪ್ರಸಾದ್ ಎಂಬಾತ ಸಂಬಂಧಿ ಯುವತಿಗೆ ಕಳೆದ ಒಂದು ವರ್ಷಗಳಿಂದ ಎರಡು ಬಾರಿ ಇಚ್ಚೆಗೆ ವಿರುದ್ದವಾಗಿ ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಸಂತ್ರಸ್ತ ಯುವತಿ ಠಾಣೆಗೆ ದೂರು‌ ನೀಡಿದ್ದಾರೆ. ಆರೋಪಿಗೆ ಈಗಾಗಲೇ ‌ಮದುವೆಯಾಗಿದ್ದು, ಸಂತ್ರಸ್ತ ಯುವತಿಗೆ ಅನ್ಯಾಯ ಎಸಗಿರುವ ಬಗ್ಗೆ ದೂರಿನಲ್ಲಿ ತಿಳಿಸಿದ್ದಲ್ಲದೆ ನ್ಯಾಯ ಒದಗಿಸಿ ಕೊಡುವಂತೆ ಮನವಿ ಮಾಡಿದ್ದಾರೆ. ಆರೋಪಿ…

Read More

ಕೇರಳದಲ್ಲಿ ನಿಫಾ ಕೇಸ್ ಪತ್ತೆ: ದ.ಕ ಜಿಲ್ಲೆಯಲ್ಲಿ ಕಟ್ಟೆಚ್ಚರಕ್ಕೆ ಕ್ರಮ

ಮಂಗಳೂರು: ನೆರೆ ರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ನಿರ್ಧರ ಮಾಡಿದೆ.  ನಿಫಾ ವೈರಸ್‌ ಸೋಂಕಿಗೆ ತುತ್ತಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಸಾವನ್ನಪ್ಪಿದ್ದ. ಹೀಗಾಗಿ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದೆ. ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಗಳಿಗಾಗಿ ಕೇರಳದಿಂದ ಅನೇಕ ಮಂದಿ ಆಗಮಿಸುತ್ತಾರೆ. ಹೀಗೆ ಆಗಮಿಸಿದವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಆರೋಗ್ಯ…

Read More

ಮಂಗಳೂರು: ಮನಪಾ ಕಚೇರಿಗೆ ಮುತ್ತಿಗೆ ಹಾಕಲು ಯತ್ನ; ಸಿಪಿಎಂ ಮುಖಂಡರು, ಕಾರ್ಯಕರ್ತರ ಬಂಧನ

ಮಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಮನಪಾ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ನಡೆಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.

Read More

ಮಂಗಳೂರು: ತುರ್ತು ಸಂದರ್ಭಗಳಿಗಾಗಿ 2 ಹೊಸ ಸಹಾಯವಾಣಿ ಸಂಖ್ಯೆಗಳನ್ನ ಬಿಡುಗಡೆ ಮಾಡಿದ ಮೆಸ್ಕಾಂ

ಮಂಗಳೂರು: ಸಾರ್ವಜನಿಕರು ತಮ್ಮ ಗಂಭೀರ ಸಮಸ್ಯೆಗಳನ್ನು ತಿಳಿಸಲು ಹಾಗೂ ತುರ್ತು ಪರಿಸ್ಥಿತಿಗಳನ್ನು ತಿಳಿಸಲು ಸಹಾಯವಾಗುವ ನಿಟ್ಟಿನಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಂ) ಎರಡು ಹೊಸ ದೂರವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ಸಾರ್ವಜನಿಕರು ತುರ್ತು ಸಂದರ್ಭಗಳಲ್ಲಿ ಮೆಸ್ಕಾಂನ 8277883388 ಅಥವಾ 0824-2950953 ಸಂಖ್ಯೆಗೆ ಕರೆ ಮಾಡಬುದಾಗಿದೆ.ಈ ಸಂಖ್ಯೆಗಳನ್ನು ಗಂಭೀರ ಮತ್ತು ತುರ್ತು ಸಂದರ್ಭಗಳಲ್ಲಿ ಮಾತ್ರ ಬಳಸಬೇಕು. ಹಾಗೂ ಇತರ ಸಾಮಾನ್ಯ ಸೇವೆಗಳಿಗೆ, ಉಚಿತ ಸಹಾಯವಾಣಿ 1912 ಮತ್ತು ಸ್ಥಳೀಯ ಕಚೇರಿ ಸ್ಥಿರ ದೂರವಾಣಿ ಸಂಖ್ಯೆಗಳನ್ನು ಬಳಸಬೇಕು ಎಂದು ಮೆಸ್ಕಾಂನ ವ್ಯವಸ್ಥಾಪಕ…

Read More

ಮಂಗಳೂರು: ಸ್ಪ್ರಿಂಗ್ ತಯಾರಿಕಾ ಕಂಪನಿಯಲ್ಲಿ ಅವಘಡ – ಕಾರ್ಮಿಕ ಸಾವು

ಮಂಗಳೂರು: ನಗರದ ಮರೋಳಿಯಲ್ಲಿ ಕಾರ್ಯಾಚರಿಸುತ್ತಿರುವ ಸ್ಪ್ರಿಂಗ್ ಹಾಗೂ ಇತರ ವಸ್ತುಗಳ ತಯಾರಿಕಾ ಕಂಪನಿಯಲ್ಲಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಕಾರ್ಮಿಕ ಮೃತಪಟ್ಟಿದ್ದಾರೆ‌. ಕಂಕನಾಡಿ ಗರೋಡಿ ಬಳಿಯ ನಿವಾಸಿ ಪ್ರದೀಪ್ ಗರೋಡಿ(52) ಮೃತಪಟ್ಟವರು‌. ಜು.18ರಂದು ಪ್ರದೀಪ್ ಗರೋಡಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು‌. ಈ ವೇಳೆ ಸ್ಪ್ರಿಂಗ್‌ನಲ್ಲಿ ಪ್ಲೇಟ್ ಮುರಿದು ಅವರು ಗಂಭೀರವಾಗಿ ಗಾಯಗೊಂಡಿದ್ದರು‌. ಅವರನ್ನು ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ‌. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ. ಈ ಬಗ್ಗೆ ಅವರ ಪತ್ನಿ ನಳಿನಿಯವರು…

Read More

ಮಂಗಳೂರು: ವಿಶ್ವ ಮೆದುಳಿನ ದಿನ ಕಾರ್ಯಕ್ರಮ

ಮಂಗಳೂರು : ಕರ್ನಾಟಕ ಮೆದುಳಿನ ಆರೋಗ್ಯ ಉಪಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಷ್ಠ ರೋಗ ನಿರ್ಮೂಲನಾಧಿಕಾರಿಗಳ ಕಚೇರಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮೆದುಳು ದಿನ ಕಾರ್ಯಕ್ರಮವನ್ನು ಜುಲೈ 22ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ನಿವಾಸಿ ವೈದ್ಯಧಿಕಾರಿಗಳಾದ ಡಾ. ಸುಧಾಕರ ಟಿ ಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿಶ್ವ ಮೆದುಳು ದಿನ ಆಚರಿಸುವ ಉದ್ದೇಶವನ್ನು ಕುರಿತು ಮಾತನಾಡಿದರು….

Read More

ಉಪ್ಪಿನಂಗಡಿ: ಯುವತಿ ಸ್ನಾನ ಮಾಡುವ ವೇಳೆ ವಿಡಿಯೋ ಮಾಡಿದ್ದ ರಹಿಮಾನ್‌ ಅರೆಸ್ಟ್‌..!

ಉಪ್ಪಿನಂಗಡಿ: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಸಂಭವಿಸಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು, ವಿಡಿಯೋ ಮಾಡುತ್ತಿದ್ದ ರಹಿಮಾನ್ ನನ್ನು ಸ್ಥಳೀಯರು ಹಿಡಿದು ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದ ಅರುಣ್ ಕುಮಾರ್ ಪುತ್ತಿಲ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.ಈಗಾಗಲೇ ಉಪ್ಪಿನಂಗಡಿಯಲ್ಲಿ ಹಿಂದೂಗಳನ್ನು ಕೇಂದ್ರೀಕರಿಸಿ ಹಲವು ಘಟನೆಗಳು ನಡೆದಿದ್ದು, 2 ವರ್ಷದ ಹಿಂದೆ ಮೀನು ಅಂಗಡಿಗೆ ಬೆಂಕಿ…

Read More

ಜುಲೈ 28, ಕುಲಾಲ ಕುಟುಂಬಗಳ ಸಮ್ಮಿಲನ ಆಟಿ ತಿಂಗಳ ಆಹಾರ ಹಬ್ಬ

ಬಂಟ್ವಾಳ : ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಇದರ ಆಶ್ರಯದಲ್ಲಿರುವ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಯೋಗದೊಂದಿಗೆ ಜುಲೈ 28ನೇ ಆದಿತ್ಯವಾರ ಮಧ್ಯಾಹ್ನ 3ಕ್ಕೆ ಪೊಸಳ್ಳಿ ಕುಲಾಲ ಭವನದಲ್ಲಿ ಕುಲಾಲ ಕುಟುಂಬಗಳ ಸಮ್ಮಿಲನ, ಆಟಿ ತಿಂಗಳ ಆಹಾರ ಮತ್ತು ವಿವಿಧ ವಿನೋಧಾವಳಿಗಳು ನಡೆಯಲಿರುವುದು.ಸಮಾರಂಭದ ಸಭಾಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ಕುಲಾಲ ಸಂಘದ ಅಧ್ಯಕ್ಷ ಕೃಷ್ಣಪ್ಪ ಬಿ. ವಹಿಸಲಿದ್ದಾರೆ. ಮುಖ್ಯಾತಿಥಿಗಳಾಗಿ ಪ್ರಧಾನ ಕಾರ್ಯದರ್ಶಿ ರಮೇಶ್ ಬಿ., ಮತ್ತು ಕೋಶಾಧಿಕಾರಿ ಸೋಮನಾಥ ಸಾಲ್ಯಾನ್ ಹಾಗೂ ನಮ್ಮ ತುಳುನಾಡು…

Read More