ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ!

ಉಪ್ಪಿನಂಗಡಿ: ಐರಾವತ ಬಸ್ ಒಂದಕ್ಕೆ  ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅವಘಡವನ್ನು ತಪ್ಪಿಸಿದ್ದಾರೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು ಗಮನಿಸಿದ ಚಾಲಕ ಹಳೆಗೇಟು ಬಳಿ ಬಸ್ಸನ್ನು ನಿಲ್ಲಿಸಿದ್ದರು. ಆಗ ಪ್ರಯಾಣಿಕರೆಲ್ಲರೂ ಬಸ್ಸಿನಿಂದ ಇಳಿದಿದ್ದಾರೆ. ಅಲ್ಲಿದ್ದ ಇಸಾಕ್, ಇನ್ಸಾಲ್, ಜಾಯಿ, ಝಕಾರಿಯಾ, ಸಿದ್ದೀಕ್ ಸೇರಿದಂತೆ ಅಟೋ ಚಾಲಕರು ನೀರನ್ನು ಬಸ್ಸಿಗೆ ಎರಚಿ ಬೆಂಕಿಯನ್ನು…

Read More

ಮಂಗಳೂರು: ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ಮತ್ತು ದಾಸ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ವನಮಹೋತ್ಸವ ಕಾರ್ಯಕ್ರಮ

ಮಂಗಳೂರು: ಸಂಜೀವಿನಿ ಚಾರಿಟೇಬಲ್ ಟ್ರಸ್ಟಿನ ವತಿಯಿಂದ ದಾಸ್ ಚಾರಿಟೇಬಲ್ ಟ್ರಸ್ಟ್ ಇದರ ಸಹಯೋಗದಲ್ಲಿ ದಿನಾಂಕ 17-07-2024 ಬುಧವಾರ ದಂದು ವನಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಜೀವಿನಿ ಟ್ರಸ್ಟಿನ ಅಧ್ಯಕ್ಷರುಗಳಾದ ಶ್ರೀಯುತ ಪ್ರಸಾದ್ ಮತ್ತು ದಾಸ್ ಚಾರಿಟೇಬಲ್ ಟ್ರಸ್ಟಿನ ಶ್ರೀಯುತ ಲಯನ್ ಅನಿಲ್ ದಾಸ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಈಗಾಗಲೇ ಸುಮಾರು ಮೂರು ಲಕ್ಷಕ್ಕೂ ಅಧಿಕ ಗಿಡಗಳನ್ನು ನೆಡುವುದರ ಮೂಲಕ ಹಸಿರು ಕ್ರಾಂತಿ ಮಾಡುತ್ತಿರುವ ಮಂಗಳೂರಿನ ವನ ಚಾರಿಟೇಬಲ್ ಟ್ರಸ್ಟಿನ ಶ್ರೀಯುತ ಜೀತ್ ರೋಚ್ ರವರನ್ನು ಸನ್ಮಾನಿಸಲಾಯಿತು. ವನಮಹೋತ್ಸವ…

Read More

ದ.ಕ ಜಿಲ್ಲೆಯಲ್ಲಿ ನಾಳೆ (ಜು.18) ರಂದು ಶಾಲೆಗಳಿಗೆ ರಜೆ- ಅಧಿಕೃತ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 18-07- 2024ರಂದು ರಜೆಯನ್ನು ಘೋಷಿಸಲಾಗಿದೆ. ಮಂಗಳೂರು, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ ತಾಲೂಕಿನಲ್ಲಿ ರಜೆ ಇಲ್ಲ. ಕೇವಲ 5 ತಾಲೂಕಿಗೆ ರಜೆ ಘೋಷಣೆ

Read More

ದ.ಕ ಶಾಲಾ- ಕಾಲೇಜುಗಳಿಗೆ ಜು.18 ರಂದು ರಜೆ ಘೋಷಿಸಿಲ್ಲ, ನಕಲಿ ಆದೇಶ ಪ್ರತಿ ವೈರಲ್ – ಜಿಲ್ಲಾಧಿಕಾರಿ ಅಧಿಕೃತ ಪ್ರಕಟಣೆ

ದ.ಕ ಜಿಲ್ಲೆಯಲ್ಲಿ ಶಾಲೆಗಳಿಗೆ ಕಾಲೇಜುಗಳಿಗೆ ರಜೆ ಎಂದು ಸಾರುವ   ಜಿಲ್ಲಾಧಿಕಾರಿ ಆದೇಶದ ನಕಲಿ ಪ್ರತಿ ಹರಿದಾಡಿದ ಪರಿಣಾಮ ದ ಕ ಜಿಲ್ಲಾಧಿಕಾರಿ ಇದಕ್ಕೆ ಸ್ಪಷ್ಟನೆ ನೀಡಿದ್ದು ನಾಳೆ ಅಂದರೆ ಜು.18 ರಂದು ಶಾಲೆ, ಕಾಲೇಜು ಎಂದಿನಂತೆ ಪ್ರಾರಂಭವಾಗಲಿದೆ ಎಂದು ಸ್ಫಷ್ಟನೆ ನೀಡಿದ್ದಾರೆ. ಎಂದಿನಂತೆ ಶಾಲಾ, ಕಾಲೇಜುಗಳಲ್ಲಿ ತರಗತಿ ನಡೆಯಲಿವೆ. ದ.ಕ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಇದ್ದು  ಮೀನುಗಾರರಿಗೆ ಮಾತ್ರ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

Read More

 ಮಂಗಳೂರು: ಹಿರಿಯ ರಂಗನಿರ್ದೇಶಕ ‘ಗುಡ್ಡದ ಭೂತ’ದ ಸೃಷ್ಟಿಕರ್ತ ಸದಾನಂದ ಸುವರ್ಣ ನಿಧನ

ಮಂಗಳೂರು: ಹಿರಿಯ ರಂಗನಿರ್ದೇಶಕ ಹಾಗೂ ರಾಷ್ಟ್ರಪ್ರಶಸ್ತಿ ಸಿನಿಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ (93) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಮಧ್ಯಾಹ್ನ 1ರಿಂದ 3ರವರೆಗೆ ಪುರಭವನದಲ್ಲಿ ವ್ಯವಸ್ಥೆ ಮಾಡಲಾಗುವುದು. ಬಳಿಕ ಅವರ ಬಯಕೆಯಂತೆ ದೇಹದಾನವನ್ನು ಮಾಡಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಕನ್ನಡದಲ್ಲಿ ಅತ್ಯಂತ ಯಶಸ್ವಿ ರಂಗಭೂಮಿ ನಿರ್ದೇಶಕರಾಗಿ ನೂರಾರು ನಾಟಕಗಳನ್ನು ನಿರ್ದೇಶಿಸಿದ ಇವರು ಕೋರ್ಟ್‌ಮಾರ್ಷಲ್, ಉರುಳು, ಮಳೆನಿಲ್ಲುವವರೆಗೆ, ಗುಡ್ಡದ ಭೂತ, ಸುಳಿ ಮುಂತಾದವು ಪ್ರಯೋಗಾತ್ಮಕ, ಸದಭಿರುಚಿಯ…

Read More

ಉಡುಪಿ: ಮನೆಯಲ್ಲಿ ಬೆಂಕಿ ಅವಘಡ, ಬಾರ್ ಮಾಲಿಕ ಮೃತ್ಯು – ಪತ್ನಿ ಗಂಭೀರ

ಉಡುಪಿ: ನಗರದ ಬಾರ್‌ ಮಾಲೀಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ. ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ…

Read More

ದಕ್ಷಿಣ ಕನ್ನಡದಲ್ಲಿ ಇಂದು(ಜು.15) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಆದ್ದರಿಂದ‌ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢಶಾಲೆ, ಪಿಯು ಕಾಲೇಜಿಗಳಿಗೆ ಇಂದು ರಜೆ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಶಾಲಾ – ಕಾಲೇಜುಗಳಿಗೆ ರಜೆ…

Read More

ಅದ್ದೂರಿಯಾಗಿ ನಡೆದ ಕೊಲ್ಯ ಕುಲಾಲ ಸಮುದಾಯ ಭವನದ 59ನೇ ವಾರ್ಷಿಕೋತ್ಸವ

ಮಂಗಳೂರು: ಕೊಲ್ಯ ಕುಲಾಲ ಸಮುದಾಯ ಭವನ ಇದರ 59ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ವಿವಿಧ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮಾರೋಪಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಗಳೂರು ಸಂಘದ ಅಧ್ಯಕ್ಷರಾದ ಶ್ರೀ ವಿಟ್ಟಲ್ ಕಣ್ಣೀರ್ ತೋಟ ದೀಪ ಬೆಳಗಿಸಿ ಉದ್ಘಾಟಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ್ ಕುತ್ತಾರ್ ಪ್ರಾಸ್ತವಿಕದೊಂದಿಗೆ ಸ್ವಾಗತಿಸಿದರು.ಮುಖ್ಯ ಅತಿಥಿಗಳಾಗಿ ಮುಂಬೈ ಜ್ಯೋತಿ ಕೋ ಆಪರೇಟಿವ್ ಅಧ್ಯಕ್ಷರಾದ ಗಿರೀಶ್ ಸಾಲಿಯನ್ ಮುಂಬೈ ಸಂಘದ ಅಧ್ಯಕ್ಷರಾದ ಶ್ರೀ ರಘು ಮೂಲ್ಯ, ಮುಡಿಪು ಸಂಘದ ಅಧ್ಯಕ್ಷರಾದ ಪುಂಡರಿಕ್ಷ ಜೀವನ್ ಕುತ್ತಾರ್, ಜಯೇಶ್ ಗೋವಿಂದ,…

Read More

ಮಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ‘ಫಿಶ್ ಮಿಲ್’ : ಲಕ್ಷಾಂತರ ವಸ್ತುಗಳು ಬೆಂಕಿಗಾಹುತಿ

ಸುರತ್ಕಲ್: ಇಲ್ಲಿನ ಕೈಗಾರಿಕಾ ವಲಯ(ಎಂಎಸ್‌ಇಝಡ್)ದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಅಥೆಂಟಿಕ್ ಓಷನ್ ಟ್ರಶರ್‌ನಲ್ಲಿ ರವಿವಾರ ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಕಂಪೆನಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ನೌಕರರು ಯಾರು ಇರಲಿಲ್ಲ. ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ. ಅಥೆಂಟಿಕ್ ಓಷನ್ ಟ್ರೆಶರ್ ಕಂಪೆನಿ ಮೀನನ್ನು ಸ್ವಚ್ಚಗೊಳಿಸಿ ಮಾಂಸದ ರೂಪಕ್ಕೆ ಪರಿವರ್ತಿಸಿ 10 ಕೆ.ಜಿ. ಯ ಪ್ಯಾಕೆಟ್‌ಗಳನ್ನಾಗಿ ಮಾಡಿ ವಿದೇಶಗಳಿಗೆ ರಫ್ತು ಮಾಡುವ ಕಂಪೆನಿ. ಈ ಸಂಸ್ಥೆಯ ಕೋಲ್ಡ್ ಸ್ಟೋರ್ ಸೆಕ್ಷನ್ ಹಾಗೂ ಕಟ್ಟಿಂಗ್ ಸೆಕ್ಷನ್‌ಗಳಲ್ಲಿ ದುರಸ್ತಿ…

Read More

ಪುತ್ತೂರು: KSRTC ಬಸ್ ನಿಲ್ದಾಣದಲ್ಲಿ ಶಿವಲಿಂಗ ಪತ್ತೆ..!

ಪುತ್ತೂರು: ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪ್ರಯಾಣಿಕರು ಕುಳಿತು ಕೊಳ್ಳುವ ಸ್ಥಳದಲ್ಲಿ ಶಿವಲಿಂಗವೊಂದು ಪತ್ತೆಯಾಗಿದೆ. ಹಿಂದೂ ಧಾರ್ಮಿಕತೆ ಸಂಬಂಧಿಸಿದ ಶಿವಲಿಂಗ ಕಪ್ಪು ಮತ್ತು ಚಿನ್ನದ ಬಣ್ಣ ಹೋಲುವ ಲೇಪನವನ್ನು ಆವರಿಸಿದೆ. ಮಾಹಿತಿ ತಿಳಿದು ಪುತ್ತೂರು ವಿಶ್ವಹಿಂದೂ ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಹಿತ ಹಲವಾರು ಹಿಂದು ಸಂಘಟಕರು ಸ್ಥಳಕ್ಕೆ ಆಗಮಿಸಿದ್ದಾರೆ. ವಿಷಯ ತಿಳಿದು ಪೊಲೀಸರು ಬಂದು ಲಿಂಗವನ್ನು ಠಾಣೆಗೆ ಕೊಂಡೊಯ್ದಿದ್ದಾರೆ.

Read More