ಮಂಗಳೂರು: ಮಹಜರು ವೇಳೆ ‘ಚಡ್ಡಿಗ್ಯಾಂಗ್’ ಆರೋಪಿಗಳು ಪರಾರಿಗೆ ಯತ್ನ – ಇಬ್ಬರಿಗೆ ಗುಂಡೇಟು

ಮಂಗಳೂರು: ಸ್ಥಳ ಮಹಜರು ನಡೆಸಲು ಚಡ್ಡಿಗ್ಯಾಂಗ್‌ನ ಆರೋಪಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನಿಸಿದ ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿರುವ ಘಟನೆ ನಗರದ ಮುಲ್ಕಿ ಸಮೀಪದ ಪಡು ಪಣಂಬೂರು ಬಳಿ ನಡೆದಿದೆ. ಮಂಗಳವಾರ ನಸುಕಿನ ವೇಳೆ ಚಡ್ಡಿಗ್ಯಾಂಗ್‌ನ ನಾಲ್ವರಿದ್ದ ತಂಡ ಮಂಗಳೂರಿನ ಕೋಟೆಕಣಿಯ ಮನೆಯೊಂದಕ್ಕೆ ನುಗ್ಗಿ ದಂಪತಿಯನ್ನು ಬೆದರಿಸಿ 14ಲಕ್ಷ ಮೌಲ್ಯದ ಸೊತ್ತು ದರೋಡೆ ಮಾಡಿ ಪರಾರಿಯಾಗಿತ್ತು. ಬಳಿಕ ಕಾರನ್ನು ಮುಲ್ಕಿ ಬಳಿ ತೊರೆದು, ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಮತ್ತೆ ಮಂಗಳೂರಿಗೆ ಬಂದು ಬೆಂಗಳೂರಿಗೆ ಪರಾರಿಯಾಗಲೆತ್ನಿಸಿತ್ತು. ಅಷ್ಟರಲ್ಲಿ ಅಲರ್ಟ್ ಆದ…

Read More

ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ : ಕೃತ್ಯ ನಡೆದು ಐದೇ ಗಂಟೆಗಳಲ್ಲಿ ಚಡ್ಡಿ ಗ್ಯಾಂಗ್ ಅರೆಸ್ಟ್…!!

ಮಂಗಳೂರು : ನಗರದ ಮನೆಯೊಂದರಲ್ಲಿ ಚಡ್ಡಿ ಗ್ಯಾಂಗ್ ಕಳ್ಳತನ ನಡೆಸಿ ಪರಾರಿಯಾಗಿತ್ತು.ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗಿನ ಜಾವ ನಗರ ಪೊಲೀಸ್ ಕಮಿಷನರೇಟ್ ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಗ್ಗಿನ ಜಾವ ಸಮಯ ಸುಮಾರು 4-೦೦ ಗಂಟೆಗೆ ಬರ್ಮುಡಾ ಚಡ್ಡಿ ಮತ್ತು ಬನಿಯನ್ ಧರಿಸಿದ ಸುಮಾರು 30 ರಿಂದ 40 ವರ್ಷ ಪ್ರಾಯದ 4 ಜನ ಯುವಕರು (ಚೆಡ್ಡಿ ಗ್ಯಾಂಗ್) ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ಶ್ರೀ ವಿಕ್ಟರ್…

Read More

ಮಂಗಳೂರು: ಕದ್ರಿ ದೇವಸ್ಥಾನದಲ್ಲಿ ಯುವಕನ ಹುಚ್ಚಾಟ..! ದೈವದ ಕಡ್ತಲೆ ಹಿಡಿದು ರಂಪಾಟ

ಮಂಗಳೂರು: ನಗರದ ಇತಿಹಾಸ ಪ್ರಸಿದ್ಧ ಕದ್ರಿ ಶ್ರೀಮಂಜುನಾಥ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಯುವಕನೋರ್ವನು ದಾಂಧಲೆ ನಡೆಸಿದ್ದಲ್ಲದೆ, ಅಣ್ಣಪ್ಪ ದೈವದ ಕಡ್ತಲೆ ಹಿಡಿದು ಹುಚ್ಚಾಟ ನಡೆಸಿದ್ದಾನೆ. ಮೊದಲಿಗೆ ಈತ ಬೈಕ್ ಚಲಾಯಿಸಿಕೊಂಡು ನೇರವಾಗಿ ಕದ್ರಿ ದೇವಸ್ಥಾನದ ಪ್ರಾಂಗಣ ಪ್ರವೇಶಿಸಿದ್ದಾನೆ. ಬಳಿಕ ದೇವಸ್ಥಾನದೊಳಗೆ ಪ್ರವೇಶಿಸಿ ರಂಪಾಟ ನಡೆಸಿದ್ದಾನೆ. ಬಳಿಕ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂಭಾಗಕ್ಕೆ ತೆರಳಿ ಕಾಲಿನಿಂದ ಬಾಗಿಲು ಒದ್ದು, ಅಣ್ಣಪ್ಪ ದೈವದ ಕಡ್ತಲೆಯನ್ನು ಕೈಗೆತ್ತಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಈ ಬಗ್ಗೆ ಪ್ರಶ್ನಿಸಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ ಎಂದು…

Read More

ಲಯನ್ಸ್ ಕ್ಲಬ್ ಮಂಗಳೂರು ಇದರ ನೂತನ ಅಧ್ಯಕ್ಷರಾಗಿ ಲಯನ್ ಜಯರಾಜ್ ಪ್ರಕಾಶ್ ಆಯ್ಕೆ

ಮಂಗಳೂರು: ಲಯನ್ಸ್ ಕ್ಲಬ್ ಮಂಗಳೂರು ಇದರ ನೂತನ ಅಧ್ಯಕ್ಷ ರಾಗಿ ಕುಲಾಲ ಸಮಾಜ ದ ಮಾದರಿ ನಾಯಕ ಲಯನ್ ಜಯರಾಜ್ ಪ್ರಕಾಶ್ ರವರು ಆಯ್ಕೆಗೊಂಡು ನಿನ್ನೆ ಅಧಿಕಾರ ಸ್ವೀಕರಿಸಿದರು. ಅವರಿಗೆ ಸಮಸ್ತ ಕುಲಾಲ ಸಮಾಜದ ಪರವಾಗಿ ಹಾರ್ಧಿಕ ಶುಭಾಶಯಗಳು ಸಲ್ಲಿಸಿದ್ದಾರೆ. ಈ ಸಮಾರಂಭದಲ್ಲಿ PDG ಸಂಜೀತ್ ಶೆಟ್ಟಿ ಪದಗ್ರಹಣ ನಡೆಸಿಕೊಟ್ಟರು. ಅಧ್ಯಕ್ಷರಾಗಿ ಲಯನ್ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ಲಯನ್ ರವಿ ಶಂಕರ್ ರೈ, ಕೋಶಧಿಕಾರಿ ನಾರಾಯಣ ಕೋಟಿಯನ್ ಹಾಗೂ ಇತರ ಪದಾಧಿಕಾರಿಗಳು ಮತ್ತು ಲಯನ್ಸ್ ಗಣ್ಯರು ಉಪಸ್ಥಿತರಿದ್ದರು….

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 09ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ

ದ‌.ಕ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರಿದಿದ್ದು, ಭಾರತೀಯ ಹವಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ 09/07/2೦24 ರಂದು ಮುನ್ನೆಚ್ಚರಿಕೆ ಕ್ರಮವಾಗಿ ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ. ಪದವಿ ಪೂರ್ವ ಕಾಲೇಜು, (12 ನೇ ತರಗತಿವರೆಗೆ) ಜುಲೈ 9ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.

Read More

ಮಂಗಳೂರು: ಅಕ್ರಮ ಕಸಾಯಿಖಾನೆ ಪತ್ತೆ- ಆರೋಪಿಗಳು ಪರಾರಿ

ಮಂಗಳೂರು: ನಗರದ ಸುರತ್ಕಲ್ ಸಮೀಪ ಭಾರೀ ಅಕ್ರಮ ಕಸಾಯಿಖಾನೆಯೊಂದು ಪತ್ತೆಯಾಗಿದ್ದು, ಪೊಲೀಸರನ್ನೇ ಬೆಚ್ಚಿ ಬೀಳಿಸಿದ ಘಟನೆ ಕೃಷ್ಣಾಪುರ 8ನೇ ಬ್ಲಾಕ್ ಬಳಿ ಸಂಭವಿಸಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ ಸುರತ್ಕಲ್ ಪ್ರಖಂಡ ನೀಡಿದ ಮಾಹಿತಿಯಂತೆ ಕೃಷ್ಣಾಪುರ ಪರಿಸರದ ಒಂದು ಮನೆಯಲ್ಲಿ ದಾಳಿ ನಡೆಸಿದಾಗ 16ಗೋವುಗಳ ಸಹಿತ ಕೆ.ಜಿ.ಗಟ್ಟಲೆ ದನದ ಮಾಂಸ ಪತ್ತೆಯಾಗಿದೆ. ಸುಸಜ್ಜಿತ ಕಾಂಕ್ರೀಟ್ ಮನೆಯೊಂದರಲ್ಲಿ ಅಕ್ರಮವಾಗಿ ದನವನ್ನು ಕಡಿದು ಮಾಂಸವನ್ನಾಗಿ ಪರಿವರ್ತಿಸಿ ಸ್ಥಳೀಯ ಹೋಟೆಲ್ ಸಹಿತ ವಿವಿಧೆಡೆ ಸರಬರಾಜು ಮಾಡಲಾಗುತ್ತಿತ್ತು. ಪೊಲೀಸರ ದಾಳಿಯ ವೇಳೆ 16ಕ್ಕೂ…

Read More

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್‌ ಘೋಷಣೆ..!

ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ. ಬದಲಾದ ಹವಾಮಾನ ವೈಪರಿತ್ಯದಿಂದ ರಾಜ್ಯ ಕರಾವಳಿಯಲ್ಲಿ ಎಡಬಿಡದೆ ನಿರಂತರ ಮಳೆ ಸುರಿಯುತ್ತಿ್ದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್‌ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ…

Read More

ಕಡಬ: ಆತ್ಮಹತ್ಯೆಗೆ ಯತ್ನಿಸಿ ಕುಮಾರಧಾರ ನದಿಯ ಮಧ್ಯೆ ಸಿಲುಕಿದ ಯುವಕನ ರಕ್ಷಣೆ

ಕಡಬ: ಇಲ್ಲಿನ ಪುಳಿಕುಕ್ಕು ಎಂಬಲ್ಲಿ ಯುವಕನೊಬ್ಬ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಸಿಲುಕಿಕೊಂಡು ಸಹಾಯಕ್ಕಾಗಿ ಬೊಬ್ಬಿಡುತ್ತಿರುವ ದೃಶ್ಯ ಸೋಮವಾರ ಬೆಳಗ್ಗೆ ಕಂಡುಬಂದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ಸಿಬಂದಿ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ ನದಿಯ ನಡುವೆ ಇರುವ ಪೊದೆಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅದಕ್ಕೆ ಪೂರಕವಾಗಿ ಪುಳಿಕುಕ್ಕು ಸೇತುವೆ ಬಳಿಯ ಬಸ್ ತಂಗುದಾಣದಲ್ಲಿ ಆತನದ್ದು ಎನ್ನಲಾದ ಬ್ಯಾಗ್ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಯುವಕನನ್ನು ರಕ್ಷಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಡಬ ಪೊಲೀಸರು…

Read More

BIG NEWS: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾಗೆ ನಾಲ್ಕು ಮಕ್ಕಳು ಬಲಿ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಲರ್ಟ್ ಘೋಷಣೆ

ಮಂಗಳೂರು: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ನಾಲ್ವರು ಮಕ್ಕಳು ಸಾವನ್ನಪ್ಪಿರುವ ಪ್ರಕರಣದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಮೀಬಾ ಸೋಂಕು ಲಕ್ಷಣ ಕಂಡುಬಂದರೆ ಕೂಡಲೇ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ನೇಗ್ಲೇರಿಯಾ ಪೌಲೇರಿ ಹೆಸರಿನ ಅಪರೂಪ, ಅಪಾಯಕಾರಿ ಸೂಕ್ಷ್ಮಾಣು ಜೀವಿ ಮೆದುಳು ತಿನ್ನುವ ಅಮೀಬಾ ಆಗಿದೆ. ಮಳೆ ನೀರು, ಕಲುಷಿತ ನೀರಿನ ಹೊಂಡಗಳಲ್ಲಿ ಈಜುವಾಗ ಎಚ್ಚರವಹಿಸುವ ಅಗತ್ಯವಿದೆ. ಕಲುಷಿತ ನೀರಿನಲ್ಲಿ ಈಜುವಾಗ ಈ ಸೋಂಕು ಹರಡುವ…

Read More

ಮಂಗಳೂರು: ಇಂದು (ಜು.8) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ತಾಲೂಕಿನಾದ್ಯಂತ ಮಳೆಯ ಅರ್ಭಟ ಮುಂದುವರಿದಿದ್ದು, ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು (ಜು.08) ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ, ದ್ವಿತೀಯ ಪಿಯುಸಿವರೆಗಿನ ಸರ್ಕಾರಿ , ಅನುದಾನಿತ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಮಂಗಳೂರು ತಹಶಿಲ್ದಾರ್ ಆದೇಶ ಹೊರಡಿಸಿದ್ದಾರೆ.ಇನ್ನೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ.ನದಿ ಹಾಗೂ…

Read More