ಮಂಗಳೂರು: ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ನೇಮಕ

ಮಂಗಳೂರು : ಮನಪಾ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ತಕ್ಷಣ ಜಾರಿಗೆ ಬರುವಂತೆ ಆದೇಶಿಸಿದೆ. ಈವರೆಗೆ ಮಂಗಳೂರು ಮನಪಾ ಆಯುಕ್ತರಾಗಿದ್ದ ಸಿ.ಎಲ್.ಆನಂದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶಿಸಿದೆ. ಅವರಿಂದ ತೆರವಾಗಿರುವ ಸ್ಥಾನಕ್ಕೆ ಶಿವಮೊಗ್ಗ ಜಿಲ್ಲೆಯ ತುಂಗಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ರವಿಚಂದ್ರ ನಾಯಕ್‌ರನ್ನು ನೇಮಕ ಮಾಡಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿಯಾಗಿ ಯತೀಶ್ ಎನ್.‌ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಎಸ್ಪಿ‌ಯಾಗಿ‌ ಯತೀಶ್ ಎನ್.‌ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ ಎಸ್ ಪಿ ರಿಷ್ಯಂತ್ ಸಿ.ಬಿ ಅವರಿಂದ ತೆರವಾದ ಸ್ಥಾನಕ್ಕೆ ಮಂಡ್ಯದ ಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಯತೀಶ್ ಅವರನ್ನು ಬುಧವಾರ ರಾಜ್ಯ ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು.

Read More

ಮಂಗಳೂರು: ಮಳೆಗಾಲ ಮುಗಿಯುವವರೆಗೆ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಮನಪಾ ಆದೇಶ

ಮಂಗಳೂರು: ನಗರದ ಬಲ್ಮಠದಲ್ಲಿ ಕಟ್ಟಡ ಕಾಮಗಾರಿ ಅವಘಡದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ಮಳೆಗಾಲ ಮುಗಿಯುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತಕ್ಕೆ ಆದೇಶಿಸಿದೆ. ಇಂದಿನಿಂದ ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚನೆ ನೀಡಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮ ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಿದೆ. ಅವೈಜ್ಞಾನಿಕವಾಗಿ ಭೂಮಿಯನ್ನು ಅಗೆದು ಹಾಕದಂತೆ ಸೂಚನೆ ನೀಡಿದೆ. ಆದೇಶ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆ ನೀಡಿ…

Read More

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಮಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಏಕಾಏಕಿ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಘಟನೆ ಬಲ್ಮಠದಲ್ಲಿ ನಡೆದಿದೆ. ಖಾಸಗಿ ಕಟ್ಟದ ನಿರ್ಮಾಣ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಮಣ್ಣಿನಡಿ ಇಬ್ಬರು ಕೂಲಿ ಕಾರ್ಮಿಕರು ಸಿಲುಕಿಕೊಂಡಿದ್ದು, ಕಾರ್ಮಿಕರ ರಕ್ಷಣೆಗಾಗಿ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಎಸ್ ಡಿ ಆರ್ ಎಫ್, ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು, ಮಣ್ಣು ತೆರವುಗೊಳಿಸಿ, ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆದಿದೆ.

Read More

ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಕೆಪಿಟಿ ಜಂಕ್ಷನ್‌ ಬಳಿ ಉಂಟಾದ ಹೊಂಡಗಳನ್ನು ಸಂಚಾರಿ ಪೊಲೀಸರೇ ಕಾಂಕ್ರೀಟ್‌ ಹಾಕಿ ಮುಚ್ಚುವ ಕೆಲಸ ಮಾಡಿದ್ದಾರೆ! ಮಂಗಳವಾರ ಬೆಳಗ್ಗೆ ಸಂಚಾರ ಪೂರ್ವ (ಕದ್ರಿ) ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಈಶ್ವರ್‌ ಸ್ವಾಮಿ, ಸಿಬಂದಿ ಸಿದ್ದರಾಜು ಮತ್ತು ಮಂಜು ಅವರು ಕಾಂಕ್ರೀಟ್‌ನ್ನು ತರಿಸಿ ತಾವೇ ಹಾರೆ ಹಿಡಿದು ಹೊಂಡಕ್ಕೆ ಹಾಕಿ ಸಮತಟ್ಟುಗೊಳಿಸುವ ಪ್ರಯತ್ನ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಈಶ್ವರ್‌ ಸ್ವಾಮಿಯವರು, ಇತ್ತೀಚೆಗೆ ಇಲ್ಲಿನ ರಸ್ತೆ ಹೊಂಡಕ್ಕೆ ಬಿದ್ದು ಸ್ಕೂಟರ್‌ ಸವಾರರಾದ ಹಿರಿಯ ನಾಗರಿಕರೋರ್ವರು…

Read More

ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ವರ್ಗಾವಣೆ- ನೂತನ ಎಸ್ಪಿಯಾಗಿ ಯತೀಶ್ ಎನ್. ನೇಮಕ

ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್ ನೇಮಕವಾಗಿದ್ದಾರೆ. ಮಂಡ್ಯ ಎಸ್ಪಿಯಾಗಿದ್ದ ಯತೀಶ್ ದಕ್ಷಿಣ ಕನ್ನಡಕ್ಕೆ ನೂತನ ಎಸ್ಪಿಯಾಗಿ ನೇಮಕವಾಗಿದ್ದು, ಬೆಂಗಳೂರು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ರಿಷ್ಯಂತ್‌ ವರ್ಗಾವಣೆಯಾಗಿದ್ದಾರೆ. 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ನೀಡಿದೆ. ಲಾಬೂರಾಮ್ : ಐಜಿಪಿ ಕೇಂದ್ರ ವಲಯಬಿ….

Read More

ಅಮೆರಿಕದಲ್ಲಿ ಮಂಗಳೂರಿಗರಿಂದ ಯಕ್ಷಗಾನ ಅಭಿಯಾನ

ಜುಲೈ 9ರಂದು ಯಕ್ಷದ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್‌ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದಲ್ಲಿ ಯುಎಸ್‌ಎ ಘಟಕದ ಅಧ್ಯಕ್ಷ ಡಾ. ಅರವಿಂದ ಉಪಾಧ್ಯಾಯ, ಡಾ. ಶ್ರೀಧರ ಆಳ್ವ, ಮಹಾಬಲ ಶೆಟ್ಟಿ, ಉಳಿ ಯೋಗೇಂದ್ರ ಭಟ್‌, ಮುಂತಾದವರ ನೇತೃತ್ವದಲ್ಲಿ ನಡೆಯಲಿದೆ.ಎಂದು ಪಟ್ಲ ಫೌಂಡೇಶನ್‌ ಸ್ಥಾಪಕಾಧ್ಯಕ್ಷ ಪಟ್ಟ ಸತೀಶ್‌ ಶೆಟ್ಟಿ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

Read More

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ಧಿಢೀರ್ ಭೇಟಿ..! ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕರು

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಡತ ವಿಲೇವಾರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ಎಂದು ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಸತಾಯಿಸುತ್ತಿದ್ದ ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂಗೂ ಕ್ಲಾಸ್ ತೆಗೆದುಕೊಂಡ ಪೂಂಜ, ಕಚೇರಿಗೆ ಆಗಮಿಸಿದ ಜನರ ಸಮಸ್ಯೆಯನ್ನು ಆಲಿಸಿದರು.ಅಧಿಕಾರಿಗಳ ಸ್ಪಂದನೆ ಬಗ್ಗೆ , ಜನರಿಂದ ಮಾಹಿತಿ ಪಡೆದ ಶಾಸಕ , ಬಳಿಕ ರೆಕಾರ್ಡ್ ರೂಮ್ಗೆ ಭೇಟಿ ನೀಡಿ…

Read More

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಹೊಡೆದಾಟ..! ಇಬ್ಬರು ಆಸ್ಪತ್ರೆಗೆ

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 20 ದಿನಗಳಿಂದ ವಿಚಾರಣಾಧೀನ ಖೈದಿಗಳಾಗಿ ಜೈಲು ಸೇರಿದ್ದ ಉಳ್ಳಾಲದ ಮಹಮ್ಮದ್ ಸಮೀರ್ ಹಾಗೂ ಮಹಮ್ಮದ್ ಮನ್ಸೂರ್ ಮೇಲೆ ಟೋಪಿ ನೌಫಾಲ್ ಹಾಗೂ ಇತರ ಹತ್ತು ರೌಡಿಗಳಿಂದ ಈ ದಾಳಿ ನಡೆಸಲಾಗಿದೆ. ಸಂಜೆ 6.45ರ ಸುಮಾರಿಗೆ ಈ ಘಟನೆ ನಡೆದಿದ್ದು,ಜೈಲಿನ ಅಡುಗೆ ರೂಮಿನಲ್ಲಿ ಹರಿತವಾದ ವಸ್ತುಗಳಿಂದ ದಾಳಿ ನಡೆಸಲಾಗಿದೆ. ಹಲ್ಲೆಗೊಳಗಾದ ಇಬ್ಬರಿಗೂ ತಲೆ,ಭುಜ ಸೇರಿದಂತೆ ದೇಹದ ಹಲವೆಡೆ ಗಾಯಗಳಾಗಿದ್ದು ಪ್ರಾಣಪಾಯದಿಂದ…

Read More

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ದ.ಕ. ಜಿಲ್ಲೆಯಲ್ಲಿ ಪ್ರತಿಭಟನೆ..!

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದ್ಯಂತ ಎಲ್ಲಾ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ. ಕೇಂದ್ರ ಸರ್ಕಾರ ರಾಜ್ಯ ಸರ್ಕಾರ. 80 ರಿಂದ 65% ಕನ್ನಡಿಗರಿಗೆ.ಉದ್ಯೋಗಾವಕಾಶ ಕಲ್ಪಿಸಬೇಕು. ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು. ಡಾಕ್ಟರ್ ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸಬೇಕು.ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು..ಎಂದು ಸತ್ಯಾಗ್ರಹ ಹಾಗೂ ಹೋರಾಟವನ್ನು ಹಮ್ಮಿಕೊಂಡಿದ್ದು.. ದಕ್ಷಿಣ ಕನ್ನಡ ಜಿಲ್ಲಾ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷರು. ಪದಾಧಿಕಾರಿಗಳು. ಸದಸ್ಯರು.. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸುವ ಮೂಲಕ ಪ್ರತಿಭಟನೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ…

Read More