ಉಪ್ಪಿನಂಗಡಿ: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಿದ ನಾಯಿ..!
ಮಂಗಳೂರು: ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ನಾಯಿ ರಕ್ಷಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳಲು ನಾಲ್ಕು ಕಿ.ಮೀ. ದೂರದ ಉಪ್ಪಿನಂಗಡಿಗೆ ರಾತ್ರಿ ವೇಳೆ ನಡೆದುಕೊಂಡು ಬಂದಿದ್ದಾರೆ. ಅವರನ್ನು ಸಾಕು ನಾಯಿ ಹಿಂಬಾಲಿಸಿಕೊಂಡು ಬಂದಿದ್ದು, ನದಿಗೆ ಹಾರಲು ಸೇತುವೆ ಬಳಿ ಹೋಗುವಾಗ ಚೂಡಿದಾರ ಹಿಡಿದಿಳೆದು ನಿರಂತರವಾಗಿ ಬೊಗಳಿದೆ. ನಾಯಿ ನಿರಂತರವಾಗಿ ಬೊಗಳುಗುವುದನ್ನು ಗಮನಿಸಿದ ಬೈಕ್ ಸವಾರ ಹಾಗೂ ಸ್ಥಳೀಯರು ಮಹಿಳೆಯನ್ನು ರಕ್ಷಿಸಿದ್ದಾರೆ. 16 ವರ್ಷದ ಹಿಂದೆ ದಂಪತಿ…

