ಮಂಗಳೂರು: ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ ಅಂದ್ರೆ ತಪ್ಪಾ?- ವಿಪಕ್ಷ ನಾಯಕ ಆರ್.ಅಶೋಕ್
ಕರ್ನಾಟಕದಲ್ಲಿ ಭಾರತ್ ಮಾತಾ ಕೀ ಜೈ, ಜೈ ಶ್ರೀರಾಮ್ ಎಂದರೆ ತಪ್ಪು. ಕಾಂಗ್ರೆಸ್ ಸರ್ಕಾರ ಗೂಂಡಾಗಳ ಕೈಗೆ ರಾಜ್ಯವನ್ನು ಕೊಟ್ಟಿದ್ದು, ಇಂತಹ ಘೋಷಣೆ ಕೂಗಿದರೆ ಚೂರಿ ಹಾಕುತ್ತಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ದಕ್ಷಿಣ ಕನ್ನಡ ಜಿಲ್ಲೆಯ ಬೊಳಿಯಾರಿನಲ್ಲಿ ಭಾರತ ಮಾತೆಗೆ ಜೈಕಾರ ಕೂಗಿದ್ದಕ್ಕಾಗಿ ಮತಾಂಧರಿಂದ ಹಲ್ಲೆಗೊಳಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿಯ ಗಾಯಾಳು ಕಾರ್ಯಕರ್ತರನ್ನು ಆರ್.ಅಶೋಕ ಭೇಟಿ ಮಾಡಿ ಧೈರ್ಯ ಹೇಳಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂತಹ…

