ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚನೆ-6 ಆರೋಪಿಗಳು ಬಂಧನ

ಉಳ್ಳಾಲ: ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದು, ಓರ್ವ ತಲೆಮರೆಸಿಕೊಂಡ ಘಟನೆ ತೊಕ್ಕೊಟ್ಟಿನ ಹಣಕಾಸು ಸಂಸ್ಥೆಯೊಂದರಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್, ಮುಹಮ್ಮದ್ ಮಿಸ್ಬಾ, ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ತಿಯಾಝ್, ಮಂಚಿಲದ ಝಹೀಮ್ ಅಹ್ಮದ್ ಬಂಧಿತರಾಗಿದ್ದು, ಹೆಜಮಾಡಿಯ ನೌಫಾಲ್ ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಕೊಣಾಜೆ ವಿವಿ ರಸ್ತೆಯಲ್ಲಿರುವ ಹಣಕಾಸು ಸಂಸ್ಥೆಯೊಂದಕ್ಕೆ ನ.22ರಂದು ಸಂಜೆ ಸುಮಾರು 5 ಗಂಟೆ…

Read More

ಧರ್ಮಸ್ಥಳ: ಭಕ್ತರ ಚಿನ್ನಾಭರಣ ಕದಿಯುತ್ತಿದ್ದ ಇಬ್ಬರು ಕಳ್ಳಿಯರ ಬಂಧನ..!!

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನಡೆದಿದ್ದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಮಹಿಳೆಯರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಸುಮಾರು 5.32 ಲಕ್ಷ ರೂ ಮೌಲ್ಯದ 76 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ 2ನೇ ಕ್ರಾಸ್ ಗಂಗಾಧರ ನಗರ ನಿವಾಸಿ ತಾಯಿ ಬೀಬಿಜಾನ್ (59) ಮತ್ತು ಮಗಳು ಮಸಾಭಿ ಅಲಿಯಾಸ್‌ ಆರತಿ (34) ಸೆರೆಯಾದ ಕಳ್ಳಿಯರು. ಆಂಧ್ರ ಪ್ರದೇಶದ ನೆಲ್ಲೂರು ನಿವಾಸಿ ಜೆ.ಲತಾ ಅವರು ಕುಟುಂಬ ಸಮೇತ ಕಳೆದ ಮೇ 3ರಂದು ಶ್ರೀ ಕ್ಷೇತ್ರ…

Read More

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..! ನದಿಗೆ ಹಾರಿರುವ ಶಂಕೆ

ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಮಾರು 65 ವರ್ಷದ ಮಹಿಳೆಯ ಮೃತದೇಹ ಇದಾಗಿದೆ. ಇಂದು ಬೆಳಗ್ಗೆ ನದಿಗೆ ಹಾರಿರಬಹುದು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದು, ಅದನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿರುವುದಾಗಿ ಬಂಟ್ವಾಳ ಠಾಣಾ ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಬಂಧಪಟ್ಟವರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More

ಎಡಪದವು: ತಲವಾರು ದಾಳಿ ಪ್ರಕರಣ..!! ನಾಲ್ವರು ಆರೋಪಿಗಳ ಬಂಧನ

ಬಜ್ಪೆ: ಎಡಪದವು ಎಂಬಲ್ಲಿ ಅಖಿಲೇಶ್ ಎಂಬವರ‌ ಮೇಲೆ ತಲವಾರು ದಾಳಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಮಂಗಳೂರು ಬಂದರ್ ನಿವಾಸಿ ಸಿನಾನ್, ವೇಣೂರು ನಿವಾಸಿ ಇರ್ಷಾದ್, ವಾಮಂಜೂರು ನಿವಾಸಿ ಸುಹೈಲ್ ಅಕ್ರಮ್ ಮತ್ತು‌ ವಾಮಂಜೂರು ಪಿಲಿಕುಳ ನಿವಾಸಿ ನಿಸಾನ್ ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳ ಪೈಕಿ ಮಂಗಳೂರು ಬಂದರ್ ನಿವಾಸಿ ಸಿನಾನ್ ನನ್ನು ಸಾರ್ವಜನಿಕರು ಘಟನಾ ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಉಳಿದ ಮೂವರು ಆರೋಪಿಗಳಾದ ಇರ್ಷಾದ್ ನನ್ನು ಬಜ್ಪೆ…

Read More

ʻಪವರ್‌ ಶೇರಿಂಗ್‌ʼ ಚರ್ಚೆಯ ನಡುವೆ ಡಿಸೆಂಬರ್‌ 8ರಿಂದ ಬೆಳಗಾವಿ ಅಧಿವೇಶನ

ಮಂಗಳೂರು: ಡಿಸೆಂಬರ್‌ 8ರಿಂದ 19ರವರೆಗೆ ಬೆಳಗಾವಿಯ ಸ್ವರ್ಣ ಸೌಧದಲ್ಲಿ ಅಧಿವೇಶನ ನಡೆಯಲಿದ್ದು, ಶಾಸಕರಿಗೆ, ಅಧಿಕಾರಿಗಳಿಗೆ, ಅಧಿವೇಶನ ವೀಕ್ಷಕರಿಗೆ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಾಗಿದ್ದು, ಅದಕ್ಕೂ ಸ್ಥಳ ನಿಗದಿ ಮಾಡಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು. ಮಂಗಳೂರಿನ ಸರ್ಕ್ಯೂಟ್‌ಹೌಸ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸ್ವರ್ಣ ಸೌಧದ ಉದ್ಯಾನ ಉದ್ಘಾಟನೆ ನಡೆಯಲಿದ್ದು, ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನಲ್ಲಿ ಸ್ಥಾನ ಪಡೆದ ಕಲ್ಬುರ್ಗಿಯ ವಿನೋದ್ ಕುಮಾರ್ ತಯಾರಿಸಿದ 50×75 ಅಡಿ ಗಾತ್ರದ ಖಾದಿ ಧ್ವಜವನ್ನು…

Read More

ಜ. 04ರಂದು ಮಂಗಳೂರಿನ ಪುರಭವನದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾರ್ಯಕ್ರಮ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ (ರಿ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಹಾಗೂ ದಾಸ್ ಚಾರಿಟೇಬಲ್ ಸೇವಾ ಟ್ರಸ್ಟ್ (ರಿ) ಮಂಗಳೂರು ಇದರ ಸಹಯೋಗದಲ್ಲಿ “ಕುಂಭಕಲಾವಳಿ ಕುಲಾಲ ಕಲಾ ಸೇವಾಂಜಲಿ” ಕಾಯ೯ಕ್ರಮ ಮಂಗಳೂರಿನ ಕುದ್ಮುಲ್ ರಂಗರಾವ್, ಪುರಭವನದಲ್ಲಿ ಜ. 04ರಂದು ನಡೆಯಲಿದೆ. ಬೆಳಿಗ್ಗೆ 09 ಗಂಟೆಗೆ ಪದಗ್ರಹಣ ನಡೆಯಲಿದ್ದು, ಬಳಿಕ ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ನಡುಬೊಟ್ಟು…

Read More

ಧರ್ಮಸ್ಥಳ ಬುರುಡೆ ಪ್ರಕರಣ- 12 ಷರತ್ತುಗಳೊಂದಿಗೆ ಜಾಮೀನು..! ಯಾವುದೆಲ್ಲಾ 12 ಷರತ್ತುಗಳು?

ಮಂಗಳೂರು: ಬುರುಡೆ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳಿಂದ ಶಿವಮೊಗ್ಗ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನಿಗೆ ಮಂಗಳೂರು ಜಿಲ್ಲಾ ನ್ಯಾಯಾಲಯ 12 ಷರತ್ತುಗಳೊಂದಿದೆ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯ ಚಿನ್ನಯ್ಯನಿಗೆ ವಿಧಿಸಲಾದ 12 ಷರತ್ತುಗಳಾವುವು? ಇಲ್ಲಿದೆ ಸಂಪೂರ್ಣ ವಿವರ…. 1) ಸಮಾನ ಅಪರಾಧ ಮತ್ತೆ ಮಾಡಬಾರದು (ಮುಂದೆ ಇದೇ ರೀತಿಯ ಅಪರಾಧಕ್ಕೆ ಕೈ ಹಾಕಬಾರದು.) 2) ಓಡಿಹೋಗಬಾರದು (Abscond ಆಗಬಾರದು)(ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಓಡಿಹೋಗುವುದು, ಸ್ಥಳ ಬಿಟ್ಟು ಮರೆಮಾಡಿಕೊಳ್ಳುವುದು ಬೇಡ.) 3) ಸಾಕ್ಷಿದಾರರಿಗೆ ಬೆದರಿಕೆ, ಲಂಚ, ಅಥವಾ ಪ್ರಲೋಭನೆ ಕೊಡಬಾರದು(Prosecution…

Read More

ಎಡಪದವು: ಯುವಕ ಮೇಲೆ ದುಷ್ಕರ್ಮಿಗಳಿಂದ ತಲಾವಾರು ದಾಳಿ..!! Video Viral

ಮಂಗಳೂರು ಹೊರವಲಯದಲ್ಲಿ ಯುವಕನ‌ ಮೇಲೆ ತಲವಾರು ದಾಳಿ ನಡೆದಿದೆ. ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಮೇಲೆ ದಾಳಿ ನಡೆದಿದೆ. ದಾಳಿಯಿಂದಾಗಿ ಅಖಿಲೇಶ್ ಅವರ ಕೈಗೆ ತರಚಿದ ಗಾಯಗಳಾಗಿವೆ. ಮೊಬೈಲ್ ನಲ್ಲಿ ಬೈಕ್ ನಲ್ಲಿ ತಲವಾರು ಹಿಡಿದು ಸಾಗುತ್ತಿದ್ದವರನ್ನು ಅಖಿಲೇಶ್ ಮೊಬೈಲ್ ನಲ್ಲಿ ವೀಡಿಯೋ ಮಾಡಿದ್ದರು. ವಿಡಿಯೋ ಮಾಡಿದ್ದನ್ನು ಆಕ್ಷೇಪಿಸಿ ಅಖಿಲೇಶ್ ಮೇಲೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಬೈಕ್ ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳಿಂದ ದಾಳಿ ನಡೆದಿದೆ. ಗಾಯಗೊಂಡ ಅಕಿಲೇಶ್ ಮೂಡಬಿದ್ರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ತೆರಳಿ ಬಜಪೆ…

Read More

ಬಂಟ್ವಾಳ: ಕೆ–ಸೆಟ್ ಪರೀಕ್ಷೆಯಲ್ಲಿ ಭಾರ್ಗವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಬಂಟ್ವಾಳ : ಕೆ–ಸೆಟ್ (ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ) 2025ರಲ್ಲಿ ಭಾರ್ಗವಿ ಯು. ಎಸ್ ಅವರು ವಾಣಿಜ್ಯ ವಿಷಯದಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ರಾಜ್ಯಮಟ್ಟದಲ್ಲಿ 97ನೇ ರ‍್ಯಾಂಕ್ ಪಡೆದು ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಹರಾಗಿದ್ದಾರೆ. ಇವರು ಪ್ರಸ್ತುತ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ಪೂಂಜಾಲಕಟ್ಟೆಯ ನಿವಾಸಿ ಉಮಾನಾಥ್ ಮತ್ತು ಶ್ರೀಲತಾ ಎಂ.ಜೆ ದಂಪತಿಯ ಸುಪುತ್ರಿ.

Read More

ಬೆಳ್ತಂಗಡಿ: ಅಪರಿಚಿತ ವ್ಯಕ್ತಿಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಬೆಳ್ತಂಗಡಿ: ಸುಮಾರು 55 ರಿಂದ 60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ನ.23 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ನದಿ ನೀರಿನಲ್ಲಿಪತ್ತೆಯಾಗಿದೆ. ಮೃತದೇಹದ ಮೈಮೇಲೆ ನಸು ಹಸಿರು ಬಣ್ಣದ ಉದ್ದ ತೋಳಿನ ಶರ್ಟ್, ಅರ್ದ ತೋಳಿನ ಬಿಳಿ ಬಣ್ಣದ ಬನಿಯನ್, ಕಾಫಿ ಬಣ್ಣದ ಒಳಚಡ್ಡಿ, ನಸು ಹಸಿರು ಬಣ್ಣದ ಪಟ್ಟಿ ಇರುವ ಬಿಳಿ ಪಂಚೆ, ಕೆಂಪು ಉಡಿದಾರ ಧರಿಸಿಕೊಂಡಿದ್ದು ಪತ್ತೆಯಾಗಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯ ಪಿಎಸ್‌ಐ 8277986449…

Read More