ಮಂಗಳೂರು: ಹೈಡ್ರೋಫೋನಿಕ್‌ ಗಾಂಜಾ ಸಾಗಾಟ- ಆರೋಪಿಯ ಬಂಧನ

ಮಂಗಳೂರು: ಮುಂಬೈನಿಂದ ವಿಮಾನದ ಮೂಲಕ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಸಿಐಎಫ್ ಸಿಬ್ಬಂದಿಗಳು ವಶಕ್ಕೆ ಪಡೆದು ಬಜ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.  ಬಂಧಿತನನ್ನು ಶಂಕರ್ ನಾರಾಯಣ್ ಪೊದ್ದಾರ್ ಎಂದು ತಿಳಿದು ಬಂದಿದೆ. ಈತ ಅ.14ರಂದು ಸಂಜೆ 6:30ಕ್ಕೆ ಮುಂಬೈನಿ0ದ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಹೈಡ್ರೋಪೋನಿಕ್ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆ ವಿಮಾನ ನಿಲ್ದಾಣ ಸಿಬ್ಬಂದಿ ಆಧರಿಸಿ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಸಿಐಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರು. 

Read More

ಕಾರ್ಕಳ: ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸುದೀಪ್ ಭಂಡಾರಿ ಅವರು ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುದೀಪ್ ಭಂಡಾರಿ ಅವರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.

Read More

ಧರ್ಮಸ್ಥಳ ಪ್ರಕರಣ: ಆರೋಪಿ ಚಿನ್ನಯ್ಯ ಪತ್ನಿ, ಸಹೋದರಿಯ ವಿಚಾರಣೆ

ಧರ್ಮಸ್ಥಳ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿ ಬಂದು ಆರೋಪಿಯಾಗಿ ಜೈಲಿನಲ್ಲಿರುವ ಆರೋಪಿ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ ಹಾಗೂ ಚಿನ್ನಯ್ಯನ ಸಹೋದರಿ ರತ್ನಾ ಬೆಳ್ತಂಗಡಿ ಎಸ್.ಐ.ಟಿ. ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಾರೆ. ಚಿನ್ನಯ್ಯನಿಗೆ ಸಂಬ0ಧಿಸಿದ ಕೆಲ ಮಾಹಿತಿಗಳನ್ನು ಕಲೆ ಹಾಕಲು, ಹಣ ವರ್ಗಾವಣೆಗೆ ಸಂಬ0ಧಿಸಿದ0ತೆ ಹಾಗೂ ಇತರ ವಿಚಾರಗಳ ಬಗ್ಗೆ ಪಡೆಯಲು ಎಸ್.ಐ.ಟಿ ಅಧಿಕಾರಿಗಳು ಅವರಿಬ್ಬನ್ನು ಕರೆಸಿದ್ದಾರೆ ಎನ್ನಲಾಗಿದೆ. ಚಿನ್ನಯ್ಯನು ಮಹೇಶ್ ಶೆಟ್ಟಿ ತಿಮರೋಡಿಯವರ ಮನೆಗೆ ತೆರಳಿದ ವೇಳೆ ಆತನೊಂದಿಗೆ ಪತ್ನಿಯೂ ಇದ್ದಳು ಎಂದು ಸೌಜನ್ಯಾ ಪರ ಹೋರಾಟಗಾರರು ಹೇಳಿಕೆ…

Read More

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆ.!!

ಪುತ್ತೂರು: ಇಬ್ಬರು ಯುವತಿಯರು ನಾಪತ್ತೆಯಾಗಿರುವ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರಿನ ಇನಾಮೊಗ್ರುವಿನ ಮೋನಿಶಾ (23) ಮತ್ತು ಮಂಡ್ಯದ ಪಾಂಡವಪುರದ ದಿವ್ಯಾ (20) ನಾಪತ್ತೆಯಾದ ಯುವತಿಯರು ಎಂದು ಗುರುತಿಸಲಾಗಿದೆ. ಇವರಿಬ್ಬರೂ ಮಂಡ್ಯದಲ್ಲಿ ಒಂದೇ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿದ್ದರು. ವರದಿಯ ಪ್ರಕಾರ, ಇವರಿಬ್ಬರೂ ನಾಲ್ಕು ದಿನಗಳ ಹಿಂದೆ ಮೋನಿಶಾ ಅವರ ಮನೆಗೆ ಬಂದಿದ್ದು, ಅಂದಿನಿಂದ ನಾಪತ್ತೆಯಾಗಿದ್ದಾರೆ. ಈ ಇಬ್ಬರೂ ಯುವತಿಯರು ಶ್ರವಣ ಮತ್ತು ಮಾತಿನ ಸಮಸ್ಯೆಗಳಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

Read More

ವಿಟ್ಲ: ಹನಿಟ್ರ್ಯಾಪ್ ಮಾಡಿ ಹಣ ವಸೂಲಿ- 7 ಮಂದಿಯ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ :ಹನಿಟ್ರ್ಯಾಪ್ ಮಾಡಿ 45 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಆರೋಪದಲ್ಲಿ ಏಳು ಮಂದಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 53 ವಯಸ್ಸಿನ ಕೇರಳ ಮೂಲದ ಸಂತ್ರಸ್ತ ವ್ಯಕ್ತಿಯೊಬ್ಬರು ನೀಡಿದ ದೂರಿನನ್ವಯ ಬಷೀರ್ ಕಡಂಬು, ಆಯಿಷಾತುಲ್ ಮಿಶ್ರಿಯ,ಸಫೀಯ ಮಾಣಿ, ಸಫೀಯ ಕೇರಳ,ಸರಫುದ್ದೀನ್ ವಿಟ್ಲ, ಹಾಗೂ ಇತರೆ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಘಟನೆಯ ವಿವರ :ಸಂತ್ರಸ್ತ ಪ್ರಾಯ 53 ವರ್ಷ ರವರು ಸೌದಿ ಅರೆಬಿಯಾದಲಿ ಸ್ವಂತ ಉದ್ಯೋಗದಲ್ಲಿದ್ದು ಅವರ ಹೆಂಡತಿಯ ಅನಾರೋಗ್ಯದಿಂದ ಮದುವೆಯಾಗುವುದಾಗಿ…

Read More

ಮಂಗಳೂರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ವಂಚನೆ ಪ್ರಕರಣ: ಆರೋಪಿಗಳ ಬಂಧನ..!!

ಮಂಗಳೂರು : ಕಾವೂರಿನ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ನಕಲಿ ಚಿನ್ನವನ್ನು ಅಡಮಾನವಿರಿಸಿ 6.24 ಲಕ್ಷ ಸಾಲ ಪಡೆದು ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆಕಾಶಭವನ ನಿವಾಸಿ ಹಾರಿಫ್ ಅಬುಬಕ್ಕರ್ (39), ನಂತೂರು ಬಿಕರ್ನಕಟ್ಟೆ ನಿವಾಸಿ ಮಹಮ್ಮದ್ ಆಶೀಕ್ ಕಟ್ಟತ್ತಾರ್ (34), ಪುತ್ತೂರು ಬೆಳಂದೂರು ನಿವಾಸಿ ಅಬ್ದುಲ್ ರಮೀಜ್ (33) ಬಂಧಿತರು. ಅಸಲಿ ಚಿನ್ನಾಭರಣಗಳೆಂದು ನಂಬಿಸಿ ನಕಲಿ ಚಿನ್ನವನ್ನು ಅಡವಿಟ್ಟು ಇವರು ಆತ್ಮಶಕ್ತಿ ಸಹಕಾರಿ ಸಂಘದಲ್ಲಿ 6.24 ಲಕ್ಷ ರು. ಸಾಲ ಪಡೆದಿದ್ದರು. ನಕಲಿ ಚಿನ್ನದ…

Read More

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಕಚೇರಿ ಉದ್ಘಾಟಿಸಿದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಹರಿನಾರಾಯಣ ಆಸ್ರಣ್ಣ ಕಟೀಲು

ಮಂಗಳೂರು: ಕುಲಾಲರಿಂದಲೂ ವಂಶಾಭಿವೃದ್ಧಿ ಸಾಧ್ಯ. ಕುಲ ಕಸುಬಿಗೆ ಒತ್ತು ನೀಡಬೇಕು . ಕುಲ ಕಸುಬನ್ನು ಬಿಟ್ಟರೆ ದೇವರಿಗೂ ಅದು ಇಷ್ಟವಾಗದು. ದೇವರ ಆಶೀರ್ವಾದದಿಂದ ಸಮಾಜಕ್ಕಾಗಿ ಇರುವ ಸಂಘ ಇನ್ನಷ್ಟು ಬೆಳಗಲಿ ಎಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಹರಿನಾರಾಯಣ ಆಸ್ರಣ್ಣ ಕಟೀಲು ಹೇಳಿದರು. ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಮತ್ತು ಮಹಿಳಾ ಸಂಘಟನೆಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಆಯೋಜಿಸಲಾದ ಜಿಲ್ಲಾ ಕಚೇರಿ ಉದ್ಘಾಟನೆ ಮತ್ತು ದಾಸ್ ಚಾರಿಟೇಬಲ್…

Read More

ಮಂಗಳೂರು :‘ಮನೆ ಮನೆಗೆ ಪೊಲೀಸ್’ ಯೋಜನೆ ಆರಂಭ

ಮಂಗಳೂರು : ರಾಜ್ಯ ಸರಕಾರ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಮನೆ ಮನೆಗೆ ಪೊಲೀಸ್’ ಎಂಬ ಯೋಜನೆಯನ್ನು ಆರಂಭಿಸಿದೆ. ಆದರೆ ಈ ಬಗ್ಗೆ ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಇಲ್ಲದ ಕಾರಣ ಮತ್ತು ಪ್ರಚಾರದ ಕೊರತೆಯಿಂದಾಗಿ ಜನಸಾಮಾನ್ಯರಲ್ಲಿ ಆತಂಕ ಸೃಷ್ಟಿಯಾಗಿದೆ. ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ತುಂಬುವುದು, ಸುರಕ್ಷತೆಯ ವಾತಾವರಣ ಸೃಷ್ಟಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆದರೆ ಬಹುತೇಕ ಮಂದಿಗೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯೇ ಇಲ್ಲ ಹಾಗಾಗಿ ದಿಢೀರ್ ಮನೆಗೆ ಆಗಮಿಸಿ ಪ್ರಶ್ನಿಸುವ ಪೊಲೀಸರಿಗೆ…

Read More

ಪುತ್ತೂರು: ಸಿಡಿಲು ಬಡಿದು ವ್ಯಕ್ತಿ ಮೃತ್ಯು..!

ಪುತ್ತೂರು: ತಾಲೂಕಿನಲ್ಲಿ ಶನಿವಾರ ಸಂಜೆ ಗುಡುಗು ಸಹಿತ ಮಳೆಯಾಗಿದ್ದು, ಸಿಡಿಲಿನ ಅಘಾತಕ್ಕೆ ಒಳಗಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಆನಡ್ಕ ಎಂಬಲ್ಲಿ ನಡೆದಿದೆ. ಆನಡ್ಕ ನಿವಾಸಿ ವಾಮನ (40) ಸಾವನ್ನಪ್ಪಿದ ವ್ಯಕ್ತಿ. ಕೂಲಿ ಕಾರ್ಮಿಕರಾಗಿದ್ದ ವಾಮನ ಅವರು ಸಂಜೆ ಸುಮಾರು 5.30 ರ ವೇಳೆಗೆ ತನ್ನ ಕೆಲಸ ಮುಗಿಸಿ ಮನೆಗೆ ಬಂದು ಮನೆಯ ಮುಂಭಾಗದಲ್ಲಿ ಕುಳಿತುಕೊಂಡಿದ್ದ ವೇಳೆಯಲ್ಲಿ ಬಡಿದ ಸಿಡಿಲು ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ

Read More

ಪುತ್ತೂರು: ಹೆಜ್ಜೇನು ದಾಳಿಗೆ ವಿದ್ಯಾರ್ಥಿನಿ ಬಲಿ..!! ಇನ್ನೋರ್ವ ವಿದ್ಯಾರ್ಥಿ ಗಂಭೀರ

ಪುತ್ತೂರು: ಪಡೂರು ಗ್ರಾಮದ ಸೇಡಿಯಾಪು ಕೂಟೇಲು ಸಮೀಪ ಹೆಜ್ಜೇನು ದಾಳಿಗೆ ಗಂಭೀರಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿದ್ದಾರೆ. ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿದ್ದು, ಹೆಜ್ಜೇನು ದಾಳಿ ಸಂದರ್ಭ ರಕ್ಷಣೆಗೆ ಹೋದ ವ್ಯಕ್ತಿ ಚೇತರಿಕೆಯಾಗಿದ್ದಾರೆ. ಅ.10ರಂದು ಸೇಡಿಯಾಪು ಸಮೀಪದ ಕೂಟೇಲು ಎಂಬಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿಗಳನ್ನು ಮತ್ತು ಗಾಯಗೊಂಡ ವ್ಯಕ್ತಿಯನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.11ರಂದು ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಪಡೂರು ಗ್ರಾಮದ ಕೂಟೇಲು ನಿವಾಸಿ ಕಿರಣ್ ಎಂಬವರ ಪುತ್ರಿ ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ 2ನೇ…

Read More