40 ಕ್ಕೂ ಅಧಿಕ ಕಳವು ಪ್ರಕರಣ: ಕುಖ್ಯಾತ ಆರೋಪಿ “ಇತ್ತೆ ಬರ್ಪೆ ಅಬುಬಕ್ಕರ್” ಬಂಧನ
ಮಂಗಳೂರು: ಹೊರ ರಾಜ್ಯ ಹಾಗೂ ಅಂತರ್ ಜಿಲ್ಲೆಗಳಲ್ಲಿ ಸುಮಾರು 40 ಕ್ಕೂ ಅಧಿಕ ಕಳವು ಪ್ರಕರಣದ ಕುಖ್ಯಾತ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯಿಂದ ರೂ 5,65,000 ಮೌಲ್ಯದ 56.850 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಮಂಗಳೂರು, ಜೋಕಟ್ಟೆ ನಿವಾಸಿ ಅಬುಬಕ್ಕರ್ @ ಅಬ್ದುಲ್ ಖಾದರ್ @ ಇತ್ತೆ ಬರ್ಪೆ ಅಬುಬಕ್ಕರ್ (70) ಎಂದು ಗುರುತಿಸಲಾಗಿದೆ. ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತೂರು ಎಂಬಲ್ಲಿ ಅ.02ರಿಂದ ದಿನಾಂಕ ಅ.6ರ ಮಧ್ಯದ ಅವಧಿಯಲ್ಲಿ ಬೀಗ…

