ಆಟೋ – ಕಾರು ಮುಖಾಮುಖಿ ಢಿಕ್ಕಿ : ಬಾಲಕಿ ಮೃತ್ಯು, ಇಬ್ಬರು ಗಂಭೀರ

ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನವೆಂಬರ್ 1ರಂದು ಸಂಜೆ ಈ ಕಾರು ಹಾಗೂ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಬಾಲಕಿ ದುರ್ಮರಣ ಹೊಂದಿದ್ದಾಳೆ. ಪುತ್ತೂರುನಿಂದ ತಿಂಗಳಾಡಿ ಕಡೆಗೆ ತೆರಳುತ್ತಿದ್ದ ರಿಕ್ಷಾ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ತೀರಾ ವಿರುದ್ದ ದಿಕ್ಕಿನಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದಲ್ಲಿ ರಿಕ್ಷಾ ಚಾಲಕ ಹನೀಫ್ ಬನ್ನೂರ್ ಅವರ ಆರು ವರ್ಷದ ಮಗಳು ಶಜ್ವಾ ಫಾತಿಮಾ ಮೃತಪಟ್ಟಿದ್ದಾಳೆ….

Read More

ಬಂಟ್ವಾಳ: ಓಂ ಶ್ರೀ ಗೆಳೆಯರ ಬಳಗಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ .

ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಓಂ ಶ್ರೀ ಗೆಳೆಯರ ಬಳಗವು ಸಮಾಜ ಸೇವಾ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಅರ್ಹವಾಗಿ 2025ನೇ ಸಾಲಿನ ಪ್ರತಿಷ್ಠಿತ ದ.ಕ.ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದಿನೇಶ್ ನೆಲ್ಲಿಗುಡ್ಡೆ, ನಿಕಟ ಪೂರ್ವಾಧ್ಯಕ್ಷ ಕಿರಣ್ ಅಟ್ಲೂರು ಗೌರವಾಧ್ಯಕ್ಷ ನಾಗೇಶ್ ಕುಲಾಲ್, ಪ್ರಧಾನ ಕಾರ್ಯದರ್ಶಿ ಕರುಣಾಕರ ಕುಲಾಲ್, ಉದ್ಯಮಿ ಉಮೇಶ್ ನೆಲ್ಲಿಗುಡ್ಡೆ ಸಹಿತ ಮಾಜಿ ಅಧ್ಯಕ್ಷರು,ಹಾಗೂ…

Read More

ಮಂಗಳೂರು : ಡಿಜಿಟಲ್ ಅರೆಸ್ಟ್ ಪ್ರಕರಣ-ಪೊಲೀಸರ ತ್ವರಿತ ಕಾರ್ಯಾಚರಣೆ, ಕಳೆದುಕೊಂಡಿದ್ದ ಹಣ ಸಂತ್ರಸ್ತೆಗೆ ಹಸ್ತಾಂತರ

ಮಂಗಳೂರು : ಡಿಜಿಟಲ್ ಅರೆಸ್ಟ್ ಪ್ರಕರಣವೊಂದರಲ್ಲಿ ಪೊಲೀಸರ ತ್ವರಿತ ಕಾರ್ಯಾಚರಣೆಯ ಮೂಲಕ ಸಂತ್ರಸ್ತೆಯು ಕಳೆದುಕೊಂಡಿದ್ದ ಹಣವನ್ನು ಸಂತ್ರಸ್ತೆಗೆ ಹಸ್ತಾಂತರಿಸಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಡಿಸಿಪಿಗಳಾದ ಮಿಥುನ್ ಹಾಗೂ ರವಿಶಂಕರ್ ಅವರ ಸಮ್ಮುಖದಲ್ಲಿ ಸಂತ್ರಸ್ತೆಗೆ ಆಕೆ ಕಳೆದುಕೊಂಡಿದ್ದ 17 ಲಕ್ಷ ರೂ.ಗಳ ಹಣದ ಸಾಂಕೇತಿಕ ವರ್ಗಾವಣೆ ನಡೆಯಿತು. ಬಳಿಕ ಸುದ್ದಿಗೋಷ್ಟಿಯಲ್ಲಿ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಡಿಸಿಪಿ ಮಿಥುನ್, ಅ. 23ರಂದು ಬಿಜೈ ನಿವಾಸಿ 79ರ ಹರೆಯದ ಮಹಿಳೆಗೆ ಪೊಲೀಸ್ ಸಮಸ್ತ್ರದಲ್ಲಿದ್ದ ವ್ಯಕ್ತಿ ವಾಟ್ಸಾಪ್ ಕರೆ ಮಾಡಿ ಮಹಿಳೆಯ ಮೇಲೆ…

Read More

ಮಂಗಳೂರು: ಶರಣ್ ಪಂಪ್‌ವೆಲ್ ಬಂಧನ ಕುರಿತು ಪೊಲೀಸರ ನಡೆಗೆ ಶಾಸಕ ವೇದವ್ಯಾಸ ಕಾಮತ್ ಗರಂ

ಮಂಗಳೂರು: ಆರ್‌ಎಸ್ಎಸ್‌(RSS) ಮುಖಂಡರೊಬ್ಬರ ಭಾಷಣದ ತುಣುಕನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಅವರನ್ನು ಇಂದು ಕದ್ರಿ ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ ಪಂಪ್‌ವೆಲ್‌ಗೆ ಯಾವುದೇ ನೋಟೀಸ್‌ ನೀಡದೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹಿಂದೂ ಕಾರ್ಯಕರ್ತರು ಆರೋಪಿಸಿದ್ದು, ಪೊಲೀಸ್‌ ಸ್ಟೇಷನ್‌ ಮುಂದೆ ಜಮಾಯಿಸಿದ್ದರು. ಆದರೆ ಪೊಲೀಸರು ಅವರನ್ನು ಒಳಗಡೆ ಹೋಗಲು ಬಿಟ್ಟಿರಲಿಲ್ಲ. ಮಾಹಿತಿ ಪಡೆದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಕದ್ರಿ ಠಾಣೆಗೆ ಆಗಮಿಸಿದ್ದರು. ಕದ್ರಿ ಪೊಲೀಸರು…

Read More

 ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆದ ಕದ್ರಿ ಪೊಲೀಸರು..!

ಮಂಗಳೂರು; ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್  ಅವರನ್ನು ವಶಕ್ಕೆ ಪಡೆಯಲಾಗಿದೆ. ಫೇಸ್ ಬುಕ್ ನಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಡಿ ಮಂಗಳೂರಿನ ಕದ್ರಿ ಠಾಣೆ ಪೊಲೀಸರು ಶರಣ್ ಪಂಪ್ ವೆಲ್ ಅವರನ್ನು ವಶಕ್ಕೆ ಪಡೆದಿದ್ದಾರೆ. ಆರ್ ಎಸ್ ಎಸ್ ಮುಖಂಡರೊಬ್ಬರ ಭಾಷಣದ ವಿಡಿಯೋ ಶೇರ್ ಮಾಡಿದ್ದಾರೆ ಎಂಬ ಆರೋಪದಡಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲಿಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಪೊಲೀಸ್ ಠಾಣೆಗೆ ಆಗಮಿಸಿದ ಬಿಜೆಪಿ…

Read More

ಸುಹಾಸ್‌ ಶೆಟ್ಟಿ ಹತ್ಯೆ ಮಾಡಿರುವುದು PFI : NIA ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಮಂಗಳೂರು: ಮಂಗಳೂರಿನ ಬಜ್ಬೆ ಬಳಿ ಕಳೆದ ಮೇ 1ರಂದು ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ಇದೀಗ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಈ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಅಂಶಗಳನ್ನು ಎನ್ಐಎ ಉಲ್ಲೇಖಿಸಿದ್ದು, ಸುಹಾಸ್ ಶೆಟ್ಟಿ ಹತ್ಯೆ ಹಿಂದೆ ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ ನಡೆಸಿ ನಿಷೇಧಗೊಂಡಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆ ಸದಸ್ಯರ ಕೈವಾಡ ಸ್ಪಷ್ಟವಾಗಿದೆ ಎಂದು ತಿಳಿಸಿದೆ. ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್…

Read More

ಬಂಟ್ವಾಳ: ಆಂಬ್ಯುಲೆನ್ಸ್‌ ಗೆ ದಾರಿ ಬಿಟ್ಟು ಕೊಡದೇ ಹುಚ್ಚಾಟ..! ಪುತ್ತೂರು ಬೆಟ್ಟಂಪಾಡಿಯ ಮನ್ಸೂರ್ ಬಂಟ್ವಾಳ ಪೊಲೀಸರ ವಶಕ್ಕೆ

ಬಂಟ್ವಾಳ: ಅಪಘಾತದ ಗಾಯಾಳುಗಳನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ಗೆ ದಾರಿ ಬಿಡದೆ ಸಂಚಾರಕ್ಕೆ ಅಡಚಣೆ ಉಂಟುಮಾಡಿದ ಘಟನೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್.ಜಿ. ಸರ್ಕಲ್ ಬಳಿ ನಡೆದಿದೆ. ಮಾಹಿತಿಯ ಪ್ರಕಾರ, ಅಕ್ಟೋಬರ್ 30, 2025 ರಂದು ಬಿಸಿಲೆ ಘಾಟ್ನಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆತಂದು, ತುರ್ತು ಚಿಕಿತ್ಸೆಯ ನಂತರ ಗಂಭೀರ ಸ್ಥಿತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗುತ್ತಿತ್ತು. KA-22-C-1382 ನಂಬರಿನ ಅಂಬ್ಯುಲೆನ್ಸ್ ಪುತ್ತೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದಾಗ ಮಧ್ಯಾಹ್ನ ಸುಮಾರು 1.30 ಗಂಟೆಗೆ ಬಿ.ಸಿ.ರೋಡ್ ಎನ್.ಜಿ. ಸರ್ಕಲ್…

Read More

ಸೌಜನ್ಯ ಪರ ಹೋರಾಟಗಾರರ ಮೇಲೆ ದೌರ್ಜನ್ಯ ಮಾಡುವಂತಿಲ್ಲ- SIT ಗೆ ಹೈಕೋರ್ಟ್‌ ಸೂಚನೆ

ತಮ್ಮ ವಿರುದ್ಧ ಎಸ್‌ಐಟಿ ದಾಖಲಿಸಿದ್ದ ಪ್ರಕರಣದ ರದ್ದು ಕೋರಿ ಸೌಜನ್ಯ ಪರ ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ, ವಿಠಲಗೌಡ ಅವರು ಹೈಕೋರ್ಟ್‌ ಮೊರೆ ಹೋಗಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, ನಾಲ್ವರ ಮೇಲೆ ಎಸ್‌ಐಟಿ ದೌರ್ಜನ್ಯ ಮಾಡಬಾರದು ಎಂದು ಸೂಚಿಸಿ, ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಇದೇ ಪ್ರಕರಣದಲ್ಲಿ ಅಕ್ಟೋಬರ್ 27ರಂದು ವಿಚಾರಣೆಗೆ ಹಾಜರಾಗುವಂತೆ ನಾಲ್ವರಿಗೂ ಎಸ್‌ಐಟಿ ನೋಟಿಸ್‌ ನೀಡಿತ್ತು. ಆದರೆ, ಅಂದೇ ಬೆಳ್ತಂಗಡಿ ತಾಲೂಕು ಕಚೇರಿ ಎದುರು ಕಪ್ಪು ಪಟ್ಟಿ…

Read More

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ಕೋಟ್ಯಾಂತರ ರೂ. ವಂಚನೆ ಎಸಗಿದ ದಂಪತಿ

ಮಂಗಳೂರು : ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಎಸಗಿದ ದಂಪತಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕುಂದಾಪುರ ತಾಲೂಕಿನ ಗಂಗೊಳ್ಳಿ ಚರ್ಚ್ ರೋಡ್ ನಿವಾಸಿ ಆಲ್ಬನ್ ರೆಬೋರೋ (42) ಹಾಗೂ ಬೆಂಗಳೂರು ಅನೇಕಲ್ ತಾಕೂಕಿನ ವೀವರ್ಸ್ ಕಾಲೊನಿ ನಿವಾಸಿ ಪ್ರಕೃತಿ ಯು. (34) ಎಂದು ಗುರುತಿಸಲಾಗಿದೆ. ವಿದೇಶದಲ್ಲಿ ಕೆಲಸ ಕೊಡಿಸುತ್ತೇವೆ ಎಂದು ಪ್ರತಿ ವ್ಯಕ್ತಿಯಿಂದ 3 ರಿಂದ 4 ಲಕ್ಷ ರೂ ಹಣ ಪಡೆಯುತ್ತಿದ್ದರು. ಕಾವೂರು ಠಾಣೆಯಲ್ಲಿ 30 ಕ್ಕೂ ಹೆಚ್ಚು ಮಂದಿ ಇವರ ವಿರುದ್ಧ ದೂರು ನೀಡಿದ್ದು,…

Read More

ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್ : ಕೇಸ್ ರದ್ದುಕೋರಿ `ಬುರುಡೆ ಗ್ಯಾಂಗ್’ ಹೈಕೋರ್ಟ್ ಗೆ ಅರ್ಜಿ.!

ಬೆಂಗಳೂರು : ಧರ್ಮಸ್ಥಳ ಸುತ್ತ ಮುತ್ತ ನೂರಾರು ಶವಗಳನ್ನು ಹೂತಿಡಲಾಗಿದೆ. ಉತ್ಖನನ ಮಾಡಿ, ತನಿಖೆ ನಡೆಸಿ ಎಂದು ತಾವೇ ಕೊಟ್ಟ ದೂರನ್ನು ಇದೀಗ ವಜಾಗೊಳಿಸಿ ಎಂದು ಹೈಕೋರ್ಟ್ಗೆ ಬುರುಡೆ ಗ್ಯಾಂಗ್ ಅರ್ಜಿ ಸಲ್ಲಿಸಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಬುರುಡೆ ಗ್ಯಾಂಗ್ ನೀಡಿದ್ದ ದೂರನ್ನು ವಜಾಗೊಳಿಸಿ ಎಂದು ಬುರುಡೆ ಗ್ಯಾಂಗ್ ಹೈಕೋರ್ಟ್ಗೆ ಮನವಿ ಮಾಡಿದೆ. ಇವರು ಹೈಕೋರ್ಟ್ಗೆ ಸಲ್ಲಿಸಿದ ಅರ್ಜಿಯಲ್ಲಿ, ಎಸ್ಐಟಿ ತನಿಖೆ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಆರಂಭಿಕ ಎಲ್ಲಾ ಹೇಳಿಕೆಯಲ್ಲಿ ಎಸ್ಐಟಿ ತನಿಖೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ  ಬುರುಡೆ…

Read More