ಮಂಗಳೂರು: ಯುವಕನ ಅಪಹರಿಸಿ ಚಿನ್ನದ ಗಟ್ಟಿ ದರೋಡೆ ಪ್ರಕರಣ-ಓರ್ವ ಬಾಲಕ ಸಹಿತ ಐವರ ಬಂಧನ

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ಕಾರ್ ಸ್ಟ್ರೀಟ್ ಬಳಿ ಸೆಪ್ಟೆಂಬರ್ 26ರಂದು ನಡೆದ ಸಿನಿಮೀಯ ಶೈಲಿಯ ಚಿನ್ನದ ಗಟ್ಟಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಉತ್ತರ ಠಾಣೆ ಪೊಲೀಸರು ನಾಲ್ವರು ಆರೋಪಿಗಳು ಮತ್ತು ಕಾನೂನು ಸಂಘರ್ಷಕ್ಕೊಳಗಾದ ಒಬ್ಬ ಬಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆಗೆ ಬಳಸಿದ ಒಂದು ಸ್ಕೂಟರ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಸೆ. 26ರಂದು ರಾತ್ರಿ ಸುಮಾರು 8:45 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಹಂಪನಕಟ್ಟೆಯಲ್ಲಿರುವ ಚಾಯ್ಸ್ ಗೋಲ್ಡ್ ಚಿನ್ನಾಭರಣದ ಅಂಗಡಿಯ ಕೆಲಸಗಾರರಾದ ಮುಸ್ತಾಫಾ ಎಂಬವರು…

Read More

ಮಂಗಳೂರು: ಹಾಡಹಗಲೇ ವೃದ್ಧೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿ

ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ. ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಬಳಿಯ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಮಧ್ಯಾಹ್ನದ ಊಟದ ಬಳಿಕ ನಳಿನಿಯವರು ಎಂದಿನಂತೆ ವಾಕಿಂಗ್‌ಗೆ…

Read More

ಮಂಗಳೂರು ನಗರದಲ್ಲಿ ನಡೆದ ಬೆಚ್ಚಿಬೀಳಿಸುವ ದರೋಡೆ: ಚಿನ್ನದ ಅಂಗಡಿಯ ಕೆಲಸಗಾರನನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನದ ಗಟ್ಟಿ ದರೋಡೆ

ಮಂಗಳೂರು : ಚಿನ್ನದ ಅಂಗಡಿಯ ಕೆಲಸಗಾರನೊಬ್ಬನಿಂದ ಸುಮಾರು 1.5 ಕೋಟಿ ರೂ. ಬೆಲೆಗಾಳುವ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿರುವ ಆಘಾತಕಾರಿ ಘಟನೆ ಸೆ.26ರಂದು ರಾತ್ರಿ ಮಂಗಳೂರು ನಗರದ ಮಧ್ಯಭಾಗದಲ್ಲೆ ನಡೆದಿದೆ. ನಗರದ ಹಂಪನಕಟ್ಟೆಯ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫ ಎಂಬವರನ್ನು ದುಷ್ಕರ್ಮಿಗಳು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1,650 ಗ್ರಾಂ ಚಿನ್ನದ ಗಟ್ಟಿಯನ್ನು ದೋಚಿದ್ದು, ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8.30ರ ವೇಳೆಗೆ ಅಂಗಡಿಯಿಂದ ವಾರದಲ್ಲಿ ಶೇಖರಣೆಯಾದ ಸುಮಾರು 1.5…

Read More

ಪುತ್ತೂರು: ಅತ್ಯಾಚಾರ-ವಂಚನೆ ಪ್ರಕರಣ- ಶ್ರೀಕೃಷ್ಣ ಜೆ. ರಾವ್‌ ಮಗುವಿನ ತಂದೆ- ಡಿಎನ್‌ಎ ವರದಿ ಬಹಿರಂಗ

ಪುತ್ತೂರು: ವಿವಾಹದ ಭರವಸೆ ನೀಡಿ ಅತ್ಯಾಚಾರ ಎಸಗಿ, ಗರ್ಭಿಣಿಯಾದ ಬಳಿಕ ಯುವತಿಯನ್ನು ವಂಚಿಸಿದ್ದ ಪ್ರಕರಣಕ್ಕೆ ಇದೀಗ ಮಹತ್ವದ ತಿರುವು ಲಭಿಸಿದೆ. ಬಿಜೆಪಿ ನಾಯಕನ ಪುತ್ರ ಆರೋಪಿ ಶ್ರೀಕೃಷ್ಣ ಜೆ. ರಾವ್‌ ಅವರೇ ಮಗುವಿನ ತಂದೆ ಎಂದು ಡಿಎನ್‌ಎ ಪರೀಕ್ಷಾ ವರದಿಯಿಂದ ಸ್ಪಷ್ಟಗೊಂಡಿದೆ.ಶನಿವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಅವರು ಈ ಡಿಎನ್‌ಎ ವರದಿಯ ಮಾಹಿತಿಯನ್ನು ಅಧಿಕೃತವಾಗಿ ಬಹಿರಂಗಪಡಿಸಿದರು. ವರದಿಯಲ್ಲಿ ಮಗುವಿನ ಮತ್ತು ಆರೋಪಿ ಶ್ರೀಕೃಷ್ಣನ ರಕ್ತದ ಮಾದರಿ ಸಂಪೂರ್ಣವಾಗಿ ಹೊಂದಿಕೆಯಾಗಿದೆ…

Read More

ಮಂಗಳೂರು: ಗಾಂಜಾ ಮಾರಾಟಕ್ಕೆ ಇಳಿದ ಕೇರಳದ ವಿದ್ಯಾರ್ಥಿಗಳು : 11 ಮಂದಿ ಅರೆಸ್ಟ್

ಮಂಗಳೂರು: ಮಂಗಳೂರು ದಕ್ಷಿಣ ಠಾಣಾ ಪೊಲೀಸ್‌ಗಳು ಶನಿವಾರ (ಸೆಪ್ಟೆಂಬರ್ 26) ಸಂಜೆ ದೊಡ್ಡ ಮಟ್ಟದ ಮಾದಕ ವಸ್ತು ದಾಳಿ ನಡೆಸಿ 12.2 ಕೆ.ಜಿ ಗಾಂಜಾ ವಶಪಡಿಸಿಕೊಂಡಿದ್ದು, 11 ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಸಂಜೆ 7.45ರ ಸುಮಾರಿಗೆ ದಕ್ಷಿಣ ಠಾಣಾ ಅಪರಾಧ ಪತ್ತೆ ಸಿಬ್ಬಂದಿಗಳಿಗೆ ಕೇರಳ ಮೂಲದ ಕೆಲವರು ಅತ್ತಾವರ ಕಾಪ್ರಿಗುಡ್ಡೆಯ ಕಿಂಗ್ಸ್ ಕೋರ್ಟ್ ಅಪಾರ್ಟ್‌ಮೆಂಟ್‌ನ ಪ್ಲಾಟ್ ನಂ. G1ರಲ್ಲಿ ವಾಣಿಜ್ಯ ಪ್ರಮಾಣದ ಗಾಂಜಾ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ಉಪನಿರೀಕ್ಷಕ ಶೀತಲ್…

Read More

ಉಳ್ಳಾಲ: ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಳ್ಳಾಲ: ಕಡಲ ತೀರದಲ್ಲಿ ಮೀನಿಗೆಂದು ಗಾಳ ಹಾಕುತ್ತಿದ್ದ ತಂಡವೊಂದಕ್ಕೆ ಕಲ್ಲುಗಳ ಮಧ್ಯೆ ಕೊಳೆತ ಮೃತದೇಹ ಸಿಲುಕಿರುವುದು ಗೋಚರಿಸಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಶಿವಾಜಿ ಜೀವರಾಕ್ಷಕ ಈಜುಗಾರರ ಸದಸ್ಯರಿಗೆ ಮಾಹಿತಿ ನೀಡಿದ್ದರು. ಉಳ್ಳಾಲ ಮೊಗವೀರಪಟ್ನ ಶಿವಾಜಿ ಜೀವ ರಕ್ಷಕ ಈಜುಗಾರರ ಸಂಘದ ಸದಸ್ಯರು ಕೊಳೆತ ಸ್ಥಿತಿಯಲ್ಲಿದ್ದ ಮೃತದೇಹವನ್ನು ಹೆಗಲ ಮೇಲೆ ಇಟ್ಟುಕೊಂಡು 3-4 ಕಿ.ಮೀ ದೂರ ಎತ್ತಿಕೊಂಡು ಸಾಗಿ ಆಂಬುಲೆನ್ಸ್ ವಾಹನಕ್ಕೆ ತಲುಪಿಸುವ ಮೂಲಕ ಮಾನವೀಯತೆ ಮೆರೆದು ಪೊಲೀಸರಿಗೆ ಸಹಕರಿಸಿದ್ದಾರೆ. ಸುಮಾರು 40-45…

Read More

ಧರ್ಮಸ್ಥಳ ಪ್ರಕರಣ : ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಹೇಳಿದ ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ

 ಧರ್ಮಸ್ಥಳ ಬುರುಡೆ ಕೇಸ್​ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೋಹಂತಿ ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದರು. ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ಅವರು ಧರ್ಮಸ್ಥಳ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದರು. ಇನ್ನು ಈ ಪ್ರಕರಣದ ಕುರಿತು, ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ,…

Read More

ಬಂಟ್ವಾಳ: ಅಕ್ರಮ ಗಾಂಜಾ ಸಾಗಾಟ..! ಪಿಕಪ್  ಬಿಟ್ಟು ಚಾಲಕ ಪರಾರಿ

ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಹಿನ್ನೆಲೆ ಪೊಲೀಸರು ವಾಹನ ತಪಾಸಣೆಗೆ ಮುಂದಾದಾಗ ಪಿಕಪ್ ಚಾಲಕ ಪರಾರಿಯಾಗಿದ್ದಾನೆ.ಬಂಟ್ವಾಳದ ಅಬಕಾರಿ ನಿರೀಕ್ಷಕರಾದ ಲಕ್ಷ್ಮಣ್ ಅವರಿಗೆ ದಿನಾಂಕ 25-09-2025 ರಂದು ಕರ್ತವ್ಯದಲ್ಲಿದ್ದಾಗ ಸಂಜೆ 5.20 ರ ಸುಮಾರಿಗೆ ಅಬಕಾರಿ ಉಪ ಆಯುಕ್ತರು ದ.ಕ ಜಿಲ್ಲೆ ಮಂಗಳೂರು ರವರ ನಿರ್ದೇಶನದಂತೆ ಕೆಎ-70-6904 ನೇ ಬೊಲೋರೋ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮಾಧಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾರೆ ಎಂಬುವುದಾಗಿ ಮಾಹಿತಿ ಬಂದಿದೆ. ಆ ವಾಹನವನ್ನು ತಡೆದು…

Read More

ಭ್ರಷ್ಟಾಚಾರ ಪ್ರಕರಣ: ಪುತ್ತೂರು ತಹಶೀಲ್ದಾರ್ ಕೂಡಲಗಿ ಜಾಮೀನು ಅರ್ಜಿ ವಜಾ

ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ತಹಶೀಲ್ದಾರ್ ಎಸ್.ಬಿ. ಕೂಡಲಗಿ ಅವರಿಗೆ ಜಾಮೀನು ನಿರಾಕರಣೆಯಾಗಿದೆ. ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯವು ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಪುತ್ತೂರು ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಎಸ್.ಎಂ ಮತ್ತು ತಹಶೀಲ್ದಾರ್ ಎಸ್.ಬಿ. ಕೂಡಲಗಿ ವಿರುದ್ಧ ಭ್ರಷ್ಟಾಚಾರ ನಿರ್ಬಂಧಕ ಕಾಯ್ದೆ, 1988ರಡಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತ ಟ್ರ್ಯಾಪ್ ಕಾರ್ಯಾಚರಣೆ ಸಮಯದಲ್ಲಿ ಪ್ರಥಮ ದರ್ಜೆ ಸಹಾಯಕ ಸುನಿಲ್ ಕುಮಾರ್ ಅವರನ್ನು ಬಂಧಿಸಲಾಗಿತ್ತು. ಅವರು ಈಗ…

Read More

ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಆಟೊ ರಿಕ್ಷಾ ಚಾಲಕನಿಗೆ ದಂಡ

ಮಂಗಳೂರು: ರಸ್ತೆ ಸಂಚಾರಕ್ಕೆ ತಡೆಯೊಡ್ಡಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಆಟೊ ರಿಕ್ಷಾ ಚಾಲಕನಿಗೆ ದಂಡ ವಿಧಿಸಿದ ಘಟನೆ ನಗರದಲ್ಲಿ ಬುಧವಾರ ರಾತ್ರಿ ನಡೆದಿದೆ.ಸೆ.24ರಂದು ರಾತ್ರಿ 9:30ಕ್ಕೆ ಆಟೊ ರಿಕ್ಷಾ ಚಾಲಕ ಶೈಲೇಶ್ (28) ಎಂಬಾತ ಕುದ್ರೋಳಿ ದೇವಸ್ಥಾನದ ಮುಖ್ಯ ದ್ವಾರದ ಸಾರ್ವಜನಿಕ ರಸ್ತೆಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದ ಈ ಬಗ್ಗೆ ಪೊಲೀಸ್ ಸಿಬ್ಬಂದಿ ಕಾನೂನು ಉಲ್ಲಂಘನೆ ನೋಟಿಸ್‌ ದಾಖಲು ಮಾಡಿದ್ದರು. ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶೈಲೇಶ್ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದ….

Read More