ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆ ದರೋಡೆಗೆ ಯತ್ನ- ಇಬ್ಬರು ಆರೋಪಿಗಳ ಬಂಧನ
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಎ.ವಿ ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿರುವ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರಿನ ಮುಡೂರು ನಿವಾಸಿ ಕಾರ್ತಿಕ್ ರಾವ್ (31), ಪತ್ನಿ ಕೆ.ಎಸ್.ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಆರೋಪಿ ಕಾರ್ತಿಕ್ ರಾವ್ ಸಹಾಯಕ ಅರ್ಚಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಡಿ. 17 ರ ಮಧ್ಯರಾತ್ರಿ ಹೆಲ್ಮೆಟ್ ಧರಿಸಿದ್ದ ಇಬ್ಬರು ಅಪರಿಚಿತರು ಪುತ್ತೂರು ಕಸಬಾ ನಿವಾಸಿ, ನಿವೃತ್ತ ಪ್ರಾಂಶುಪಾಲರಾದ ಎ.ವಿ.ನಾರಾಯಣ (84) ಎಂಬುವವರ ಮನೆಗೆ…

