ಪುತ್ತೂರು: ಮೆದುಳು ನಿಷ್ಕ್ರೀಯಗೊಂಡ ಯುವತಿಯ ಅಂಗಾಂಗ ದಾನ ಮಾಡಿದ ಕುಟುಂಬ
ಪುತ್ತೂರು: ಮೆದುಳಿನ ರಕ್ತಸ್ರಾವದಿಂದಾಗಿ ಮೃತಪಟ್ಟ ಯುವತಿಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬ ಬೇರೆ ಕುಟುಂಬಗಳ ಪಾಲಿಗೆ ಬೆಳಕಾಗಿ ಮಾನವೀಯತೆ ಮೆರೆದಿದೆ. ಸುಳ್ಯದ ರಥಬೀದಿ ನಿವಾಸಿ ಸಿಂಧೂ ಎಂಬ ಯುವತಿ ಪುತ್ತೂರು ಆದರ್ಶ ಸೊಸೈಟಿಯಲ್ಲಿ ಕೆಲಸ ಮಾಡುತ್ತಿದ್ದರು. ಡಿ. 16 ರಂದು ಪುತ್ತೂರಿನಿಂದ ಸುಳ್ಯಕ್ಕೆ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಬಸ್ಸಿನ ಸೀಟಿನಿಂದ ಜಾರಿ ಬಿದ್ದಿದ್ದರು. ತಕ್ಷಣವೇ ಅವರಿಗೆ ಸುಳ್ಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ನರಕ್ಕೆ ಸಮಸ್ಯೆ ಉಂಟಾಗಿದ್ದ ಕಾರಣದಿಂದ ಸುಳ್ಯದ ಆಸ್ಪತ್ರೆಯಿಂದ ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ…

